ಸರ್ಕಾರದ ಧ್ಯೆಯೋದ್ದೇಶ ಅರಿತು ಉತ್ತಮ ಆಡಳಿತ ನೀಡಬೇಕು: ಸಚಿವ ಕೃಷ್ಣ ಬೈರೇಗೌಡ


Team Udayavani, Jul 31, 2023, 2:31 PM IST

ಸರ್ಕಾರದ ಧ್ಯೆಯೋದ್ದೇಶ ಅರಿತು ಉತ್ತಮ ಆಡಳಿತ ನೀಡಬೇಕು: ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ: ಕಂದಾಯ ಇಲಾಖೆಯು ಸರ್ಕಾರದ‌ ಮಾತೃ ಇಲಾಖೆಯಾಗಿದ್ದು, ಇಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಸಹ ಮಾತೃ ಹೃದಯಿಗಳಾಗಿರಬೇಕು. ಸರ್ಕಾರದ ಉದ್ದೇಶ ಮತ್ತು ಧ್ಯೆಯೋದ್ದೇಶಗಳನ್ನು ಅರಿತು ಜನರಿಗೆ ಉತ್ತಮ ಆಡಳಿತ ನೀಡಬೇಕು ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಭಾಗದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರೊಂದಿಗೆ ಕಂದಾಯ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ. ಅಡಳಿತದಲ್ಲಿ ಬದಲಾವಣೆ ತರಬೇಕು. ಸರಳೀಕರಣಕ್ಕೆ ಆದ್ಯತೆ ಕೊಡಿ. ಕಂದಾಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿ-ಸಿಬ್ಬಂದಿಗಳು ತಂಡದ ರೂಪದಲ್ಲಿ ಕಾರ್ಯನಿರ್ವಹಿಸಬೇಕು ಎಂದ‌ ಸಚಿವರು, ಕಂದಾಯ ಸಚಿವನಾದ ಮೇಲೆ ಈಗಾಗಲೆ ಬೆಳಗಾವಿ‌ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ್ದು, ಇಂದು‌ ಇಲ್ಲಿ ನಡೆಸಲಾಗುತ್ತಿದೆ. ಮುಂದೆ ಜಿಲ್ಲಾವಾರು ಸಹ ಪ್ರಗತಿ ಪರಿಶೀಲನೆ ಮಾಡುವುದಾಗಿ ಹೇಳಿದರು.

ಕಳೆದ ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದಾಗಿ ವಿಭಾಗದಲ್ಲಿ ನೆರೆ ಹಾವಳಿಯಿಂದ ಮಾನವ ಮತ್ತು ಜಾನುವಾರುಗಳ ಜೀವ ಹಾನಿ‌, ಕೃಷಿ ಬಿತ್ತನೆ ಕುರಿತು ಆಯಾ‌ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮಾನವ ಸಾವು ಪ್ರಕರಣದಲ್ಲಿ ಜನರಿಗೆ ಪರಿಹಾರ ನೀಡುವುದು ಮುಖ್ಯವಲ್ಲ. ಅವರನ್ನು ಬದುಕಿಸುವುದು ನಮ್ಮ ಆದ್ಯತೆ ಆಗಬೇಕು. ಅದಕ್ಕಾಗಿ ಮಳೆಗಾಲ ಸಂದರ್ಭದಲ್ಲಿ ವಹಿಸಬೇಕಾದ ‌ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆಡಳಿತ ವರ್ಗ ಹೆಚ್ಚಿನ ಗಮನ ನೀಡಬೇಕಿದೆ ಎಂದರು.

ಕಷ್ಟದಲ್ಲಿದ್ದವರಿಗೆ ಪರಿಹಾರ ವಿತರಣೆ ಮಾಡುವುದು ಒಳ್ಳೆಯದ್ದೆ. ನೊಂದವರಿಗೆ ಸರ್ಕಾರ ಸಹಾಯ ಹಸ್ತ ಚಾಚುವುದು ಉತ್ತಮ. ಆದರೆ ಇದನ್ನು ದುರಪಯೋಗವಾಗಬಾರದು ಎಂಬುದು ನಮ್ಮ‌ ಕಳಕಳಿಯಾಗಿದೆ. ವಿಪತ್ತು ನಿರ್ವಹಣೆ ಹೆಸರಿನಲ್ಲಿ ಹಣ ದುರಪಯೋಗವಾದಲ್ಲಿ ಅದು ಕೆಟ್ಟ ಆಡಳಿತಕ್ಕೆ ಅವಕಾಶ ಮಾಡಿಕೊಡುತ್ತದೆ. ಪರಿಹಾರ ವಿತರಣೆಯ ಕೆಲವೊಂದು ಪ್ರಕರಣದಲ್ಲಿ ಸ್ಯಾಟಲೈಟ್ ಫೋಟೋ ಗಳನ್ನು ಪರೀಕ್ಷಿಸಿ ಜಿಲ್ಲಾಧಿಕಾರಿಗಳು ಪರಿಹಾರ ನೀಡಬೇಕು ಎಂದು ಕಂದಾಯ ಸಚಿವ‌ ಕೃಷ್ಣ ಬೈರೇಗೌಡ ತಿಳಿಸಿದರು.

ಭೂಮಿ ತಂತ್ರಾಂಶದಲ್ಲಿ ಪಹಣಿ ಪತ್ರಿಕೆ ತಿದ್ದುಪಡಿ, ವರ್ಗಾವಣೆ ವಿಷಯ ಕುರಿತು ಚರ್ಚೆಯಲ್ಲಿ ಕಲಬುರಗಿ ವಿಭಾಗದಲ್ಲಿ 6 ತಿಂಗಳಿನಿಂದ 5 ವರ್ಷದೊಳಗಿನ 5,266 ಪ್ರಕರಣಗಳು ಬಾಕಿ ಇರುವುದನ್ನು ಗಮನಿಸಿದ ಸಚಿವ ಕೃಷ್ಣ‌ ಬೈರೇಗೌಡ ಅವರು, ಇಂತಹ ಪ್ರಕರಣಗಳಿಂದಲೇ ಜನರು ಬೇಸತ್ತು ಹೋಗಿ ನನ್ನನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಬರುತ್ತಿದ್ದಾರೆ ಎಂದು‌ ಬೇಸರ ವ್ಯಕ್ತಪಡಿಸಿದರು. ಮ್ಯುಟೇಷನ್ ಡಿಸ್ಪೂಟ್ ಪ್ರಕರಣಗಳನ್ನು 4-5 ವಿಚಾರಣೆಗಳಲ್ಲಿ‌ ಮುಗಿಸಿ ಜನರಿಗೆ ನೆಮ್ಮದಿ ಕಲ್ಪಿಸಿ ಎಂದು ತಹಶೀಲ್ದಾರರಿಗೆ ಖಡಕ್ ಸೂಚನೆ ನೀಡಿದರು.

ಸಿಡಿಲು, ಮಿಂಚು ಕುರಿತು ಅರಿವು ಮೂಡಿಸಿ: ಕಲಬುರಗಿ ವಿಭಾಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ 3 ತಿಂಗಳಿನಲ್ಲಿ 24 ಸೇರಿದಂತೆ ರಾಜ್ಯದಲ್ಲಿ ಈ ವರ್ಷ ಸಿಡಿಲು, ಮಿಂಚಿನಿಂದ 80 ಜನ ಸಾವನಪ್ಪಿದ್ದಾರೆ. ಸಿಡಿಲು ಕುರಿತು ಹೆಚ್ಚಿನ ಅರಿವು ನೀಡಿದಲ್ಲಿ ಈ ಸಾವು ತಪ್ಪಿಸಬಹುದಿತ್ತು. ಜಿಲ್ಲಾಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ಗಮನ ಕೊಡಿ. ಮಳೆಗಾಲ‌ ಸಂದರ್ಭದಲ್ಲಿ ಸಿಡಿಲಿನಿಂದ ಸಾವನಪ್ಪುವರ ಸಂಖ್ಯೆ ಇತ್ತೀಚಿನ‌ ವರ್ಷದಲ್ಲಿ ಹೆಚ್ಚುತ್ತಿದೆ. ಅರಿವಿನ ಕೊರತೆಯೇ ಇದಕ್ಕೆ ಮುಖ್ಯ ಕಾರಣ. ಇದನ್ನು ನಿಯಂತ್ರಿಸಬೇಕಿದೆ. ನೊಂದ ಕುಟುಂಬಗಳಿಗೆ ಸರ್ಕಾರ 24 ಗಂಟೆಯಲ್ಲಿ ಪರಿಹಾರ ನೀಡಬಹುದು, ಆದರೆ ಹೋದ ಜೀವ ಮತ್ತೆ ಮರುಕಳಿಸಲು ಸಾಧ್ಯವಿಲ್ಲ ಎಂದರು.

ವಿಪತ್ತು ನಿರ್ವಹಣೆ ಕೆಲಸ ವಿಳಂಬ ಸಲ್ಲ: ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ 2020-21ನೇ ಸಾಲಿನ ನೆರೆ ಹಾವಳಿಯ ಕಾಮಗಾರಿಗಳು ಇನ್ನು ಪ್ರಗತಿಯಲ್ಲಿರುವುದಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿ, ರಸ್ತೆ, ಶಾಲೆ, ಸೇತುವೆ ದುರಸ್ತಿಗೆ ವಿಪತದರು ನಿರ್ವಹಣೆಯಲ್ಲಿ 1-2 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಮಳೆಗಾಲ ಹೋಗಿ ಮತ್ತೆ ಮಳೆಗಾಲ ಬಂದರೂ ಕೆಲಸ ಇನ್ನು ಮುಗಿಯಲ್ಲ ಎಂದರೆ ಏನರ್ಥ. ನೀಡಲಾದ ಅನುದಾನ ಉದ್ದೇಶ ಈಡೇರುತ್ತಾ ಎಂದು ಡಿ.ಸಿ.ಗಳನ್ನು ಪ್ರಶ್ನಿಸಿದರು. ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ 2020-21ರಲ್ಲಿ 640 ಕೆಲಸ ಕೈಗೆತ್ತಿಕೊಂಡಿದ್ದು, ಇದರಲ್ಲಿ 514 ಮುಕ್ತಾಯವಾಗಿದ್ದು, 132 ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮುಂದಿನ 15 ದಿನದಲ್ಲಿ‌ ಮುಗಿಸುವುದಾಗಿ ಸಚಿವರಿಗೆ ತಿಳಿಸಿದರು. ಒಟ್ಟಾರೆಯಾಗಿ ಹಳೇ ವರ್ಷದ ವಿಪತ್ತು ನಿರ್ವಹಣೆ ಕೆಲಸಗಳನ್ನು ಮತ್ತು ಕೊಪ್ಪಳ, ಯಾದಗಿರಿಯಲ್ಲಿ ಕೋವಿಡ್ ನಿರ್ವಹಣೆಯ ಬಾಕಿ ಅನುದಾನ ಮುಂದಿನ 10 ದಿನದಲ್ಲಿ ಖರ್ಚು ಮಾಡಿ ಇಲ್ಲ ಸರ್ಕಾರಕ್ಕೆ ಅನುದಾನ ಅಧ್ಯರ್ಪಿಸಿ ಎಂದು ಡಿ.ಸಿ.ಗಳಿಗೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.