ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ
Team Udayavani, Oct 10, 2019, 1:04 PM IST
ಕಲಬುರಗಿ: ಚುನಾವಣೆ ಸಮಯದಲ್ಲಿ ಕಾರ್ಯಕರ್ತರ ಬಲ ಕುಗ್ಗಿಸುವ ದೃಷ್ಟಿಯಿಂದ ಐಟಿ ದಾಳಿ ಮಾಡಲಾಗುತ್ತಿದೆ ಎಂದು ಎಐಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ರೇಡ್ ವಿಚಾರವಾಗಿ ಮಾತನಾಡಿದ ಅವರು, ದ್ವೇಷದ ರಾಜಕೀಯ ನಿರಂತರವಾಗಿ ನಡೆಯುತ್ತಿದೆ. ಸ್ವಾಯತ್ತ ಸಂಸ್ಥೆಗಳ ಮೇಲಿನ ನಂಬಿಕೆ ಕಡಿಮೆಯಾಗುತ್ತಿದೆ. ಕೆಲವು ಪಕ್ಷ ಮತ್ತು ಕೆಲವರನ್ನು ಟಾರ್ಗೆಟ್ ಮಾಡಿ ಐಟಿ ರೈಡ್ ಮಾಡಲಾಗುತ್ತಿದೆ. ರಾಜಕೀಯ ಪ್ರೇರಿತ ದಾಳಿ ನಿಲ್ಲಿಸಬೇಕು. ತಪ್ಪು ಮಾಡಿದ್ದರೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಲಿ. ವಿರೋಧ ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ಮೇಲೆ ದುರುದ್ದೇಶದಿಂದ ದಾಳಿ ಮಾಡುವುದು ಸರಿಯಲ್ಲ ಎಂದರು.
ವಿರೋಧ ಪಕ್ಷದ ನಾಯಕ ಆಯ್ಕೆ ಪ್ರಕ್ರಿಯೆ ನಿರಂತರವಾದುದು. ಇದು ಹೈಕಮಾಂಡ್ ನಿರ್ಧಾರ. ಸಿಎಲ್ ಪಿ ನಾಯಕ ಇಲ್ಲಿ ವಿರೋಧ ಪಕ್ಷದ ನಾಯಕರಾಗುತ್ತಾರೆ. ಇದು ಉತ್ತಮ ಬೆಳವಣಿಗೆ ಎಂದು ವಿವರಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.