ಕಾಂಗ್ರೆಸ್ ನಿಂದ ಭಾರತಕ್ಕೆ ಸ್ವಾತಂತ್ರ್ಯ
Team Udayavani, Dec 30, 2017, 11:32 AM IST
ವಾಡಿ: ಭಾರತ ಸ್ವಾತಂತ್ರ್ಯ ಚಳವಳಿಗೆ ಮುನ್ನುಡಿ ಬರೆದ ಕಾಂಗ್ರೆಸ್ ಪಕ್ಷ, ಸ್ವಾತಂತ್ರ್ಯ ನಂತರ ದೇಶದ ಪ್ರಗತಿಗೆ ಶ್ರಮಿಸಿದ ಜನಪರ ರಾಷ್ಟ್ರೀಯ ಪಕ್ಷವಾಗಿದೆ ಎಂದು ವಾಡಿ-ಶಹಾಬಾದ ನಗರ ಯೋಜನೆ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಚಂದ್ರಸೇನ ಮೇನಗಾರ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಭಾರತೀಯ ಕಾಂಗ್ರೆಸ್ ಪಕ್ಷದ 133ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
1885 ರಲ್ಲಿ ಭಾರತೀಯ ಕಾಂಗ್ರೆಸ್ ಸ್ಥಾಪನೆಯಾಗಿ ದೇಶದ ಆಡಳಿತ ಚುಕ್ಕಾಣಿ ಹಿಡಿಯುವ ಮೂಲಕ ಬಡವರ, ಶೋಷಿತರ, ಅಲ್ಪಸಂಖ್ಯಾತರ ಹಾಗೂ ದೀನ ದಲಿತರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಗೆ ಶ್ರಮಿಸಿದೆ.
ಬ್ರಿಟೀಷರ ಆಡಳಿತದಲ್ಲಿ ಸಂಘಟನಾ ಸಾಮರ್ಥ್ಯದ ಮೂಲಕ ಜನಜಾಗೃತಿಗೆ ಮುಂದಾಗಿ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಯಶಸ್ವಿಯಾಯಿತು. ಅದರ ಪರಿಣಾಮವಾಗಿ ನಾವಿಂದು ಸ್ವಾತಂತ್ರ್ಯ ಪಡೆದು ಬದುಕಲು ಸಾಧ್ಯವಾಗಿದೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ಮಹೆಮೂದ್ ಸಾಹೇಬ ಮಾತನಾಡಿ, ಭಾರತದಲ್ಲಿ
ಪ್ರಜಾಪ್ರಭುತ್ವವ ಸಿದ್ಧಾಂತದಡಿ ಆಡಳಿತ ನೀಡುವ ಮೂಲಕ ಎಲ್ಲ ವರ್ಗದ ಜನರನ್ನು ಒಟ್ಟಾಗಿ ಕರೆದೊಯ್ಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ. ಜನಪರ ಆಡಳಿತ ಮತ್ತು ತಳ ಸಮುದಾಯಗಳ ಪ್ರಗತಿ ಪಕ್ಷದ ಮೂಲ ಸಿದ್ಧಾಂತವಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಹಿರಿಯ ಮುಖಂಡರಾದ ಬಾಬುಮಿಯ್ನಾ ಹಾಗೂ ಟೋಪಣ್ಣ ಕೋಮಟೆ ಅವರು ಪಕ್ಷದ ಸಂಸ್ಥಾಪಕ ಅಧ್ಯಕ್ಷ
ಅಲ್ಲೇನ್ ಓಕ್ಟಾವಿನ್ ಹ್ಯೂಮ್ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿದರು. ಪುರಸಭೆ ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಯುವ ಕಾಂಗ್ರೆಸ್ ತಾಲೂಕು ಕಾರ್ಯದರ್ಶಿಗಳಾದ ಚಂದ್ರಶೇಖರ ಧನ್ನೇಕರ ಹಾಗೂ ಮಲ್ಲಿಕಾರ್ಜುನ ವಸ್ತಾರಿ, ಮುಖಂಡರಾದ ಶಂಕ್ರಯ್ಯಸ್ವಾಮಿ ಮದರಿ, ಗೋಪಾಲ ರಾಠೊಡ, ಸಾಲೋಮನ್ ರಾಜಣ್ಣ, ಸುನಿತಾ ಸಾಲೋಮನ್, ನಾಗೇಂದ್ರ ಜೈಗಂಗಾ, ತುಕಾರಾಮ ರಾಠೊಡ, ವಿಜಯಕುಮಾರ ಸಿಂಗೆ, ಬಸವರಾಜ ಕೇಶ್ವಾರ, ನಾಸೀರ ಹುಸೇನ, ಫತೇಖಾನ ಫತ್ರುಮಿಯ್ಯ, ಪ್ರದೀಪ ಸಿಂಗೆ, ಸುರೇಶ ಹೇರೂರ, ಶೇಖ ಮಹೆಬೂಬ, ಸಿದ್ದು ಪೂಜಾರಿ, ಯಶ್ವಂತ ಧನ್ನೇಕರ, ಮಹಮದ್ ಕರೀಮ, ಪ್ರೇಮ ಸಿರೂರಕರ, ದಾವೂದ್ ಪಟೇಲ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.