ಬಾಲರಾಜ ಬ್ರಿಗೇಡ್‌ನಿಂದ ಉಚಿತ ಆರೋಗ್ಯ ಶಿಬಿರ
Team Udayavani, Jul 14, 2022, 3:13 PM IST
ಸೇಡಂ: ವಿನೂತನ ಸಮಾಜಮುಖೀ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಬಾಲರಾಜ ಬ್ರಿಗೇಡ್ ಮುಂಬರುವ ದಿನಗಳಲ್ಲಿ ವಿಧಾನಸಭೆ ಕ್ಷೇತ್ರದ 133 ಹಳ್ಳಿಗಳಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಲು ಮುಂದಾಗಿದೆ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಹೇಳಿದರು.
ತಾಲೂಕಿನ ಮೋತಕಪಲ್ಲಿ ಗ್ರಾಮದ ಶ್ರೀ ಬಲಭೀಮಸೇನ ದೇವಾಲಯದ ಕಲ್ಯಾಣ ಮಂಟಪದಲ್ಲಿ ಶಾರದಾ ಚಾರಿಟೇಬಲ್ ಟ್ರಸ್ಟ್, ಬಾಲರಾಜ ಬ್ರಿಗೇಡ್ ಫೌಂಡೇಷನ್ ಸೇಡಂ ಹಾಗೂ ಯುನೈಟೆಡ್ ಆಸ್ಪತ್ರೆ ಕಲಬುರಗಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಳ್ಳಿ ಹಳ್ಳಿಯಲ್ಲಿ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ನಿರಂತರವಾಗಿ ಜನತೆಯ ಸೇವೆಗಾಗಿ ಮೀಸಲಿರಿಸಲಾಗಿದೆ. ಕೊರೊನಾದಂತ ಮಹಾಮಾರಿಯ ಸಂದರ್ಭದಲ್ಲಿಯೂ ಸೇವೆ ಮಾಡಿದ್ದೇವೆ. ಈಗ ಪ್ರತಿ ಹಳ್ಳಿಯಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸುವ ಮೂಲಕ ಜನಸೇವೆಗೆ ಮುಂದಾಗಿದ್ದೇವೆ ಎಂದರು.
ಬಾಲರಾಜ ಬ್ರಿಗೇಡ್ ಅಧ್ಯಕ್ಷ ಶಿವಕುಮಾರ ನಿಡಗುಂದಾ, ಗೋವರ್ಧನರೆಡ್ಡಿ ಮೋತಕಪಲ್ಲಿ, ವೆಂಕಟರೆಡ್ಡಿ ಗಾಡದಾನ, ಪರಮಾರೆಡ್ಡಿ ಶಕ್ಲಾಸಪಲ್ಲಿ, ಮುಖಂಡರಾದ ಹಣಮಯ್ಯ ಗುತ್ತೇದಾರ, ಬಸಯ್ಯ ಗೌಡ್ಸ್, ಪರಮೇಶ್ವರ ಪಾಟೀಲ, ಸೇವ್ಯಾನಾಯಕ, ಮಹೇಶ ಹೂಗಾರ, ಜಗನ್ನಾಥ, ಉದಯ ಕೋಲಕುಂದಾ, ಭೀಮಶಪ್ಪ, ಲಕ್ಷ್ಮೀಕಾಂತ, ಭೀಮು, ಸಿದ್ದು, ಸುದರ್ಶನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.