ಸೇವಾ ಭದ್ರತೆ-ಸಮಾನ ವೇತನಕ್ಕೆ ಒತ್ತಾಯ
Team Udayavani, Oct 26, 2018, 11:34 AM IST
ಕಲಬುರಗಿ: ರಾಷ್ಟ್ರೀಯ ಆರೋಗ್ಯ ಮಿಷನ್ ಹಾಗೂ ಇತರ ಆರೋಗ್ಯ ಕಾರ್ಯಕ್ರಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ದೇಶವ್ಯಾಪಿ ಹಮ್ಮಿಕೊಂಡಿದ್ದ ಒಂದು ದಿನದ ಆಂದೋಲನದ ಭಾಗವಾಗಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಸಾವಿರಾರು ಗುತ್ತಿಗೆ ನೌಕರರು
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆರೋಗ್ಯ ಇಲಾಖೆಯ ಎಲ್ಲ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ವೇದಿಕೆ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು.
ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತಷ್ಟು ಬಲಪಡಿಸುವ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್‌ನ್ನು ಶೇ.15ಕ್ಕೆ ಏರಿಸಬೇಕು. ಇದಕ್ಕೆ ಅಗತ್ಯ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರ ಒದಗಿಸಬೇಕು. ಆರೋಗ್ಯ ಇಲಾಖೆಯಲ್ಲಿ ಕಾಯಂ ನೌಕರರ ಸಂಖ್ಯೆಗಿಂತ ಗುತ್ತಿಗೆ ನೌಕರರ ಸಂಖ್ಯೆಯೇ ಅಧಿಕವಾಗಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಮಾದರಿಯಲ್ಲಿ ಆರೋಗ್ಯ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಕಾಯ್ದೆ ಜಾರಿಗೆ ತರಬೇಕು. ಈ ಮೂಲಕ ಎಲ್ಲ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಕ್ರಮಕೈಗೊಳ್ಳಬೇಕು. ಜತೆಗೆ ಹರಿಯಾಣ ಮಾದರಿಯಲ್ಲಿ ವೇತನ ಮತ್ತು ಭತ್ಯೆ ನೀಡುವ ನೀತಿಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಸರ್ಕಾರಿ ನೌಕರರಿಗೆ ನೀಡುವ “ಜ್ಯೋತಿ ಸಂಜೀವಿನಿ’ ವೈದ್ಯಕೀಯ ಯೋಜನೆ ಸೌಲಭ್ಯ ಆರೋಗ್ಯ ಇಲಾಖೆಯಲ್ಲಿಯೇ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ಇಲ್ಲವಾಗಿದ್ದು, ಗುತ್ತಿಗೆ ನೌಕರರಿಗೂ ಈ ಯೋಜನೆ ಜಾರಿಗೆ ತರಬೇಕು. ನೇಮಕಾತಿಯಲ್ಲಿ ವಯಸ್ಸಿನ ಮಿತಿ ವಿಸ್ತರಿಸಬೇಕು ಹಾಗೂ ಸೇವಾ ಅನುಭವಕ್ಕೆ ತಕ್ಕಂತೆ ಸೇವಾಂಕ ನೀಡಬೇಕೆಂದು ಆಗ್ರಹಿಸಿದರು.
ಈ ಹಿಂದೆ ಸೇವಾ ಭದ್ರತೆ ಇಲ್ಲದ ಕಾರಣ ಹಲವರನ್ನು ತೆಗೆದು ಹಾಕಲಾಗಿದ್ದು, ಅವರನ್ನು ಪುನಃ ನೇಮಕ ಮಾಡಿಕೊಳ್ಳಬೇಕು. ಗ್ರಾಮೀಣ ಸೇವೆ, ಎಚ್‌ಐವಿ, ಟಿಬಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರು, ಆ್ಯಂಬುಲೆನ್ಸ್ ವಾಹನ ಚಾಲಕರು, ಡಿ ಗ್ರೂಪ್ ನೌಕರರಿಗೆ ವಿಶೇಷ ಭತ್ಯೆ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಂತರ ಕಚೇರಿ ಎದುರುಗಡೆಯ ಐವಾನ್ ಶಾಹಿ ರಸ್ತೆಯಲ್ಲಿ ಗುತ್ತಿಗೆ ನೌಕರರು ಸಂಜೆ 5 ಗಂಟೆ ವರೆಗೆ ಸಾಂಕೇತಿಕವಾಗಿ ಧರಣಿ ಕುಳಿತರು. ನೌಕರರ ವೇದಿಕೆಯ ಕಲಬುರಗಿ ಶಾಖೆ ಅಧ್ಯಕ್ಷ ಶ್ರೀಕಾಂತ ನೇತೃತ್ವದಲ್ಲಿ ಜಿಲ್ಲೆಯ 400 ಜನ ಸ್ಟಾಫ್ ನರ್ಸ್‌ಗಳು, 200 ಜನ ಆಪ್ತ ಸಮಾಲೋಚಕರು, 100 ಜನ ಲ್ಯಾಬ್ ಸಿಬ್ಬಂದಿ, 50 ಕಿರಿಯ ಆರೋಗ್ಯ ಸಹಾಯಕಿಯರು ಸೇರಿದಂತೆ ಸುಮಾರು
950 ಸಿಬ್ಬಂದಿ ಧರಣಿಯಲ್ಲಿ ಪಾಲ್ಗೊಂಡಿದ್ದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರು ಧರಣಿಗೆ ಬೆಂಬಲ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.