ಹೈಕ ಭಾಗದಲ್ಲಿ ಆಲಿಕಲ್ಲು ಮಳೆ-ಭತ್ತ ಹಾನಿ


Team Udayavani, Apr 16, 2018, 12:50 PM IST

gul-2.jpg

ಗೊರೇಬಾಳ: ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ರವಿವಾರ ಮಧ್ಯಾಹ್ನ ಭಾರೀ ಗಾಳಿಯೊಂದಿಗೆ ಸುರಿದ ಆಲಿಕಲ್ಲು ಮಳೆ ವೇಳೆ ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹಾಗೂ ಮೂರು ಕುರಿಗಳು ಮೃತಪಟ್ಟಿವೆ.

ಸಾಲಗುಂದಾ ಗ್ರಾಮದ ಮಹಿಬೂಬಸಾಬ ರಾಜಾಸಾಬ್‌ (19) ಮೃತ ಯುವಕ. ಕುರಿ ಮೇಯಿಸಲು ಹೋಗಿದ್ದ ಮಹಿಬೂಬಸಾಬ 2 ಗಂಟೆ ಸುಮಾರಿಗೆ ಬಿರುಗಾಳಿ ಹಾಗೂ ಆಲಿಕಲ್ಲು ಮಳೆ ಬರುವಾಗ ಮರವೊಂದರ ಕೆಳಗೆ ಆಶ್ರಯ ಪಡೆದಿದ್ದಾನೆ. ಈ ಸಂದರ್ಭದಲ್ಲಿ ಜವರಾಯನಂತೆ ಸಿಡಿಲು ಅಪ್ಪಳಿಸಿದೆ. ಪಕ್ಕದ ಮರವೊಂದರ ಕೆಳಗೆ ನಿಂತಿದ್ದ ಗೌರಮ್ಮ ದುರುಗಪ್ಪ ಎನ್ನುವ ಮಹಿಳೆಗೆ ಸಿಡಿಲಿನ ಶಬ್ದಕ್ಕೆ ಕಿವಿ ಕೇಳದಂತಾಗಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪಿಎಸ್‌ಐ ಸುಶೀಲಕುಮಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ವಿವಿಧ ಪಕ್ಷಗಳ ಮುಖಂಡರಾದ ಕೆ.ಕರಿಯಪ್ಪ, ಬಸವರಾಜ ನಾಡಗೌಡ, ಎಂ. ದೊಡ್ಡಬಸವರಾಜ, ಪರಮೇಶಪ್ಪ ದಡೇಸ್ಗೂರು, ರಾಜುಗೌಡ ಬಾದರ್ಲಿ ಸೇರಿದಂತೆ ಅನೇಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಭತ್ತ ಬೆಳೆ ಹಾನಿ: ರವಿವಾರ ಮಧ್ಯಾಹ್ನ ಸುರಿದ ಆಲಿಕಲ್ಲು ಮಳೆಗೆ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಸಿಂಧನೂರು ತಾಲೂಕಿನ ಶಾಂತಿನಗರ, ಬಸಾಪುರ, ಗೊರೇಬಾಳ, ಲಕ್ಷ್ಮೀಕ್ಯಾಂಪ್‌, ಸಾಲಗುಂದಾ ಹಾಗೂ ಇತರೆಡೆ ಬಿರುಗಾಳಿಯೊಂದಿಗೆ ಆಲಿಕಲ್ಲು ಮಳೆ ಸುರಿದ್ದು, ಭತ್ತ ಬೆಳೆ ನೆಲಕಚ್ಚಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಬಿರುಗಾಳಿ ಹೊಡೆತಕ್ಕೆ ಅನೇಕ ಮನೆಗಳ ತಗಡಿನ ಮೇಲ್ಛಾವಣಿಗಳು ಹಾರಿಹೋಗಿವೆ. ಜೊತೆಗೆ ಅನೇಕ ಮರಗಳು ಧರೆಗುರುಳಿವೆ. ಸಿಂಧನೂರು-ಗಂಗಾವತಿ ರಸ್ತೆಯಲ್ಲಿ ಎರಡು ಮರೆಗಳು ರಸ್ತೆಗುರುಳಿದ್ದು, ಕೆಲ ಕಾಲ ಸಂಚಾರಕ್ಕೆ ತೊಂದರೆ ಉಂಟಾಯಿತು. ಮಳೆ-ಗಾಳಿಗೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸುವಂತೆ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗ್ರೇಡ್‌-2 ತಹಶೀಲ್ದಾರ್‌ ಶಂಶಾಲಂ ನಾಗಡದಿನ್ನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.