ಫುಲೆ ಜಯಂತಿ ಸರ್ಕಾರವೇ ಆಚರಿಸಲು ಆಗ್ರಹ


Team Udayavani, Jan 4, 2018, 11:05 AM IST

gul-4.jpg

ಕಲಬುರಗಿ: ಸಾವಿತ್ರಿಬಾಯಿ ಫುಲೆ ಜನ್ಮದಿನವನ್ನು ರಾಜ್ಯ ಸರ್ಕಾರವೇ ಎಲ್ಲ ಶಾಲೆಗಳಲ್ಲಿ ಆಚರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಪ್ರೊ| ಎಸ್‌.ಜಿ. ಸಿದ್ದರಾಮಯ್ಯ ಅಧ್ಯಕ್ಷರಾಗಿರುವ ಸರ್ಕಾರಿ ಶಾಲಾ ಸಬಲೀಕರಣ ಸಮಿತಿ-2017ರ ವರದಿಯನ್ನು ಕೂಡಲೇ ಜಾರಿಗೆ ತರಬೇಕು. ಸಮಿತಿ ವರದಿಯಲ್ಲಿ ಹೇಳಿರುವ ಶಿಫಾರಸ್ಸುಗಳನ್ನು ಕೂಡಲೇ ಅನುಷ್ಠಾನಗೊಳಿಸಬೇಕು. 

ಸಾವಿತ್ರಿಬಾಯಿ ಫುಲೆಯವರ ಜೀವನ, ಸಾಧನೆ ಹಾಗೂ ಹೋರಾಟಗಳನ್ನು ಪಠ್ಯದಲ್ಲಿ ಅಳವಡಿಸಬೇಕು. ಇದೇ ವರ್ಷದಿಂದ ಮೂರು ವರ್ಷದಿಂದ ಆರು ವರ್ಷದ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು. ಹೊಸ ಶಿಕ್ಷಣ ನೀತಿ ರೂಪಿಸಲು ತಕ್ಷಣ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಹುದ್ದೆ, ಸರ್ಕಾರಿ ಸೌಲತ್ತು, ರಾಜಕೀಯ ಸ್ಥಾನಮಾನ ಪಡೆದ ಎಲ್ಲ ಕುಟುಂಬದವರು ಅವರ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವುದನ್ನು ಕಡ್ಡಾಯಗೊಳಿಸಬೇಕು.

ಶಿಕ್ಷಣದ ಖಾಸಗೀಕರಣದ ಎಲ್ಲಾ ವಿಧಾನಗಳನ್ನು ಕೈಬಿಡಬೇಕು. ಕನ್ನಡ ಭಾಷಾ ಮಾಧ್ಯಮದವರಿಗೆ ಪ್ರಾಥಮಿಕ ಹಂತದಿಂದಲೇ ಉತ್ತಮ ಇಂಗ್ಲಿಷ ಭಾಷಾ ಕಲಿಕೆಯನ್ನು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಗೊಳಿಸಬೇಕು. ಭೀಮಾ ಕೋರೆಗಾಂವ ವಿಜಯೋತ್ಸವದಲ್ಲಿ ದಲಿತನನ್ನು ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಿ, ಗಡಿಪಾರು ಮಾಡಬೇಕು. ಹಾನಿಗೊಳಗಾದ ವಾಹನ, ಹತ್ಯೆಗೊಳಗಾದ ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ರೂ. ಗಳ ಪರಿಹಾರ ವಿತರಿಸಬೇಕು. ಸಂಘಟನೆಗಳಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಶ್ರೀರಾಮ ಸೇನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಸಮಿತಿಯ ವಿಭಾಗಿಯ ಸಂಚಾಲಕ ಅರ್ಜುನ ಗೊಬ್ಬೂರ, ಸಂಜೀವಕುಮಾರ ಜವಳಕರ, ಗೋಪಾಲ ರಾಂಪೂರೆ, ಬಾಬುರಾವ ಶೆಳ್ಳಗಿ, ಶ್ರೀಹರಿ ಕರಕಳ್ಳಿ, ಪಾಂಡುರಂಗ ಧನ್ನಿ, ಮಾರುತಿ ಹುಳಗೊಳಕರ, ವಿಜಯಕುಮಾರ ಅಂಕಲಗಿ, ಮಾರುತಿ ಮಾಳಗಿ, ಶಿವಕುಮಾರ ಗುತ್ತೇದಾರ, ಶ್ರೀನಿವಾಸ ಖೇಳಗಿ, ಮಹಾಂತೇಶ ದೊರೆ, ಅಶೋಕ ಸಂಗೀತಕರ, ಮಲ್ಲಿಕಾರ್ಜುನ ಗಂವಾರ, ಸೋಮಶೇಖರ ಬೆಡಗಪಳ್ಳಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.