ಮೋದಿ ಸ್ವಾಗತ-ರ್ಯಾಲಿಗೆ ಕಲಬುರಗಿ ಸಜ್ಜು


Team Udayavani, Mar 6, 2019, 5:56 AM IST

gul-2.jpg

ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಭಾಷಣಗೈಯಲು ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ಹಾಗೂ ಬಹಿರಂಗ ಸಭೆಗೆ ಮಹಾನಗರ ಸಜ್ಜಾಗಿದ್ದು, ನೂತನ ವಿದ್ಯಾಲಯ ಮೈದಾನದಲ್ಲಿ ಬೃಹತ್‌ ವೇದಿಕೆ ನಿರ್ಮಾಣಗೊಂಡಿದೆ.

ಬುಧವಾರ ಬೆಳಗ್ಗೆ 8:50ಕ್ಕೆ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೀದರ್‌ ವಾಯು ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 10:50ಕ್ಕೆ ಬಂದು ತಲುಪುವರು. ತದನಂತರ ಅಲ್ಲಿಂದೆ ಹೆಲಿಕ್ಯಾಪ್ಟರ್‌ ಮೂಲಕ ಕಲಬುರಗಿ ಮಹಾನಗರಕ್ಕೆ ಬೆಳಿಗ್ಗೆ 11.35ಕ್ಕೆ ಆಗಮಿಸುವರು. ಬೆಳಿಗ್ಗೆ 11.45 ರಿಂದ ಮಧ್ಯಾಹ್ನ 12 ವರೆಗೆ ಆಯುಷ್ಮಾನ ಭಾರತ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ತದನಂತರ 10 ನಿಮಿಷಗಳ ಕಾಲ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.

ಎರಡೂಮೂರು ದಿನಾಂಕಗಳನ್ನು ಮುಂದೂಡಿಕೆಯಾಗಿ ಮಾರ್ಚ್‌ 6ರಂದು ನಿಗದಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ಸಭೆಗೆ ಸಾರ್ವಜನಿಕರೂ ಹೆಚ್ಚಿನ ನಿರೀಕ್ಷೆ ಹೊಂದಿದ್ದು, ಭಾಷಣ ಆಲಿಸಲು ಉತ್ಸುಕತೆ ಹೊಂದಿದ್ದಾರೆ. ಮುಖ್ಯವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಡಾ| ಉಮೇಶ ಜಾಧವ್‌ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಸಾಧ್ಯವಾದರೆ ಇದೇ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿಯನ್ನಾಗಿ ಡಾ| ಉಮೇಶ ಜಾಧವ್‌ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ.

ಕಮಲ ಪಕ್ಷದಲ್ಲಿ ಉತ್ಸಾಹ: ಅಣ್ಣ ಬಸವಣ್ಣನವರ ಕಾಯಕವೇ ಕೈಲಾಸ ತತ್ವದಂತೆ ದಿನಾಲು 18 ಗಂಟೆ ಕಾಲ ಈ ಭಾರತ ದೇಶದ ಸರ್ವೋತುಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹಾಗೂ ಬಸವಾದಿ ಶರಣರ ಕುರಿತಾಗಿ ಸುದೀರ್ಘ‌ವಾಗಿ ಮಾತನಾಡುವ ದೇಶದ ಪ್ರಧಾನಿ ನರೇಂದ್ರಮೋದಿ ಅವರು
ಶಿವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಕಲ್ಯಾಣ ನಾಡಿನ ಹೆಬ್ಟಾಗಿಲು ಕಲಬುರಗಿಗೆ ಆಗಮಿಸುತ್ತಿರುವುದರಿಂದ ಪಕ್ಷದಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಕಳೆದ ವಿಧಾನಸಭೆ ಹಾಗೂ 2014ರ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲೂ ಬಿಸಿಲು ನಾಡು ಕಲಬುರಗಿಗೆ ಬಂದು ಕಹಳೆ ಮೊಳಗಿದ್ದ ಪ್ರಧಾನಿ ಮೋದಿ ಈಗಲೂ ಹಿಂದೆಂದಿಗಿಂತಲೂ ಈ ಭಾಗದ ಜನತೆಯ ಉತ್ಸಾಹ ಮೇರೆಗೆ ಹಾಗೂ ಪಕ್ಷ ಕಲ್ಯಾಣ ಭಾಗದಲ್ಲಿ ಮತ್ತಷ್ಟು ಗಟ್ಟಿಯೂರಲು ಈ ಕಾರ್ಯಕ್ರಮ ಪೂರಕವಾಗಲಿದೆ ಎನ್ನಲಾಗುತ್ತಿದೆ. 

ಕಳೆದ ಮೇ 3ರಂದು ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿ ಇದೇ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಪ್ರಚಾರಸಭೆಯಲ್ಲಿ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಈಗಲೂ ಅದೇ ಮೈದಾನದಲ್ಲಿ ಬೃಹತ್‌ ರ್ಯಾಲಿ ಹಾಗೂ ಭಾರಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಒಟ್ಟಾರೆ ಕಲ್ಯಾಣ ಕರ್ನಾಟಕದ ಬೀದರ್‌, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಿಂದ
ಪ್ರತಿ ಕ್ಷೇತ್ರದಿಂದ ಸಹಸ್ರಾರು ಜನ ಪಾಲ್ಗೊಳ್ಳಲಿದ್ದು, ಐತಿಹಾಸಿಕತೆಗೆ ಸಾಕ್ಷಿಯಾಗಲಿದ್ದಾರೆ.

ಕಲಬುರಗಿದು ನಾಲ್ಕನೇ ಭೇಟಿ: ಪ್ರಧಾನಿ ನರೇಂದ್ರ ಮೋದಿ ಚುನಾವಣೆಂದು ಕಲಬುರಗಿಗೆ ಭೇಟಿ ನೀಡುತ್ತಿರುವುದು ಇದು ನಾಲ್ಕನೇ ಬಾರಿಯಾಗಿದೆ. 2008ರ ಸಾರ್ವತ್ರಿಕ ವಿಧಾನಸಭೆ ಚುನಾವಣಾ ಪ್ರಚಾರಕ್ಕಾಗಿ ಪ್ರಥಮ ಸಲ ಕಲಬುರಗಿಗೆ ಆಗಮಿಸಿದ್ದರು. ಪ್ರತಿಯೊಂದು ಸಲ ಭೇಟಿ ನೀಡಿದಾಗ ಮಾಡಿರುವ ಭಾಷಣ ಹಾಗೂ ಮಾತುಗಳನ್ನು ಇಲ್ಲಿಯ ಜನ ಇನ್ನೂ ನೆನಪಿಸಿಕೊಳ್ಳುತ್ತಾರೆ.

2008ರ ಸಾರ್ವತ್ರಿಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ವೇಳೆ ಕಲಬುರಗಿ ನಗರದ ಖೂಬಾ ಪ್ಲಾಟ್‌ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವುದನ್ನು ಇನ್ನೂ ಜನಮಾಸದಿಂದ ಮಾಸಿಯೇ ಇಲ್ಲ. ಇನ್ನೂ ಗುಂಯ್‌ ಕುಟ್ಟುತ್ತಿವೆ.
 
ಕಲಬುರ್ಗಿ ದಕ್ಷಿಣ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ ಪಾಟೀಲ ರೇವೂರ ಹಾಗೂ ಕಲಬುರ್ಗಿ ಉತ್ತರ ಮತಕ್ಷೇತ್ರದ ಅಭ್ಯರ್ಥಿ ಬಿ.ಜಿ. ಪಾಟೀಲ ಪರ ಚುನಾವಣಾ ಪ್ರಚಾರ ಮಾಡಿದ್ದರು. ಅದೇ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ಚಂದ್ರಶೇಖರ ಪಾಟೀಲ ರೇವೂರ 14290 ಮತಗಳ ಅಂತರದಿಂದ ಎರಡನೇ ಬಾರಿಗೆ ಚುನಾಯಿತರಾದರು.

ತದನಂತರ 2014ರ ಫೆ. 28ರಂದು ಲೋಕಸಭಾ ಚುನಾವಣೆ ಮುಂಚೆ ಪ್ರಧಾನಿ ಅಭ್ಯರ್ಥಿ ಎಂಬುದಾಗಿ ಘೋಷಣೆಯಾದ ನಂತರ ಕಲಬುರಗಿಗೆ ಆಗಮಿಸಿ ಇಲ್ಲಿನ ಜೇವರ್ಗಿ ರಸ್ತೆಯ ಅಟಲ್‌ ಬಿಹಾರಿ ವಾಜಪೇಯಿ ಜಿಡಿಎ ಬಡಾವಣೆಯಲ್ಲಿ ಬೀದರ್‌, ಕಲಬುರಗಿ, ರಾಯಚೂರು ಲೋಕಸಭಾ
ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಆಗ ಗುಜರಾತ್‌ ರಾಜಧಾನಿ ಗಾಂಧಿನಗರದಿಂದ ವಿಮಾನ ಮೂಲಕ ಬೀದರ್‌ಗೆ ಬಂದಿಳಿದು, ತದನಂತರ ಹೆಲಿಕ್ಯಾಪ್ಟರ್‌ ಮೂಲಕ ಕಲಬುರಗಿಗೆ ಬಂದಿದ್ದರು. ಅದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 2018ರ ಮೇ. 3ರಂದು ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಮಾಡಿ ಸೂರ್ಯನಷ್ಟೇ ಪ್ರಖರ ಭಾಷಣ ಮಾಡಿದ್ದರು. ಆ ಸಂದರ್ಭದಲ್ಲಿ ದಲಿತರ ಮತಗಳನ್ನು ಪಡೆದ ಕಾಂಗ್ರೆಸ್‌ ಪಕ್ಷವು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡದೇ ಪಕ್ಷ ಅವರನ್ನು ಕೈ ಕೊಟ್ಟಿದೆ ಎಂದು ಅನುಕಂಪದ ಮಾತುಗಳನ್ನಾಡಿದ್ದರು. ಆದರೆ ಈ ಸಲ ಪ್ರಚಾರಕ್ಕೆ ಬಂದು ಏನು ಹೇಳ್ತಾರೆ ಎಂಬುದು ಕುತೂಹಲ ಮೂಡಿಸಿದೆ. 

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.