ನರಿಬೋಳ-ಚಾಮನೂರ ಸೇತುವೆಗೆ ಅಡಿಗಲ್ಲು
Team Udayavani, Jan 16, 2018, 10:21 AM IST
ಜೇವರ್ಗಿ: ತಾಲೂಕಿನ ಅತ್ಯಂತ ಮಹತ್ವದ ಯೋಜನೆಗಳಲ್ಲೊಂದಾದ ನರಿಬೋಳ-ಚಾಮನೂರ ಹತ್ತಿರದ
ಭೀಮಾನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಜ.16ರಂದು ಅಡಿಗಲ್ಲು ಸಮಾರಂಭ ಆಯೋಜಿಸಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್ ತಿಳಿಸಿದರು.
ಪಟ್ಟಣದಲ್ಲಿ ಸೋಮವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ ತಾಲೂಕಿನ ಕೋಳಕೂರ
ಹಾಗೂ ಆಂದೋಲಾ ಜಿಪಂ ವ್ಯಾಪ್ತಿಯ 50ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ ಹೈದ್ರಾಬಾದ, ಚಿತ್ತಾಪುರ, ಸೇಡಂ ಹಾಗೂ ಯಾದಗಿರಿ ಜಿಲ್ಲೆಗೆ ಸಂಪರ್ಕ ಕಲ್ಪಿಸಲು ಈ ಸೇತುವೆ ಅನುಕೂಲವಾಗಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದೆ. 50 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. 18 ತಿಂಗಳ ಕಾಲಮಿತಿಯೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಕಳೆದ 4 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.
ಕೋನಾಹಿಪ್ಪರಗಾ-ಸರಡಗಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಶೀಘ್ರದಲ್ಲಿ ಹೊನ್ನಾಳ-ತುನ್ನೂರ ಸೇತುವೆ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಗುವುದು ಎಂದು ತಿಳಿಸಿದರು.
ಮುಖಂಡರಾದ ರಾಜಶೇಖರ ಸೀರಿ, ವಸಂತ ನರಿಬೋಳ, ಕಾಶಿರಾಯಗೌಡ ಯಲಗೋಡ, ಯುವ ಕಾಂಗ್ರೆಸ್ ಘಟಕದ
ಅಧ್ಯಕ್ಷ ಮಲ್ಲಿಕಾರ್ಜುನ ಬೂದಿಹಾಳ, ನೀಲಕಂಟ ಅವುಂಟಿ, ಅಬ್ದುಲ್ ರಹೇಮಾನ್ ಪಟೇಲ, ಮಹಿಮೂದ್ ನೂರಿ, ಪ್ರಕಾಶ ಹಳಿಮನಿ, ಸುರೇಶ ಗುಡೂರ, ಶರಣು ಗುತ್ತೇದಾರ, ಮರೆಪ್ಪ ಸರಡಗಿ ಸುದ್ದಿಗೋಷ್ಠಿಯಲ್ಲಿದ್ದರು.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕು ನರಿಬೋಳ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಮೈದಾನದಲ್ಲಿ ಜ.16ರಂದು ಮಧ್ಯಾಹ್ನ 3:00ಕ್ಕೆ ಚಾಮನೂರು ಗ್ರಾಮದ ಹತ್ತಿರ ಹೊಸದಾಗಿ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಸಚಿವ ಪ್ರಿಯಾಂಕ ಖರ್ಗೆ ಅವರ ಉಪಸ್ಥಿತಿಯಲ್ಲಿ ಜೇವರ್ಗಿ ಶಾಸಕ ಡಾ| ಅಜಯಸಿಂಗ್ ಅಧ್ಯಕ್ಷತೆ ವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.