ಕೋವಿಡ್ ವರದಿ ಒಂದೇ ದಿನದಲ್ಲಿ ಕೊಡಿ
Team Udayavani, Aug 5, 2020, 2:45 PM IST
ಕಲಬುರಗಿ: ಕೋವಿಡ್ 19 ಸೋಂಕು ಪತ್ತೆಗಾಗಿ ತಪಾಸಣೆಯ ವೈದ್ಯಕೀಯ ಮಾದರಿ ವರದಿಯನ್ನು 24 ಗಂಟೆಯಲ್ಲಿ ಸಾರ್ವಜನಿಕರಿಗೆ ದೊರಕುವಂತಾಗಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಹೇಳಿದರು.
ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಕೋವಿಡ್ 19 ನಿಯಂತ್ರಣ ಮತ್ತು ಜಿಮ್ಸ್ ಆಸ್ಪತ್ರೆಗೆ ಮಂಡಳಿಯ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಿಸಲು ಸ್ಯಾಂಪಲ್ ನೀಡಿದ ವ್ಯಕ್ತಿಗೆ ತ್ವರಿತಗತಿಯಲ್ಲಿ ವೈದ್ಯಕೀಯ ವರದಿ ನೀಡುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಸ್ಯಾಂಪಲ್ ಪಡೆದು ವಾರಗಟ್ಟಲೆಯಾದರೂ ವರದಿ ಬಾರದಿದ್ದಲ್ಲಿ ಜನರು ಅನಗತ್ಯ ಗೊಂದಲಕ್ಕೆ ಈಡಾಗುತ್ತಾರೆ. ಇದಕ್ಕೆ ಅವಕಾಶ ನೀಡಬಾರದು. ಸ್ಯಾಂಪಲ್ಸ್ ಹೆಚ್ಚು ಸಂಗ್ರಹಗೊಂಡಲ್ಲಿ ಬೆಂಗಳೂರು ಅಥವಾ ಪುಣೆಗೆ ಕಳುಹಿಸಿ 24 ಗಂಟೆಯಲ್ಲಿ ವೈದ್ಯಕೀಯ ವರದಿಯನ್ನು ಸಂಬಂ ಧಿಸಿದ ವ್ಯಕ್ತಿಗಳಿಗೆ ತಿಳಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.
ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ನಲ್ಲಿ ರೋಗಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ, ಅಂಬ್ಯುಲೆನ್ಸ್ ಸೇವೆ, ಹಾಸಿಗೆ ಲಭ್ಯತೆ, ಊಟೋಪಚಾರ ಸರಿಯಾಗಿ ತಲುಪುತ್ತಿಲ್ಲ ಎಂಬ ಆರೋಪ ಬರುತ್ತಿದ್ದು, ತಕ್ಷಣವೇ ವೈದ್ಯೋಪಚಾರ ಗುಣಮಟ್ಟವನ್ನು ಹೆಚ್ಚಿಸಬೇಕು. ಜನರಲ್ಲಿ ಕೊರೊನಾ ರೋಗಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ವಿಶ್ವಾಸ ಬರಲು ವಿನೂತನ ಪ್ರಯತ್ನಗಳು ಆಗಬೇಕಿದೆ ಎಂದರು.
ಮುಂದಿನ ದಿನದಲ್ಲಿ ಕನಿಷ್ಠ ಅರ್ಧ ಗಂಟೆಗೊಮ್ಮೆ ವೈದ್ಯ ಅಥವಾ ನರ್ಸ್‌ಗಳು ರೋಗಿಯನ್ನು ವೈಯಕ್ತಿಕವಾಗಿ ವಿಚಾರಿಸಿದಲ್ಲಿ ರೋಗಿಯಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಬೇಗ ಗುಣಮುಖನಾಗಲು ಸಾಧ್ಯ. ಜಿಮ್ಸ್‌ಗೆ ಬರುವ ಯಾವುದೇ ರೋಗಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಿಲ್ಲದಿದ್ದಲ್ಲಿ ಬೇರೆ ಆಸ್ಪತ್ರೆಯಲ್ಲಿ ರೋಗಿ ಪ್ರವೇಶ ಪಡೆಯಲು ಅಗತ್ಯ ಕ್ರಮ ವಹಿಸಬೇಕು. ಕೋವಿಡ್ 19 ನಿಯಂತ್ರಣಕ್ಕೆ ಮಂಡಳಿಯಿಂದ ನೀಡಬೇಕಾದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಅನುದಾನ ಬಳಕೆ ಮಾಡಿಕೊಳ್ಳಿ: ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ನೀರು ಪೂರೈಸಲೆಂದೇ 2.77 ಕೋಟಿ ರೂ. ಮೊತ್ತಕ್ಕೆ ಮಾ.2ರಂದೇ ಅನುಮೋದನೆ ಸಿಕ್ಕಿದೆ. ಇದೂವರೆಗೆ ಕಾಮಗಾರಿ ಆರಂಭಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಕೂಡಲೇ ಕಾಮಗಾರಿ ಕೈಗೆತ್ತಿಕೊಲುÛವಂತೆ ಮತ್ತು ಮಂಡಳಿ ಅನುದಾನ ಸದುಪಯೋಗ ಮಾಡಿಕೊಳ್ಳುವಂತೆ ಜಿಮ್ಸ್ ನಿರ್ದೇಶಕರಿಗೆ ಸೂಚಿಸಿದರು.
ಜಿಮ್ಸ್ ನಿರ್ದೇಶಕಿ ಡಾಣ ಕವಿತಾ ಪಾಟೀಲ ಮಾತನಾಡಿ, ಜಿಮ್ಸ್ ಆಸ್ಪತ್ರೆ ಮತ್ತು ಐಸೋಲೇಷನ್ ವಾರ್ಡ್‌ನಲ್ಲಿ ರೋಗಿಗಳಿಗೆಸರಿಯಾದ ಸಮಯಕ್ಕೆ ಊಟ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ನೆಲ ಮಹಡಿಯಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತಿದ್ದು, ಇದಕ್ಕಾಗಿ ಎರಡು ಹಾಸಿಗೆಗಳನ್ನು ವೆಂಟಿಲೇಟರ್ ಸಮೇತ ಇಡಲಾಗಿದೆ ಎಂದರು.
ಡಿಎಚ್‌ಒ ಡಾಣ ರಾಜಶೇಖರ್ ಮಾಲಿ ಮಾತನಾಡಿದರು. ಸಭೆಯಲ್ಲಿ ಕೆಕೆಆರ್ ಡಿಬಿ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತ ಡಾಣ ಎನ್.ವಿ.ಪ್ರಸಾದ, ಜಿಪಂ ಸಿಇಒ ಡಾಣ ಪಿ.ರಾಜಾ, ಡಿಸಿಪಿ ಕಿಶೋರ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಜಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ಧನಂಜಯ ಕುರಿ, ಪ್ರಹ್ಲಾದ ಪೂಜಾರಿ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾಣ ಶಿವಾನಂದ ಸುರಗಾಳಿ, ಜಿಲ್ಲಾಸ್ಪತ್ರೆಯ ಸರ್ಜನ್ ಡಾಣ ಅಂಬಾರಾಯ ರುದ್ರವಾಡಿ, ಜಿಮ್ಸ್ ವೈದ್ಯಕೀಯ ಅಧಿಧೀಕ್ಷಕ ಡಾಣ ಶಫಿಯುದ್ದಿನ್, ಡಾಣ ಸಂದೀಪ್, ಸಹಾಯಕ ಆಡಳಿತಾಧಿಕಾರಿ ಪಾರ್ವತಿ ಸೇರಿದಂತೆ ಇಎಸ್‌ಐಸಿ ಮತ್ತು ಜಿಮ್ಸ್ ಆಸ್ಪತ್ರೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.