ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಒತ್ತಾಯ
Team Udayavani, Jun 2, 2019, 9:47 AM IST
ಕಲಬುರಗಿ: ಗ್ರಾಪಂ ನೌಕರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಲಬುರಗಿ: ಗ್ರಾಮ ಪಂಚಾಯಿತಿ ನೌಕರರಿಗೂ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಪಂ ಕಾರ್ಯನಿರ್ವಹಣಾಧಿಕಾರಿ ಕಾರ್ಯಾಲಯದ ಎದುರು ಶನಿವಾರ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ನೌಕರರಿಗೆ ನೀಡುವ ನಿವೃತ್ತ ವೇತನ, ಗಳಿಕೆ ರಜೆ, ವಾರಕ್ಕೊಮ್ಮೆ ವೇತನ ಸಹಿತ ರಜೆ, ವೈದ್ಯಕೀಯ ವಚ್ಚವನ್ನು ಗ್ರಾಪಂ ನೌಕರರಿಗೆ ಕಲ್ಪಿಸಬೇಕು. ಕಳೆದ ಒಂದು ವರ್ಷದಿಂದ ಬಾಕಿ ಉಳಿದ ವೇತನ ಇಎಫ್‌ಎಂಎಸ್‌ಗೆ ಸೇರದಿರುವ ವೇತನ ತೆರಿಗೆ ಸಂಗ್ರಹದಲ್ಲಿ ಕೊಡಬೇಕು. ಎಲ್ಲ ನೌಕರರಿಗೆ ಸೇವಾ ಪುಸ್ತಕ ತೆರೆಯಬೇಕು. ಈಗಾಗಲೇ ನಿವೃತ್ತಿ ಹೊಂದಿದ ನೌಕರರಿಗೆ ನಿವೃತ್ತಿ ಉಪಧನ ಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಸೇವಾ ನಿಯಮಾವಳಿ ರಚಿಸಬೇಕು. ಪಂಚಾಯಿತಿ ನೌಕರರಿಗೆ ಹೊಸ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಬಿಲ್ ಕಲೆಕ್ಟರ್ ಹುದ್ದೆಯಿಂದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಲು 2019ರ ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಪವಿತ್ರಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಬಂದಿದ್ದರಿಂದ ಪಿಡಿಒ ಬಡ್ತಿ, ಗ್ರೇಡ್-1 ಬಡ್ತಿ ನೀಡಿ ಖಾಲಿಯಾದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ನೇಮಕಾತಿ ಮಾಡು ವಂತಾಗಬೇಕೆಂದು ಆಗ್ರಹಿಸಿದರು. ಪಂಪ್ ಆಪರೇಟರ್, ಜವಾನ, ಸ್ವಚ್ಛತಾಗಾರರ ವೃಂದದಿಂದ ಬಿಲ್ ಕಲೆಕ್ಟರ್ ಹುದ್ದೆಗೆ ಹಾಗೂ ಕ್ಲರ್ಕ್, ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಬಡ್ತಿಗೆ ಪರಿಣಿಸಬೇಕೆಂದು ಪ್ರತಿಭಟನಾನಿರತರು ಜಿಪಂ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾಪಂ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ ಹರಸೂರ, ಜಿಲ್ಲಾಧ್ಯಕ್ಷ ಬಾಬುರಾವ ಧುತ್ತರಗಾಂವ, ಶಿವಾನಂದ ಕವಲಗಾ, ಉಮಾಶಂಕರ ಕಡಣಿ ಹಾಗೂ ಇನ್ನಿತರ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.