ಗಡಿಕೇಶ್ವಾರ: ಬಾಲಕರ ವಸತಿ ನಿಲಯಕ್ಕಿಲ್ಲ ಮೂಲ ಸೌಕರ್ಯ
Team Udayavani, Sep 1, 2017, 11:20 AM IST
ಚಿಂಚೋಳಿ: ಸೇಡಂ ವಿಧಾನಸಭಾ ಮತಕ್ಷೇತ್ರಕ್ಕೆ ಒಳಪಟ್ಟಿರುವ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯಗಳಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ತಾಲೂಕಿನ ಗಡಿಕೇಶ್ವಾರ, ತೇಗಲತಿಪ್ಪಿ, ಕೆರೋಳಿ, ಭಂಟನಳ್ಳಿ, ಕುಪನೂರ, ಹಲಚೇರಾ, ಹೊಡೇಬೀರನಳ್ಳಿ ಗ್ರಾಮಗಳಲ್ಲಿ ಮೆಟ್ರಿಕ್ ಪೂರ್ವ ಶಾಲೆಯಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ವಸತಿ ನಿಲಯವನ್ನು 2001-02ರಲ್ಲಿ ಪ್ರಾರಂಭಿಸಲಾಗಿದೆ. ಗಡಿಕೇಶ್ವಾರ ಸರಕಾರಿ ಪ್ರೌಢಶಾಲೆ
ಪಕ್ಕದಲ್ಲಿಯೇ ಇರುವ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳೇ ಇಲ್ಲದಿರುವುದರಿಂದ ವಿದ್ಯಾರ್ಥಿಗಳು
ತೊಂದರೆ ಪಡುವಂತಾಗಿದೆ. ವಸತಿ ನಿಲಯದಲ್ಲಿ ಪ್ರಾರಂಭದಲ್ಲಿಯೇ ಶುದ್ಧ ಕುಡಿಯುವ ನೀರು ಪೊರೈಕೆ ಇಲ್ಲ. ಸ್ನಾನಕ್ಕಾಗಿ ಬಿಸಿ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಮಕ್ಕಳು ದಿನನಿತ್ಯ ತಣ್ಣೀರಿನಿಂದಲೇ ಸ್ನಾನ ಮಾಡುತ್ತಿದ್ದಾರೆ. ಅಲ್ಲದೇ ಮಕ್ಕಳಿಗೆ ಶೌಚಾಲಯ ನಿರ್ಮಿಸಿಕೊಟ್ಟಿಲ್ಲ. ಹೀಗಾಗಿ ಬಯಲು ಬಹಿರ್ದೆಸೆಗೆ ಹೊರಗೆ ಹೋಗಬೇಕಾಗಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಜಿಪಂ ವತಿಯಿಂದ ಮಂಚ, ಹಾಸಿಗೆ ಸರಬರಾಜು ಮಾಡಲಾಗಿದೆ. ಇವುಗಳೆಲ್ಲ ಕಳಪೆಮಟ್ಟದಿಂದ ಕೂಡಿವೆ. ಬೆಡ್ ಗಳು ಹರಿದಿವೆ. ನಿಲಯದಲ್ಲಿ ವಿದ್ಯುತ್ ದೀಪ, ಫ್ಯಾನ್‌ಗಳಿಲ್ಲ. ವಿಪರೀತ ಸೊಳ್ಳೆ ಕಾಟವೂ ಇದೆ. ಇದರಿಂದ ರಾತ್ರಿ ಮಲಗಲೂ ಸಾಧ್ಯವಾಗುತ್ತಿಲ್ಲ. ಬೆಳಗಿನ ಉಪಹಾರದೊಂದಿಗೆ ಬಾಳೆಹಣ್ಣು, ತತ್ತಿಯನ್ನು ಕೊಡುತ್ತಿಲ್ಲ. ಮೇಲ್ವಿಚಾರಕರಿಗೆ ಕೇಳಿದರೆ ಇನ್ನು ಗುತ್ತಿಗೆದಾರ ಸರಬರಾಜು ಮಾಡಿಲ್ಲವೆಂದು ಬೆದರಿಸುತ್ತಾರೆ. ಬಾಗಿಲು ಕಿಟಕಿ ಮುರಿದು ಹೋಗಿವೆ, ಮಳೆ-ಚಳಿ ಎನ್ನದೇ
ಹಾಗೆಯೇ ಮಲಗಬೇಕಾಗಿದೆ ಎಂದು ದೂರಿದ್ದಾರೆ.
ವಸತಿ ನಿಲಯದ ಮಕ್ಕಳಿಗೆ ತಿಳಿ ಬೇಳೆ ಸಾರು, ಅರೆ ಬೆಂದ ರೊಟ್ಟಿ, ಕೊಳೆತ ತರಕಾರಿಗಳಿಂದ ಮಾಡಿದ ತರಕಾರಿ ಊಟಕ್ಕೆ ನೀಡಲಾಗುತ್ತಿದೆ. ನಮಗೆ ಇಲ್ಲಿ ವಾಸವಾಗಲು ಮನಸ್ಸಿಲ್ಲ. ರಾತ್ರಿ ಕಾವಲುಗಾರ ಇಲ್ಲದೇ ತುಂಬ ಭಯವಾಗುತ್ತಿದೆ. ಈ ಕುರಿತು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೆ ಕಳೆದ ವಾರ ದೂರು ಸಲ್ಲಿಸಲಾಗಿದೆ. ಆದರೂ ಯಾವುದೇ ಯೋಜನವಾಗಿಲ್ಲ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ|ಶರಣಪ್ರಕಾಶಪಾಟೀಲ ಅವರಿಗೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.