ರೈತರಿಗೆ ತಿಳಿವಳಿಕೆ ನೀಡಿ


Team Udayavani, Feb 17, 2018, 9:47 AM IST

gul-1.jpg

ಕಲಬುರಗಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಪ್ರತಿ ರೈತರಿಂದ 10 ಕ್ವಿಂಟಲ್‌ ತೊಗರಿ ಖರೀದಿಸಲು ಸರ್ಕಾರ ಅನುಮತಿ ನೀಡಲಾಗಿದೆ. ಈ ಬಗ್ಗೆ ಗ್ರಾಮೀಣ ಪ್ರದೇಶಕ್ಕೆ ನೋಡಲ್‌ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ರೈತರಿಗೆ ತಿಳಿ ಹೇಳಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಹೇಳಿದರು.

ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಎರಡನೇ ಹಂತದ ತೊಗರಿ ಖರೀದಿ ಸಂಬಂಧ ಕರೆಯಲಾದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಎರಡನೇ ಹಂತದ ತೊಗರಿ ಖರೀದಿಗೆ ರಾಜ್ಯಕ್ಕೆ 10 ಲಕ್ಷ ಕ್ವಿಂಟಲ್‌ ಮಿತಿಗೊಳಿಸಿದೆ.

ಅದರಂತೆ ರಾಜ್ಯಾದ್ಯಂತ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಕೆಲವು ಕಡೆ ರೈತರು ಗರಿಷ್ಠ 10 ಕ್ವಿಂಟಲ್‌ ಮಿತಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಖರೀದಿ ಕೇಂದ್ರಗಳಲ್ಲಿ ತೊಗರಿ ಖರೀದಿಗೆ ಸಹಕಾರ ನೀಡದಿರುವುದು ಗಮನಕ್ಕೆ ಬಂದಿದೆ. ಸಂಬಂಧಿಸಿದ ನೋಡಲ್‌ ಅಧಿಕಾರಿಗಳು ಹಾಗೂ ಕ್ಲಸ್ಟರ್‌ ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರ ಮಿತಿಗೊಳಿಸಿರುವಂತೆ ತೊಗರಿ ಖರೀದಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಿತಿ ಹೆಚ್ಚಳ ಮಾಡಿದ್ದಲ್ಲಿ ಅದರಂತೆ ಕ್ರಮ ವಹಿಸಲಾಗುವುದು ಎಂದು ರೈತರಿಗೆ ಮನವೋಲಿಸುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತೊಗರಿ ಖರೀದಿ ಕೇಂದ್ರದ ಬಗ್ಗೆ ಬರುವ ದೂರುಗಳನ್ನು ಕೂಡಲೇ ಇತ್ಯರ್ಥಗೊಳಿಸುವುದಲ್ಲದೇ ಜಿಲ್ಲಾಡಳಿತ ಗಮನಕ್ಕೆ ತರಬೇಕು. ಅಲ್ಲದೇ ಎಲ್ಲ ನೋಡಲ್‌ ಅಧಿಕಾರಿಗಳು 2-3 ದಿನದೊಳಗಾಗಿ ತಾಲೂಕಿನ ಎಲ್ಲ ಖರೀದಿ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಖರೀದಿ ಕೇಂದ್ರದಲ್ಲಿನ ಆನ್‌ಲೈನ್‌ ನೋಂದಣಿ, ಚೀಲ ದಾಸ್ತಾನು ಹಾಗೂ ಹಣ ಪಾವತಿ ಬಗ್ಗೆ ಮಾಹಿತಿ ಸಂಗ್ರಹಿಸುವುದಲ್ಲದೇ ವ್ಯವಸ್ಥಿತ ರೀತಿಯಲ್ಲಿ ತೊಗರಿ ಖರೀದಿಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಚಿತ್ತಾಪುರ ತಾಲೂಕು ರಾವೂರನಲ್ಲಿ ಕ್ರಮ ಸಂಖ್ಯೆವಾರು ತೊಗರಿ ಖರೀದಿ ಆಗುತ್ತಿಲ್ಲ ಹಾಗೂ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ ಖರೀದಿ ಕೇಂದ್ರಗಳಲ್ಲಿ ಸರದಿಯಂತೆ ಖರೀದಿಸದಿರುವ ಕುರಿತು ಬಂದಿರುವ ದೂರಿನ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಜೇವರ್ಗಿ ತಾಲೂಕಿನಿಂದ ಹಲವು ದೂರುಗಳು ಬರುತ್ತಿದ್ದು, ಕ್ಲಸ್ಟರ್‌ ಮತ್ತು ನೋಡಲ್‌ ಅಧಿಕಾರಿಗಳು ಸಮನ್ವಯತೆ ಸಾಧಿಸಿ ದೂರುಗಳ ಬಗ್ಗೆ ಕ್ರಮ ಕೈಗೊಂಡು ಜಿಲ್ಲಾಡತಕ್ಕೆ ಮಾಹಿತಿ ನೀಡಿ ಎಂದು ಹೇಳಿದರು.

ಎರಡನೇ ಹಂತದ ತೊಗರಿ ಖರೀದಿಗೆ ಈಗಾಗಲೇ 3 ಲಕ್ಷ ತೊಗರಿ ಚೀಲಗಳನ್ನು ಖರೀದಿ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಫೇಡರೇಶನ್‌ ಶಾಖಾ ವ್ಯವಸ್ಥಾಪಕ ಪ್ರದೀಪ ಸಭೆಗೆ ಮಾಹಿತಿ ನೀಡಿದರು. 

ಮಹಾನಗರ ಪಾಲಿಕೆ ಆಯುಕ್ತ ರಘುನಂದ ಮೂರ್ತಿ, ಕೃಷಿ ಇಲಾಖೆ ಉಪನಿರ್ದೇಶಕ ಸಮದ್‌ ಪಟೇಲ್‌, ಸಹಕಾರ ಸಂಘಗಳ ಉಪನಿಬಂಧಕ ಟಿ. ಫೈರೋಜ್‌, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡಲ್‌ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.