ಸಾಲಮನ್ನಾಕ್ಕೆ ಆಗ್ರಹಿಸಿ ರೈತ ಸಂಘ-ಹಸಿರು ಸೇನೆ ಪ್ರತಿಭಟನೆ
Team Udayavani, Apr 18, 2017, 2:49 PM IST
ಜೇವರ್ಗಿ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕದ ವತಿಯಿಂದ ಪಟ್ಟಣದ ತಹಶೀಲ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಹೇಶ ಪಾಟೀಲ ಆಲೂರ ಮಾತನಾಡಿ, ಕಳೆದ ಎರಡೂರು ವರ್ಷಗಳಿಂದ ತಾಲೂಕಿನಲ್ಲಿ ಭೀಕರ ಬರಗಾಲ ಆವರಿಸಿ ರೈತಾಪಿ ವರ್ಗ ತೀವ್ರ ಸಂಕಷ್ಟದಲ್ಲಿದೆ. ಆದ್ದರಿಂದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು,
ಎರಡನೇ ಕಂತಿನ ಬೆಳೆವಿಮಾ ಮಂಜೂರಿ ಮಾಡಬೇಕು, ಜೇವರ್ಗಿ ತಾಲೂಕು ಬರಗಾಲವೆಂದು ಘೋಷಣೆ ಮಾಡಿ ಬರಗಾಲ ಕಾಮಗಾರಿ ಆರಂಭಿಸಬೇಕು, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಗೋ ಶಾಲೆ, ಜೇವರ್ಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಸ್ವಾತಂತ್ರ ದೊರಕಿ 70 ವರ್ಷ ಗತಿಸಿದರೂ ತಾಲೂಕಿನ ಕೆಲ ಗ್ರಾಮಗಳಿಗೆ ಬಸ್ ಸೌಕರ್ಯ ಇಲ್ಲದೇ ಜನ ಪರದಾಡುತ್ತಿದ್ದು, ಕೂಡಲೇ ಆ ಗ್ರಾಮಗಳಿಗೆ ಬಸ್ ಸೌಕರ್ಯ ಒದಗಿಸಬೇಕು. ಎಪಿಎಂಸಿ ಆವರಣದಲ್ಲಿ ರೈತ ಭವನ ನಿರ್ಮಾಣ ಮಾಡಬೇಕು, ಗ್ರಾಪಂ ಮಟ್ಟದಲ್ಲಿ ಮೇವು ಕೇಂದ್ರ ಸ್ಥಾಪನೆ ಮಾಡಬೇಕು, ತೊಗರಿ ಖರೀದಿ ಕೆಂದ್ರದಲ್ಲಿ ನಡೆಯುತ್ತಿರುವ ಅಕ್ರಮ ತಡೆಗಟ್ಟಬೇಕು,
ಮಲ್ಲಾಬಾದ ಏತನೀರಾವರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಬೇಕು, ನರಿಬೋಳ-ಚಾಮನೂರ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಬೇಕು. ಈ ಎಲ್ಲ ಬೇಡಿಕೆಗಳು ಶೀಘ್ರದಲ್ಲಿ ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ನಂತರ ಗ್ರೇಡ್-2 ತಹಶೀಲ್ದಾರ ಶರಣಬಸಪ್ಪ ಮುಡುಬಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಲ್ಲಪ್ಪ ಕೂಟನೂರ, ಶರಣು ಕೂಡಿ, ಅನೀಲ ಪವಾರ, ಸುರೇಶ ನೇದಲಗಿ, ಸಂತೋಷ ಮಲ್ಲಾಬಾದ, ನಾಗು ತಳವಾರ, ಯುನೂಸ್ ಪಟೇಲ, ಮಾಂತೇಶ ಭಾಗೇವಾಡಿ, ಮಹೆಬೂಬ ಪಟೇಲ, ಮಾಣಿಕ ಪ್ರಭು, ಖಾಜಾ ಪಟೇಲ, ವಿಶಾಲ ಪವಾರ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.