ಗೈರಾಣಿ ಜಮೀನು ಪಾಲಿಕೆಗೆ ಹಸ್ತಾಂತರಿಸಿ
Team Udayavani, Jan 25, 2019, 6:40 AM IST
ಕಲಬುರಗಿ: ತಾಲೂಕಿನ ಕುಸನೂರ ಗ್ರಾಮದ ಹೊರವಲಯದ ಸರ್ಕಾರಿ ಗೈರಾಣಿ ಜಮೀನಿನಲ್ಲಿ ಪೌರಕಾರ್ಮಿಕರ ಗೃಹ ಭಾಗ್ಯ ಮತ್ತು ಆಶ್ರಯ ನಿವೇಶನ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಜನಜಾಗೃತಿ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ಕಳೆದ ಒಂಭತ್ತು ವರ್ಷಗಳಿಂದ ಕಲಬುರಗಿ ದಕ್ಷಿಣ, ಉತ್ತರ ಮತ ಕ್ಷೇತ್ರ ಸೇರಿದಂತೆ ಜಿಲ್ಲಾದ್ಯಂತ ಆರ್ಥಿಕ ಕಡು ಬಡವರು, ನಿವೇಶನ ರಹಿತರು ಮತ್ತು ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿರುವರರನ್ನು ಗುರುತಿಸಿ 2,500 ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು. ಮನೆಗಳ ನಿರ್ಮಾಣಕ್ಕೆ ಕುಸನೂರ ಗ್ರಾಮದ ಸರ್ವೇ ನಂ.151ರ 95 ಎಕರೆ 36 ಗುಂಟೆ ಜಾಗ ಗುರುತಿಸಿಲಾಗಿದೆ. ಇದುವರೆಗೂ ಪಾಲಿಕೆಗೆ ಜಾಗವನ್ನು ಹಸ್ತಾಂತರಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗುರುತಿಸಿದ ಜಾಗವನ್ನು ಪೌರ ಕಾರ್ಮಿಕರ ಗೃಹ ಭಾಗ್ಯ ಮತ್ತು ಆಶ್ರಯ ನಿವೇಶನ ಫಲಾನುಭವಿಗಳಿಗೆ ಹಂಚಿಕೆ ಮಡುವಂತೆ ಈ ಹಿಂದೆ ಪೌರಾಡಳಿತ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಹಿಂದೆಯೇ ಪಾಲಿಕೆಗೆ ಹಸ್ತಾಂತರಿಸಲು ಸೂಚಿಸಿದ್ದರು. ಆದರೂ, ಎರಡ್ಮೂರು ವರ್ಷಗಳಿಂದ ಈ ಕುರಿತು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸುತ್ತಿದೆ. ಕೂಡಲೇ ಸಂಬಂಧಿಸಿದ ಜಾಗವನ್ನು ಪಾಲಿಕೆಗೆ ಹಸ್ತಾಂತರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಮಿತಿ ರಾಜ್ಯ ಸಂಚಾಲಕ ರುಕ್ಕಪ್ಪ ಟಿ.ಕಾಂಬಳೆ, ಕಾರ್ಯದರ್ಶಿ ಸಿದ್ಧಾರೂಢ ದುಮ್ಮನಸೂರ, ಜಿಲ್ಲಾಧ್ಯಕ್ಷ ಅಮೀರ ಸಾಬ್ ನದಾಫ, ಜೈರಾಜ ಕಿರಣಗೀಕರ, ವಿಜಯಕುಮಾರ ಸಾವಳಗಿ, ಧರ್ಮಣ್ಣ ಪೂಜಾರಿ, ಶಿವಾಜಿ ಪಟ್ಟಣ, ಮಹಾನಂದ ಕುಮಸಿ, ನೂರ ಅಹ್ಮದ ಹಾಗೂ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.