ತೊಗರಿ ಖರೀದಿಗೆ ರೈತರ ಒತ್ತಾಯ
Team Udayavani, May 24, 2017, 5:02 PM IST
ಆಳಂದ: ಬಾಕಿ ಉಳಿದ ರೈತರ ತೊಗರಿ ಖರೀದಿ ಮಾಡಬೇಕು. ಸಾಲಮನ್ನಾ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ವಿವಿಧ ರೈತಪರ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ರೈತರು ಪ್ರತಿಭಟನೆ ಕೈಗೊಂಡು ಸರ್ಕಾರವನ್ನು ಒತ್ತಾಯಿಸಿದರು.
ನೇಗಿಲಯೋಗಿ ಒಕ್ಕೂಟದ ಅಧ್ಯಕ್ಷ ಬಸವರಾಜ ಪವಾಡಶೆಟ್ಟಿ, ಕಿಸಾನ ಮತ್ತು ಕೃಷಿ ಕಾರ್ಮಿಕ ಘಟಕದ ಜಿಲ್ಲಾ ಕಾರ್ಯದರ್ಶಿ ರವಿಂದ್ರ ಪಾಟೀಲ, ಎಐಕೆಎಸ್ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಕೂಡಲೇ ತೊಗರಿ ಖರೀದಿಸಿ ರೈತರಿಗೆ ಅನುಕೂಲ ಮಾಡಬೇಕು ಎಂದು ಆಗ್ರಹಿಸಿದರು.
ರೈತರ ಸಾಲಮನ್ನಾ ಮಾಡಿ. ಸಕಾಲಕ್ಕೆ ಹೊಸ ಸಾಲವನ್ನು ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಪ್ಯಾಕೇಜ್ ರೂಪದಲ್ಲಿ ನೀಡಿ. ಬೆಳೆ ವಿಮೆ ಬಿಡುಗಡೆಯಲ್ಲಿ ಆದ ತಾರತಮ್ಯ ಸರಿಪಡಿಸಿ ಅನ್ಯಾಯವಾದ ರೈತರಿಗೆ ನ್ಯಾಯ ಒದಗಿಸಿ. ಎಲ್ಲ ವಿಮೆ ಮೊತ್ತವನ್ನು ಬಿಡುಗಡೆ ಮಾಡಬೇಕು. ಬಿತ್ತನೆ ಬೀಜ, ಗೊಬ್ಬರವನ್ನು ಸಕಾಲಕ್ಕೆ ವಿತರಣೆ ಮಾಡಿ ಎಂದು ಒತ್ತಾಯಿಸಿದರು.
ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಎಸ್.ಡಿ. ಸಾಗರಶೆಟ್ಟಿ, ಕಲ್ಯಾಣಿ ಅವುಟೆ, ಶ್ರೀಶೈಲ ಚಚಕೋಟಿ, ಕಲ್ಯಾಣಿ ಮಲಶೆಟ್ಟಿ, ಚಂದ್ರಕಾಂತ ಖೋಬ್ರೆ ಹಾಗೂ ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.