ಉತ್ತಮ ಹವ್ಯಾಸ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ
Team Udayavani, Jan 11, 2019, 5:44 AM IST
ಕಲಬುರಗಿ: ಉತ್ತಮ ಹವ್ಯಾಸಗಳು, ಏಕಾಗ್ರತೆ, ಆಸಕ್ತಿಗಳು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿ ಆಗಬಲ್ಲವು. ಆದ್ದರಿಂದ ವಿದ್ಯಾರ್ಥಿಗಳು ಹದಿಹರೆಯದ ಮನೋದೈಹಿಕ ಸಮಸ್ಯೆಗಳಿಂದ ಹೊರಬಂದು ಶೈಕ್ಷಣಿಕ ಸಾಧನೆ ಕಡೆಗೆ ಗಮನಹರಿಸಿ ಸಾಧನೆ ಮಾಡುವಂತೆ ಮನೋತಜ್ಞ ಡಾ| ಸಿ.ಆರ್. ಚಂದ್ರಶೇಖರ ಸಲಹೆ ನೀಡಿದರು.
ಕಾಯಕ ಫೌಂಡೇಶನ್ ವಸತಿ ಸಹಿತ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಸ್ತ್ರೀರೋಗ ತಜ್ಞೆ, ವೈದ್ಯ ಸಾಹಿತಿ ದಿ| ಡಾ| ಲೀಲಾವತಿ ದೇವದಾಸ ಅವರ ಸಂಸ್ಮರಣೆ ನಿಮಿತ್ತ ಕಾಯಕ ಫೌಂಡೇಷನ್ ಎಜುಕೇಷನ್ ಟ್ರಸ್ಟ್ , ಜಿಲ್ಲಾ ಕನ್ನಡ ವೈದ್ಯ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಅಲ್ಪ ಸಂತೋಷಗಳಿಗೆ ಮನಸ್ಸು ಹರಿ ಬಿಡಬಾರದು. ಓದಿಗೆ ಮನಸ್ಸು ಏಕಿಕೃತ ಇಟ್ಟುಕೊಳ್ಳುವುದು ಬಹು ಮುಖ್ಯವಾಗಿದೆ. ಒಟ್ಟಾರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ಸತಜೆಗಳಾಗಿ ರೂಪುಗೊಳ್ಳಿ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಯಕ ಶಿಕ್ಷಣ ಸಂಸ್ಥೆಯ ಶಿವರಾಜ ಟಿ. ಪಾಟೀಲ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ಪ್ರಾಮಾಣಿಕತೆ, ದಕ್ಷತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಬೇಕೆಂದು ಹೇಳಿದರು.
ಡಾ| ಇಂದಿರಾ ವೀರಭದ್ರಪ್ಪ ಮಾತನಾಡಿ, ದಿ| ಡಾ| ಲೀಲಾವತಿ ದೇವದಾಸ ಅವರ ಶ್ರದ್ಧೆ, ಕರ್ತವ್ಯ ಪ್ರಜ್ಞೆ, ಭೋಧನಾ ಶೈಲಿ, ಸಮಾಜಮುಖೀ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಇದೇ ವೇಳೆ ಮೂರು ಪುಸ್ತಕ ಬಿಡುಗಡೆ ಮಾಡಲಾಯಿತು. ಸ್ವಪ್ನ ರೆಡ್ಡಿ ಪಾಟೀಲ, ಎಸ್.ಎಸ್. ಹಿರೇಮಠ, ಪಾಚಾರ್ಯ ಡಾ| ಶಶಿಶೇಖರ ರೆಡ್ಡಿ, ಜಿ.ಎಂ. ಸಾಲಿಮಠ ಹಾಜರಿದ್ದರು. ರೋಷಿನಿ ಎನ್. ಘೋಟ್ಕೆ ಸ್ವಾಗತಿಸಿದರು. ಭಾಗ್ಯಶ್ರೀ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.