ತುರ್ತು ಬರ ಪರಿಹಾರ ಕಾಮಗಾರಿಗೆ ಒತ್ತಾಯ


Team Udayavani, Nov 25, 2018, 10:47 AM IST

gul-4.jpg

ಕಲಬುರಗಿ: ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ತಾಲೂಕುಗಳಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಘೋಷಿತ ಆರು ತಾಲೂಕುಗಳಲ್ಲಿ ಬರ ಪರಿಹಾರ ಕಾಮಗಾರಿ ಆರಂಭಿಸಬೇಕು, ಬರ ಪರಿಹಾರಕ್ಕೆ ಎಕರೆಗೆ 10 ಸಾವಿರ ರೂ. ನೀಡಬೇಕು, ಕೂಲಿಕಾರರು ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಇರುವ ತೊಂದರೆ ನಿವಾರಿಸಬೇಕು, ವರ್ಷಕ್ಕೆ 100 ದಿನಗಳ ಬದಲು ಬರಗಾಲದ ಅಂಗವಾಗಿ ಕೆಲಸದ ಮಿತಿ ತೆಗೆದುಹಾಕಬೇಕು, ಕೂಲಿಕಾರರು ಕೇಳಿದ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ಬರದ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಪಟ್ಟಣಗಳಿಗೂ ವಿಸ್ತರಿಸಿ ಅಲ್ಲಿನ ಕೂಲಿಕಾರರಿಗೂ ಕೆಲಸ ನೀಡಬೇಕು. ಜಾನುವಾರುಗಳಿಗೆ ಗ್ರಾ.ಪಂ. ಮಟ್ಟದಲ್ಲಿ ಮೇವು ಬ್ಯಾಂಕ್‌ ತೆರೆಯಬೇಕು, ಕುಡಿಯುವ ನೀರು ಒದಗಿಸಬೇಕೆಂದು ಆಗ್ರಹಿಸಿದರು.

ರಾಜ್ಯ ಸರ್ಕಾರ 2 ಲಕ್ಷ ರೂ.ಗಳ ರೈತರ ಸಾಲ ಮನ್ನಾ ಮಾಡಿದ್ದು, ಉಳಿದ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರದ ಫಸಲ್‌ ವಿಮಾ ಯೋಜನೆ ವಿಮಾ ಕಂಪನಿಗಳ ಪರವಾಗಿದ್ದು, ಅದರ ಬದಲು ರಾಜ್ಯ ಸರ್ಕಾರ ಪರ್ಯಾಯ ಬೆಳೆ ವಿಮೆ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿದರು.

ಡಾ| ಸ್ವಾಮಿನಾಥನ್‌ ವರದಿಯಂತೆ ತೊಗರಿಗೆ 7500ರೂ. ಗಳ ಬೆಂಬಲ ಬೆಲೆ ನಿಗದಿಪಡಿಸಬೇಕು, ಕೇಂದ್ರ ಸರ್ಕಾರ ಶೇ.25 ರಷ್ಟು ಕೋಟಾ ನಿಗದಿಪಡಿಸಿದ್ದು, ರೈತರು ಬೆಳೆದ ಬೆಳೆ ಖರೀದಿ ಮಾಡಲು ಕಾನೂನು ರೂಪಿಸುವಂತೆ ಒತ್ತಾಯಿಸಿದರು. ರಾಜ್ಯ ಸರ್ಕಾರ ಕಳೆದ ವರ್ಷದಂತೆ ಈ ವರ್ಷವೂ ಪ್ರತಿ ಕ್ವಿಂಟಲ್‌ಗೆ 600 ರೂ. ಬದಲು 1000 ರೂ. ಪ್ರೋತ್ಸಾಹ ಧನ ನೀಡಬೇಕು. ಗ್ರಾ.ಪಂ. ಮಟ್ಟದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಆಗ್ರಹಿಸಿದರು.
 
ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಅಶೋಕ ಮ್ಯಾಗೇರಿ, ಶಾಂತಪ್ಪ ಪಾಟೀಲ, ಮಲ್ಲಣ್ಣಗೌಡ ಬನ್ನೂರ, ಸುಭಾಷ ಹೊಸ್ಮನಿ, ಪಾಂಡುರಂಗ ಮಾವಿನಕರ, ಸಿದ್ದಯ್ಯ ಸ್ವಾಮಿ, ಗೌರಮ್ಮ ಪಾಟೀಲ, ಸುಧಾಮ ಧನ್ನಿ ಹಾಗೂ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು

Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.