ಸಮಸ್ಯೆಗಳ ಸುಳಿಯಲ್ಲಿ ಬಾಲಕಿಯರ ವಸತಿ ನಿಲಯ
Team Udayavani, Jan 26, 2018, 1:00 PM IST
ಅಫಜಲಪುರ: ಇಲ್ಲಿನ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ವಸತಿ ನಿಲಯದ ಸಮಸ್ಯೆಗಳಿಗೆ ಸಂಬಂಧಪಟ್ಟವರು ಪರಿಹಾರ ನೀಡುತ್ತಿಲ್ಲ ಎಂದು ವಸತಿ ನಿಲಯದ ವಿದ್ಯಾರ್ಥಿನಿಯರು ಜಿ.ಪಂ ಉಪಾಧ್ಯಕ್ಷೆ ಶೋಭಾ ಶಿರಸಗಿ ಅವರಲ್ಲಿ ಅಳಲು ತೋಡಿಕೊಂಡರು.
ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ ಅವರು ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದಾಗ ವಿದ್ಯಾರ್ಥಿನಿಯರು ಸಮಸ್ಯೆಗಳನ್ನು ಹೇಳಿಕೊಂಡರು.
ಕಳೆದ ಐದಾರು ವರ್ಷಗಳಿಂದ ವಿದ್ಯಾರ್ಥಿನಿಯರು ಸೌಲಭ್ಯಗಳಿಲ್ಲದೆ ಪರದಾಡುತ್ತಿರುವುದನ್ನು ಅರಿತು, ಈ ಕುರಿತು ಜ. 30ರಂದು ನಡೆಯುವ ಜಿ.ಪಂ ಸಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸೌಲಭ್ಯ ಕಲ್ಪಿಸುವುದಾಗಿ ಜಿ.ಪಂ ಉಪಾಧ್ಯಕ್ಷೆ ಶೋಭಾ ಶಿರಸಗಿ ವಿದ್ಯಾರ್ಥಿನಿಯರಿಗೆ ಭರವಸೆ ನೀಡಿದರು. ಮೇನು ಕಾರ್ಡ್ ಪ್ರಕಾರ ಊಟ ನೀಡುತ್ತಿಲ್ಲ. ವಸತಿ ನಿಲಯದಲ್ಲಿ ಒಟ್ಟು 63 ವಿದ್ಯಾರ್ಥಿನಿಯರಿದ್ದೇವೆ.
ಕಳೆದ ಮೂರ್‍ನಾಲ್ಕು ವರ್ಷಗಳಿಂದ ಎಲ್ಲರಿಗೂ ಒಂದೇ ಶೌಚಾಲಯವಿದೆ. ಸರಿಯಾದ ಸ್ನಾನದ ಕೋಣೆಗಳಿಲ್ಲ. ಗಣಕ ಯಂತ್ರಗಳಿವೆ, ಆದರೆ ಹೇಳಿಕೊಡುವವರಿಲ್ಲ. ಹಾಸಿಗೆ-ಹೊದಿಕೆಗಳಿದ್ದರೂ ಮಲಗಲು ಒಳ್ಳೆಯ ವ್ಯವಸ್ಥೆ ಇಲ್ಲ. ಒಟ್ಟಿನಲ್ಲಿ ವಸತಿ ನಿಲಯವೆಂಬುದು ಜೈಲಿನ ಹಾಗಾಗಿದೆ ಎಂದು ವಿದ್ಯಾರ್ಥಿನಿಯರು ಜಿ.ಪಂ ಉಪಾಧ್ಯಕ್ಷರ ಬಳಿ
ಅಳಲು ತೋಡಿಕೊಂಡರು.
ವಿದ್ಯಾರ್ಥಿನಿಯರಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧ ಪಟ್ಟ ಇಲಾಖೆಯವರು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಬಿಸಿಎಂ ಇಲಾಖೆ ಅಧಿಕಾರಿ ಎಸ್.ಎನ್. ಗಿಣ್ಣಿ ಅವರಿಗೆ ಜಿಪಂ ಉಪಾಧ್ಯಕ್ಷರು ಸೂಚಿಸಿದರು.
ಅಧಿಕಾರಿ ಎಸ್.ಎನ್. ಗಿಣ್ಣಿ ಮಾಹಿತಿ ನೀಡಿ, ಎಚ್‌ಕೆಆರ್‌ಡಿಬಿಯಿಂದ ಮಲಗುವ ಹಾಸಿಗೆ ನೀಡಲಾಗಿದೆ. ಅವುಗಳನ್ನು ಇಡಲು ಜಾಗವಿಲ್ಲ, ಶೌಚಾಲಯದ ಸಮಸ್ಯೆ ಇದೆ. ಅದನ್ನು ಬಗೆ ಹರಿಸುತ್ತೇನೆ. ಸ್ನಾನಕ್ಕಾಗಿ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ಅನುದಾನ ಗೋಲ್‌ಮಾಲ್ ಶಂಕೆ ಒಬ್ಬ ವಿದ್ಯಾರ್ಥಿನಿಗೆ ತಿಂಗಳಿಗೆ 1500 ರೂ. ಗಳನ್ನು ಸರ್ಕಾರ ಖರ್ಚು ಮಾಡುತ್ತಿದೆ.
ವಾರ್ಷಿಕ ಕೋಟಿ ರೂ. ಅನುದಾನ ನೀಡುತ್ತಿದೆ. ಇಲ್ಲಿನ ಅವ್ಯವಸ್ಥೆ ನೋಡಿದರೆ ಅನುದಾನವೆಲ್ಲವೂ ಗೋಲ್‌ಮಾಲ್
ಆಗುತ್ತಿದೆ ಎನ್ನುವ ಅನುಮಾನ ಕಾಡುತ್ತದೆ. ಈ ಕುರಿತು ತನಿಖೆಗೆ ಆಗ್ರಹಿಸುತ್ತೇನೆ.
ಶೋಭಾ ಶಿರಸಗಿ, ಜಿಪಂ ಉಪಾಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.