ಊರು ಬಿಟ್ಟವರತ್ತ ಗ್ರಾಪಂ ಅಭ್ಯರ್ಥಿಗಳ ಚಿತ್ತ
Team Udayavani, Dec 24, 2020, 3:39 PM IST
ಜೇವರ್ಗಿ: ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ.
ಏತನ್ಮಧ್ಯೆ ಊರು ಬಿಟ್ಟು ಕೆಲಸ ಅರಸಿ ಬೇರೆಡೆ ವಲಸೆ ಹೋಗಿರುವವರು, ಜಿಲ್ಲೆ ಹಾಗೂ ತಾಲೂಕುಕೇಂದ್ರಗಳಲ್ಲಿದ್ದು ಊರಲ್ಲಿಯೇ ಮತದಾನಉಳಿಸಿಕೊಂಡವವರತ್ತ ಗ್ರಾಮ ಪಂಚಾಯಿತಿಅಭ್ಯರ್ಥಿಗಳು ಚಿತ್ತ ಹರಿದಿದೆ. ಊರಿಂದ ದೂರಉಳಿದವರನ್ನು ಚುನಾವಣೆ ದಿನದಂದು ಕರೆಸಿಕೊಳ್ಳಲುಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚುನಾವಣೆ ಅಖಾಡಶುರುವಾಗುತ್ತಿದ್ದಂತೆಯೇ ವಾರ್ಡ್‌ವಾರು ಮತದಾರರಪಟ್ಟಿ ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳುಗ್ರಾಮದಲ್ಲಿ ಇರುವವರು ಯಾರು? ವಲಸೆ ಹೋದವರು ಯಾರು? ಜಿಲ್ಲೆ ಹಾಗೂ ತಾಲೂಕುಕೇಂದ್ರಗಳಲ್ಲಿ ವಾಸ ಮಾಡುತ್ತಿರುವವರು ಯಾರು? ಎನ್ನುವ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಊರು ಬಿಟ್ಟ ಜನರ ಸಂಪರ್ಕ ಸಾಧಿಸುತ್ತಿದ್ದಾರೆ.
ಪಂಚಾಯಿತಿ ಚುನಾವಣೆಯಲ್ಲಿ ಒಂದೊಂದು ಮತವೂ ಸೋಲು-ಗೆಲುವಿಗೆ ನಿರ್ಣಯ ಆಗುವುದರಿಂದ ಅಭ್ಯರ್ಥಿಗಳಿಗೆ ಪ್ರತಿಯೊಂದು ಮತವೂ ಮಹತ್ವದ್ದಾಗಿದೆ. ಹೀಗಾಗಿ ಊರಲ್ಲಿನಮತದಾರರ ಜತೆಗೆ ಹೊರಗಡೆ ಇರುವವರತ್ತಲೂಗಮನ ಕೇಂದ್ರೀಕರಿಸಿ, ಚುನಾವಣೆ ದಿನ ಕರೆಸಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ತಾಲೂಕಿನಿಂದ ಮುಂಬೈ, ಪುಣೆ, ಬೆಂಗಳೂರು, ಹೈದ್ರಾಬಾದ, ಕರಡ್, ಮುಲ್ಕಿ (ಉಡುಪಿ) ಸೇರಿದಂತೆ ಬೇರೆ-ಬೇರೆ ನಗರಗಳಿಗೆ ದುಡಿಯಲು ಹೋದವರೇ ಹೆಚ್ಚು ಜನರಿದ್ದಾರೆ. ಅವರೆಲ್ಲರ ದೂರವಾಣಿ ಸಂಖ್ಯೆ ಸಂಗ್ರಹಿಸಿ ಸಂಪರ್ಕ ಸಾ ಧಿಸಿದ್ದಾರೆ. ಮತದಾನದ ದಿನದಂದು ರೈಲ್ವೆ, ಬಸ್ ಹಾಗೂ ಖಾಸಗಿ ವಾಹನಗಳ ವ್ಯವಸ್ಥೆ ಮಾಡುವ ಮೂಲಕ ಕರೆಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಪ್ರಮುಖವಾಗಿ ಸಾವಿರಾರು ಕೂಲಿ ಕಾರ್ಮಿಕರೆ ಕೆಲಸ ಅರಸಿ ಬೇರೆ ಊರುಗಳಿಗೆ ಹೋಗಿದ್ದಾರೆ. ಇವರಿಗೆ ವಾಹನದ ವ್ಯವಸ್ಥೆ ಜತೆ ಜತೆಗೆ ಗುಂಡು, ತುಂಡಿನ ಆಮೀಷ ಒಡ್ಡಲಾಗುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ
Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.