ಮೂರು ತಿಂಗಳಲ್ಲಿ ಪಹಣಿ ದೋಷ ಸಮಸ್ಯೆಗೆ ಮುಕ್ತಿ
Team Udayavani, Jul 19, 2022, 1:07 PM IST
ವಾಡಿ: ಕಳೆದ ಮೂವತ್ತು ವರ್ಷಗಳಿಂದ ಪಹಣಿ ದೋಷ ಸಮಸ್ಯೆ ಮುಂದಿಟ್ಟು ನಿರಂತರವಾಗಿ ಹೋರಾಟ ನಡೆಸುತ್ತಿರುವ ಹಳಕರ್ಟಿ ಗ್ರಾಮದ ರೈತರಿಗೆ ಮೂರು ತಿಂಗಳಲ್ಲಿ ಮುಕ್ತಿ ದೊರಕಿಸಿಕೊಡುವುದಾಗಿ ಸೇಡಂ ಸಹಾಯಕ ಆಯುಕ್ತ ಎಂ.ಕಾರ್ತಿಕ್ ಭರವಸೆ ನೀಡಿದ್ದಾರೆ.
ಹಳಕರ್ಟಿ ಗ್ರಾಮದ ನೂರಾರು ರೈತರ ಒತ್ತಾಸೆಯ ಮೇರೆಗೆ ಸೋಮವಾರ ಚಿತ್ತಾಪುರ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ಸಹಾಯಕ ಆಯುಕ್ತ ಎಂ.ಕಾರ್ತಿಕ್, ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರ ಸಮ್ಮುಖದಲ್ಲಿ ವಿಶೇಷವಾಗಿ ಹಳಕರ್ಟಿ ರೈತರ ಡಬಲ್ ಪಹಣಿ ದೋಷ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಈ ವೇಳೆ ಆಯುಕ್ತರ ಗಮನ ಸೆಳೆದ ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಹೇಶ ಎಸ್.ಬಿ, ಚಿತ್ತಾಪುರ ತಾಲೂಕು ಕಾರ್ಯದರ್ಶಿ ಶಿವುಕುಮಾರ ಆಂದೋಲಾ, ಗ್ರಾಮದ ನೂರಾರು ರೈತರ ಪಹಣಿ ದಾಖಲೆಗಳನ್ನು ಮುಂದಿಟ್ಟು ಎದುರಾದ ಟಿಪ್ಪಣಿ ದೋಷ, ಡಬಲ್ ಪಹಣಿ, ಒಂದಕ್ಕೊಂದು ತಾಳೆಯಾಗದ ಆಕಾರಬಂದ್ ಮತ್ತು ನಕಾಶೆಯ ಸಮಸ್ಯೆ, ರೈತರ ಪಹಣಿಗಳಲ್ಲಿ ಸರ್ಕಾರಿ ಜಮೀನು ಎಂದು ದಾಖಲಾಗಿರುವುದು, ಯಾರದೋ ಜಮೀನು ಯಾರದೋ ಹೆಸರಿನಲ್ಲಿ ದಾಖಲೆ ಆಗಿರುವುದು ಸೇರಿದಂತೆ ಹಲವು ಲೋಪದೋಷಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಹಳಕರ್ಟಿ ಗ್ರಾಮದ ಪ್ರತಿಯೊಬ್ಬ ಸಣ್ಣ ಮತ್ತು ದೊಡ್ಡ ರೈತರು ಪಹಣಿ ದೋಷ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಪೂರ್ವಜರ ಆಸ್ತಿ ವಂಶಸ್ಥರ ಹೆಸರಿಗೆ ಸೇರುವ ಬದಲು ಸಂಬಂಧವೇ ಇಲ್ಲದ ವ್ಯಕ್ತಿಗಳ ಹೆಸರಿಗೆ ವರ್ಗವಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಹಶೀಲ್ದಾರ್ ಕಚೇರಿಗೆ ಅಲೆದು ಬೇಸತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಇತ್ತೀಚೆಗೆ ಜಿಲ್ಲಾಧಿಕಾರಿಗಳು ಕೊಂಚೂರು ಗ್ರಾಮದಲ್ಲಿ ವಾಸ್ತವ್ಯ ಹೂಡಿದಾಗಲೂ ಇದೇ ಸಮಸ್ಯೆ ಗಮನಕ್ಕೆ ತಂದಿದ್ದೇವೆ. ಒಂದು ವಾರದಲ್ಲಿ ತಿಪ್ಪಣಿ ಮುಕ್ತ ಗ್ರಾಮವನ್ನಾಗಿ ಘೋಷಿಸಿ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದರು. ಆದರೆ ನಾಲ್ಕು ತಿಂಗಳಾದರೂ ಒಂದೂ ಪಹಣಿ ಸರಿಯಾಗಿಲ್ಲ. ದಯವಿಟ್ಟು ನಮಗೆ ನ್ಯಾಯ ಒದಗಿಸಬೇಕು ಎಂದು ಸಂಘಟಕರು ಹಾಗೂ ರೈತರು ಆಯುಕ್ತರಲ್ಲಿ ಮನವಿ ಮಾಡಿದ ಪ್ರಸಂಗ ನಡೆಯಿತು.
ರೈತರ ಸಮಸ್ಯೆಯನ್ನು ಆಲಿಸಿದ ಸೇಡಂ ಉಪ ವಿಭಾಗಾಧಿಕಾರಿ ಎಂ.ಕಾರ್ತಿಕ್, ಹಳಕರ್ಟಿ ರೈತರ ಪಹಣಿ ದೋಷ ಸಮಸ್ಯೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಬಗೆಹರಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ನಾನು ವೈಯಕ್ತಿಕವಾಗಿ ಸಿಬ್ಬಂದಿಗಳ ನಾಲ್ಕು ತಂಡಗಳನ್ನು ರಚಿಸಿ ಪಹಣಿ ಸಮಸ್ಯೆ ಬಗೆಹರಿಸುತ್ತೇನೆ. ನನಗೆ ಮೂರು ತಿಂಗಳು ಕಾಲಾವಕಾಶ ಕೊಟ್ಟು ಸಹಕರಿಸಿರಿ ಎಂದು ರೈತರಿಗೆ ಪ್ರತಿಕ್ರಿಯಿಸಿದರು.
ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯೆ ದೀಪಾ ಡಿಗ್ಗಿಕರ್, ಈರಣ್ಣ ಇಸಬಾ, ಹಳಕರ್ಟಿ ಗ್ರಾಮ ಘಟಕದ ಅಧ್ಯಕ್ಷ ಚೌಡಪ್ಪ ಗಂಜಿ, ರೈತರಾದ ದೊಡ್ಡಪ್ಪ ಹೊಸೂರ, ಮಹಾಂತೇಶ ಹುಳಗೋಳ, ಮಲ್ಲಪ್ಪ ಹೊಸೂರ, ಬಸವರಾಜ ಹೊಸೂರ, ಮಶಾಕ್, ಶಿವಯೋಗಿ ಬಳ್ಳಾ, ಈರಣ್ಣ ಹಿಟ್ಟಿನ್, ಧರ್ಮಾ, ವಿರೇಶ ಗುರೆಗೋಳ, ದೊಡ್ಡಪ್ಪ ಹಿಟ್ಟಿನ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.