ಗ್ರಾಮೀಣ ಮಕ್ಕಳಿಗೆ ಒಳ್ಳೆ ಶಿಕ್ಷಣ ಸಿಗಲಿ
Team Udayavani, Sep 8, 2017, 12:00 PM IST
ಕಲಬುರಗಿ: ಗ್ರಾಮೀಣ ಪ್ರದೇಶದಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕಾಗಿರುವುದು ಸರಕಾರ ಹಾಗೂ ಸಮಾಜದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳು ನಡೆಯಬೇಕು ಎಂದು ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಹೇಳಿದರು.
ಅಫಜಲಪುರ ತಾಲೂಕಿನ ಗೊಬ್ಬೂರ ಸಿದ್ಧಾರ್ಥ ಕಲಾ ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರ ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾ ಸಂಸ್ಥೆಗಳಿಗೆ ಬೆನ್ನೆಲುಬಾಗಿ ನಿಲ್ಲಬೇಕು. ಅದನ್ನು ಬಿಟ್ಟು
ಸೌಕರ್ಯ ಹಾಗೂ ಅನುದಾನ ನೀಡುವಲ್ಲಿ ತಾರತಮ್ಯಗಳನ್ನು ಮಾಡುವುದರಿಂದ ಗ್ರಾಮೀಣ ಮಕ್ಕಳಿಗೆ ಸರಿಯಾದ ಶಿಕ್ಷಣವನ್ನು ನೀಡಲು ಸಾಧ್ಯವಾಗುವುದಿಲ್ಲ ಎನ್ನುವುದನ್ನು ಮನಗಾಣಬೇಕು ಎಂದರು.
ಅತಿಥಿಯಾಗಿದ್ದ ಗುವಿವಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕ ಡಾ| ರಮೇಶ ಲಂಡನಕರ್ ಮಾತನಾಡಿ, ಯುವಕರು ಆಧುನಿಕ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಕೆ ಮಾಡುವಲ್ಲಿ ಎಡವುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಸಮುದಾಯದಿಂದ, ಶಿಕ್ಷಕರ ವರ್ಗದಿಂದ ಸರಿಯಾದ ಮಾರ್ಗದರ್ಶನ ನೀಡುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸಾಲಿಮನಿ, ಗುವಿವಿ ಸಿಂಡಿಕೇಟ್ ಸದಸ್ಯ ನಾಗೇಶ ಕೊಳ್ಳಿ ಮಾತನಾಡಿ, ಯುವಕರು ದೇಶದಲ್ಲಿ ಎದುರಾಗಿರುವ ಪರಿಸ್ಥಿತಿ ಅರ್ಥ ಮಾಡಿಕೊಂಡು ನಡೆಯುವುದನ್ನು ಹಾಗೂ ದೇಶಾಭಿಮಾನ ರೂಢಿಸಿಕೊಳ್ಳುವುದನ್ನು ಕಲಿಯಬೇಕಿದೆ. ಈ ನಿಟ್ಟಿನಲ್ಲಿ ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಬೇಕಾದ ಅಗತ್ಯವಿದೆ ಎಂದರು.
ಉಪನ್ಯಾಸಕರಾದ ಅಶೋಕ ಮಂಗಲಗಿ, ಸಾವಿತ್ರಿ ಬಿಲ್ವಾಡ್, ರಮಾ ಕಡಗಂಚಿ, ಯಂಕಪ್ಪ ಇಟಗಿ, ದಯಾನಂದ
ದೊಡ್ಡಮನಿ, ವಿಶ್ವನಾಥ ಕಾರ್ನಾಡ, ನಾಗರಾಜ ದೇವತ್ಕಲ್, ಶರಣಬಸವಪ್ಪ, ಬಾಬು ನವಲೇಕರ್, ಬಾಬು ಪೂಜಾರಿ
ಉಪಸ್ಥಿತರಿದ್ದರು.
ಪ್ರಾಂಶುಪಾಲ ಉದಯಕುಮಾರ ವಾಡೇಕರ್ ಸ್ವಾಗತಿಸಿದರು. ಚಂದ್ರಕಾಂತ ಸಿಂಘೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.