ಸೇವಾ ಭದ್ರತೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಧರಣಿ
Team Udayavani, Jan 5, 2018, 10:41 AM IST
ಕಲಬುರಗಿ: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಧರಣಿನಿರತರು, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ ಅನೇಕ ವರ್ಷಗಳಿಂದ ಅರೆಕಾಲಿಕ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಯಾವುದೇ ಸೇವಾ ಭದ್ರತೆಯಿಲ್ಲದೇ ಅತಂತ್ರ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ.
ಸೇವೆ ಸಲ್ಲಿಸುತ್ತಿರುವ ಬಹುತೇಕರ ಉಪನ್ಯಾಸಕರ ವಯೋಮಿತಿ ಮೀರಿದೆ. ಸರ್ಕಾರದ ಯಾವುದೇ ನೌಕರರಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶವಿಲ್ಲ. ಈ ಬಗ್ಗೆ ಹಲವಾರು ವರ್ಷದಿಂದ ಸಂಬಂಧಿಸಿದ ಅಧಿಕಾರಿಗಳು, ಸಚಿವರು ಹಾಗೂ
ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು ಈ ವರೆಗೆ ಯಾವ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
2016-17ನೇ ಸಾಲಿನ ಎರಡೂವರೆ ತಿಂಗಳ ಹಾಗೂ ಪ್ರಸಕ್ತ 2017-18ರ ಸಾಲಿನ ಒಂದು ಸೆಮಿಷ್ಟರ್ ಮುಗಿದು ಎರಡನೇ ಸೆಮಿಸ್ಟರ್ ಆರಂಭವಾದರೂ ಈ ವರೆಗೆ ವೇತನ ನೀಡಿಲ್ಲ. ವೇತನ ನೀಡುವ ಜತೆಗೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು. ಸಂಘದ ಅಧ್ಯಕ್ಷ ಜಗಪ್ಪ ತಳವಾರ, ಭಗವಾನಸಿಂಗ ರಜಪೂತ, ಅಣವೀರಪ್ಪ ಬೋಳೆವಾಡ, ರಮೇಶ ಕವಡೆ ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.