ಗೌರಿ ಲಂಕೇಶ ಹತ್ಯೆಗೆ ವ್ಯಾಪಕ ಆಕ್ರೋಶ
Team Udayavani, Sep 7, 2017, 9:50 AM IST
ಕಲಬುರಗಿ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಖಂಡಿಸಿ ಬುಧವಾರ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು. ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಲಾಯಿತು.
ಪ್ರಗತಿಪರ ಸಂಘಟನೆಗಳ ಒಕ್ಕೂಟ, ವಿಚಾರವಾದಿಗಳು, ಪತ್ರಕರ್ತರ ಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಎಬಿವಿಪಿ, ಪಾಪುಲ್ರ ಫ್ರಂಟ್ ಇಂಡಿಯಾ, ಆವಿಷ್ಕಾರ ಪ್ರಗತಿಪರ ಸಾಂಸ್ಕೃತಿಕ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಹತ್ಯೆಯನ್ನು ಬಲವಾಗಿ ಖಂಡಿಸಿದವು.
ಪ್ರಗತಿಪರ ಸಂಘಟನೆಗಳ ಒಕ್ಕೂಟ: ಕೋಮುವಾದಿ, ವೈದಿಕ ಶಾಹಿಗಳಿಗೆ ಸಿಂಹಸ್ವಪ್ನರಾಗಿದ್ದ ಹಾಗೂ ಪ್ರಗತಿ ವಿಚಾರಧಾರೆ ಮೈಗೂಢಿಸಿಕೊಂಡಿದ್ದ ಪತ್ರಕರ್ತೆ ಗೌರಿ ಲಂಕೇಶ ಅವರ ಪ್ರಗತಿಪರತೆಯನ್ನು ಒಪ್ಪದವರು ಹತ್ಯೆ ಮಾಡಿದ್ದಾರೆ. ಡಾ| ಎಂ.ಎಂ. ಕಲಬುರಗಿ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿದ್ದಲ್ಲಿ ಈ ಹತ್ಯೆ ನಡೆಯುತ್ತಿರಲಿಲ್ಲ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಹೊಣೆ ಎಂದು ಒಕ್ಕೂಟದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ವ್ಯವಸ್ಥೆ, ಸರ್ಕಾರಗಳು ಪ್ರಗತಿಪರರಿಗೆ ರಕ್ಷಣೆ ಇಲ್ಲ ಎಂಬುದಾಗಿ ಘೋಷಣೆ ಮಾಡಲಿ. ನಮ್ಮ ರಕ್ಷಣೆ ನಾವೇ ಮಾಡಿಕೊಳ್ಳುತ್ತೇವೆ. ಇನ್ನು ಮುಂದೆಯಾದರೂ ಕುಂಬಕರ್ಣ ನಿದ್ದೆಯಿಂದ ಹೊರ ಬಂದು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದರು.
ಮೀನಾಕ್ಷಿ ಬಾಳಿ, ರವೀಂದ್ರ ಶಾಬಾದಿ, ಪ್ರೊ|ಕಾಶೀನಾಥ ಅಂಬಲಗೆ, ಆರ್.ಕೆ.ಹುಡಗಿ, ಜಂಗನಗೌಡ ಶೀಲವಂತ, ಸೂರ್ಯಕಾಂತ ನಿಂಬಾಳಕರ, ದತ್ತಾತ್ರೇಯ ಇಕ್ಕಳಕಿ, ಅಬ್ದುಲ್ ಹಮೀದ್, ಅಶೋಕ ಶೆಟಕಾರ, ಪ್ರಭು ಖಾನಾಪುರೆ, ಶಂಕ್ರಯ್ಯ ಘಂಟಿ, ಅಯ್ಯಣ್ಣ ಬಳಬಟ್ಟಿ, ಸಿದ್ಧರಾಮ ಯಳವಂತಗಿ, ರಾಹುಲ್ ಕಟ್ಟಿ, ಸೂರ್ಯಕಾಂತ ಸೊನ್ನದ ಮುಂತಾದವರಿದ್ದರು.
ಪತ್ರಕರ್ತರ ಸಂಘ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪದಾಧಿಕಾರಿಗಳು, ಪತ್ರಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಹ ಇಂತಹ ಅನಾಗರಿಕ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.
ಹಿರಿಯ ಪತ್ರಕರ್ತರಾದ ವಾದಿರಾಜ ವ್ಯಾಸಮುದ್ರ, ಡಿ. ಶಿವಲಿಂಗಪ್ಪ, ಎಸ್.ಬಿ.ಜೋಶಿ, ಶಿವರಾಯ ದೊಡ್ಮನಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಶಿವರಂಜನ್ ಸತ್ಯಂಪೇಟೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸದಸ್ಯರು, ಪತ್ರಕರ್ತರು, ಪತ್ರಿಕಾ ಛಾಯಾಗ್ರಾಹಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪಾಪ್ಯುಲರ ಫ್ರಂಟ್: ವಿಚಾರವಾದಿಗಳನ್ನು ಹತ್ಯೆ ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯವಸ್ಥಿತವಾಗಿ ಹತ್ತಿಕ್ಕಲಾಗುತ್ತಿದೆ. ಸರ್ಕಾರಗಳು ದುಷ್ಕರ್ಮಿಗಳ ಷಡ್ಯಂತ್ರ ಬಯಲಿಗೆಳೆಯಲು ವಿಫಲವಾಗಿವೆ ಎಂದು ಪಾಪ್ಯುಲರ ಫ್ರಂಟ್‌ನ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಆರೋಪಿಸಿದರು. ವಿಚಾರವಾದಿಗಳಿಗೆ ಸೂಕ್ತ ಭದ್ರತೆ ಒದಗಿಸುವುದರ ಜತೆಗೆ ಗೌರಿ ಲಂಕೇಶ ಅವರ ಈ ಹತ್ಯೆಯನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಮೊಹಮ್ಮದ ಮೋಹಸಿನ ಮುಂತಾದವರಿದ್ದರು. ಆವಿಷ್ಕಾರ
ಪ್ರಗತಿಪರ ಸಾಂಸ್ಕೃತಿಕ ವೇದಿಕೆ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಖಂಡಿಸಿ ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೇಷನ್, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೇಷನ್ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದವು. ಕೆ.ಎ. ಕಲಬುರಗಿ, ವಿ.ಜಿ.ದೇಸಾಯಿ, ರಮೇಶ ಲಂಡನಕ್, ಅಂಬಾರಾಯ ಉಪಳಾಂವಕರ್, ಜೀವನಕುಮಾರ ಮುಂತಾದವರಿದ್ದರು.
ಎಬಿವಿಪಿ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಖಂಡಿಸಿ ಅಖೀಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಕಿರಣ ಬಿರಾದಾರ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.