ಗ್ರಾಮೀಣ ಪತ್ರಕರ್ತರಿಗೆ ಹೆಲ್ತ್ ಕಾರ್ಡ್, ಬಸ್ ಪಾಸ್: ಸಿಎಂ
ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಮುಂದುವರಿಕೆ
Team Udayavani, Jan 5, 2022, 8:10 AM IST
ಕಲಬುರಗಿ: ಮಾರುಕಟ್ಟೆ ಆಧಾರಿತ ವ್ಯವಹಾರದ ನಡುವೆಯೂ ಜನಪರ ಆದ್ಯತೆಗಳು ಮತ್ತು ಅಂತಃಕರಣವನ್ನು ಪತ್ರಿಕೆಗಳು ಕಾಯ್ದುಕೊಳ್ಳುತ್ತಿವೆ. ತಮ್ಮ ಲೇಖನಗಳ ಮೂಲಕ ಆಡಳಿತ ವರ್ಗವನ್ನೂ ಪತ್ರಿಕೆಗಳು ಎಚ್ಚರದ ಸ್ಥಿತಿಯಲ್ಲಿ ಇಟ್ಟಿವೆ. ಗ್ರಾಮೀಣ ಪತ್ರಕರ್ತರಿಗೆ ಹೆಲ್ತ್ ಕಾರ್ಡ್ ಮತ್ತು ಬಸ್‌ಪಾಸ್ ವಿತರಣೆಗೆ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಮಂಗಳವಾರ ನಡೆದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗೀಕರಣ, ಉದಾರೀಕರಣ, ಜಾಗತೀಕರಣದಿಂದ ಮಾರುಕಟ್ಟೆ ಆಧಾರಿತ ವ್ಯವಹಾರ ಇದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಯಾವ ಪತ್ರಿಕೆ ಕೂಡ ಆರ್ಥಿಕ ಬಿಕ್ಕಟ್ಟಿನಿಂದ ಪ್ರಕಟಣೆ ಸ್ಥಗಿತಗೊಳಿಸುವ ಪರಿಸ್ಥಿತಿ ಬರಬಾರದು. ಈ ನಿಟ್ಟಿನಲ್ಲಿ ಸರ್ಕಾರ ಕಾಳಜಿ ವಹಿಸಿ ಪತ್ರಿಕೆಗಳಿಗೆ ಅಗತ್ಯವಿರುವ ಜಾಹೀರಾತು ಬಿಡುಗಡೆ ಮಾಡಲಾಗುತ್ತದೆ. ಜತೆಗೆ ಪತ್ರಕರ್ತರಿಗೆ ಅಗತ್ಯವಾದ ಸೌಕರ್ಯಗಳನ್ನು ಒದಗಿಸಲು ಸರ್ಕಾರದ ಬದ್ಧವಾಗಿದ್ದು, ಹೆಲ್ತ್ ಕಾರ್ಡ್ ಮತ್ತು ಬಸ್ ಪಾಸ್ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಕ್ರಮ ವಹಿಸಲಾಗುವುದು ಎಂದರು.
ಕೊರೊನಾ ಸಂದರ್ಭದಲ್ಲಿ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿ ಕಾರ್ಯ ನಿರ್ವಹಿಸಿದ್ದಾರೆ. ಇದರಲ್ಲಿ ಹಲವು ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಐದು ಲಕ್ಷ ರೂ. ಪರಿಹಾರ ನೀಡಿದ್ದರು. ಇದನ್ನು ನಾನೂ ಮುಂದುವರಿಸುತ್ತಿದ್ದೇನೆ. ಪತ್ರಕರ್ತರು-ರಾಜಕಾರಣಿಗಳು ಪರಸ್ಪರ ಅವಿನಾಭಾವ ಸಂಬಂಧ ಹೊಂದಿರುತ್ತಾರೆ. ಇದು ಸಮಾಜದ ಒಳಿತಿಗೆ ಬಳಕೆಯಾಗಬೇಕೆಂದು
ಪ್ರತಿಪಾದಿಸಿದರು.
ಇದನ್ನೂ ಓದಿ:ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ : ವೈದ್ಯರಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಹುಣಸವಾಡಿ ರಾಜನ್, ದಿನೇಶ ಅಮಿನ್‌ಮಟ್ಟು, ಎಂ.ಕೆ. ಭಾಸ್ಕರರಾವ್, ಟಿ.ವಿ.ಶಿವಾನಂದನ್ ಸೇರಿ ಹಲವರಿಗೆ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿಗಳನ್ನು ಸಿಎಂ ಬೊಮ್ಮಾಯಿ ಪ್ರದಾನ ಮಾಡಿ ಗೌರವಿಸಿದರು.
ಶರಣಬಸವೇಶ್ವರ ಸಂಸ್ಥಾನದ ಪೀಠಾಧಿ ಪತಿ ಡಾ.ಶರಣಬಸವಪ್ಪ ಅಪ್ಪ ಸಾನಿಧ್ಯ ವಹಿಸಿದ್ದರು. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ, ಸಂಸದ ಡಾ| ಉಮೇಶ ಜಾಧವ, ಸಚಿವ ಮುರುಗೇಶ ನಿರಾಣಿ, ಅರಣ್ಯ ಪ್ರಾ ಧಿಕಾರದ ಅಧ್ಯಕ್ಷೆ ತಾರಾ ಅನುರಾಧ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ, ಹಿರಿಯ ಪತ್ರಕರ್ತರಾದ ಹರಿಪ್ರಕಾಶ ಕೋಣೆಮನೆ, ಕೆ.ಎನ್. ಚೆನ್ನೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಪತ್ರಕರ್ತರ ಸಮ್ಮೇಳನದಲ್ಲಿ ಚರ್ಚೆ ಮಾಡಿದ ನಿರ್ಣಯಗಳ ಕರಡನ್ನು ಸರ್ಕಾರಕ್ಕೆ ಕಳುಹಿಸಿಕೊಡಿ. ಅವುಗಳ ಜಾರಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ.
-ಬಸವರಾಜ ಬೊಮ್ಮಾಯಿ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.