8 ಸಾವಿರ ಜನ ನಿರಾಶ್ರಿತರು
ಬಟ್ಟೆ-ಬರೆ ಬಿಟ್ಟು ಊರು ತೊರೆದ ಮಂದಿ | ಭೀಮಾ ನದಿ ಪಾತ್ರದ ಗ್ರಾಮಸ್ಥರಲ್ಲಿ ಹೆಚ್ಚಿದ ಭೀತಿ
Team Udayavani, Oct 16, 2020, 5:03 PM IST
ಅಫಜಲಪುರ: ಸೊನ್ನ ಗ್ರಾಮದಲ್ಲಿರುವ ಭೀಮಾ ಬ್ಯಾರೇಜ್‌ನಿಂದ 5.11 ಲಕ್ಷ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಕಲಬುರಗಿ: ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದು, ಎರಡು ದಿನದಲ್ಲಿ ಎಂಟು ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಇದೀಗ ಮಹಾರಾಷ್ಟ್ರದಿಂದ ಭೀಮ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಟ್ಟೆ-ಬರೆ ಬಿಟ್ಟು ಊರುಗಳನ್ನು ತೊರೆಯುವ ಪರಿಸ್ಥಿತಿ ಎದುರಾಗಿದೆ.
ಮುಂಗಾರು ಆರಂಭದಿಂದಲೂ ಮಳೆರಾಯ ಅಬ್ಬರಿಸುತ್ತಿದ್ದು, ಮಂಗಳವಾರ ರಾತ್ರಿ ಸುರಿದ ಒಂದೇ ಒಂದು ಮಳೆಗೆ ಗ್ರಾಮೀಣ ಜನರ ಬದುಕು ನೀರು ಪಾಲಾಗಿದೆ. ಗುರುವಾರ ಮಳೆ ಸ್ವಲ್ಪ ಬಿಡುವು ಕೊಟ್ಟಿದೆ ಎಂದು ನಮ್ಮೆದಿಯ ನಿಟ್ಟುನಿರು ಬಿಡುವಷ್ಟರಲ್ಲೇ “ಮಹಾ’ ನೀರಿನಿಂದಾಗಿ ಅತಂತ್ರರಾಗುವಂತೆ ಮಾಡಿದೆ.
ಅಫಲಜಪುರ ತಾಲೂಕಿನ ಸೊನ್ನ ಬ್ಯಾರೇಜ್ ಗೆ ದಾಖಲೆ ಪ್ರಮಾಣ ನೀರು ಹರಿದು ಬರುತ್ತಿದ್ದು, ನದಿ ಪಾತ್ರಗಳಲ್ಲಿ ಬರುವ ಜೇವರ್ಗಿ, ಚಿತ್ತಾಪುರ, ಅಫಜಲಪುರ, ಕಲಬುರಗಿ ಮತ್ತು ಸೇಡಂ ತಾಲೂಕಿನ 148 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಆಯಾ ಗ್ರಾಮಗಳ ನದಿ ಪಾತ್ರಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ. ರಸ್ತೆ ಸಂಪರ್ಕ ಬಂದ್: ಭೀಮ ನದಿಗೆ ಅಡ್ಡಲಾಗಿರುವ ಘತ್ತಗರಿ, ದೇವಲಗಾಣಗಾಪುರ, ಚಿನಮಳ್ಳಿ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿವೆ.ಅಪಾಯ ಮಟ್ಟ ಮೀರಿ ನದಿ ಹರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸದ್ಯಕ್ಕೆ ಪರ್ಯಾಯವಾಗಿಕೋನಹಿಪ್ಪರಗ ಮತ್ತು ಸರಡಗಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಕಲಬುರಗಿ-ಸೇಡಂ, ಚಿತ್ತಾಪುರ-ಕಲಬುರಗಿ, ಶಹಾಬಾದ-ಕಲಬುರಗಿ, ಶಹಬಾದ-ಚಿತ್ತಾಪುರಸಂಪರ್ಕಗಳ ಸಹ ಸಂಪೂರ್ಣ ಕಡಿತಗೊಂಡಿವೆ.ಇದರಿಂದ ಪ್ರಯಾಣಿಕರು ಸಹ ಪರದಾಡುವಂತೆ ಆಗಿದೆ. ಇತ್ತ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ದೂರವಾಣಿಯೊಂದಿಗೆ ಜಿಲ್ಲಾಧಿಕಾರಿಗಳಿಂದ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜಿಲ್ಲಾಧಿಕಾರಿಗಳು ಸಹ ಸ್ಥಳೀಯ ಅಧಿಕಾರಿಗಳ ಸಭೆ ನಡೆಸಿ ಜನರಿಗೆ ತೊಂದರೆ ಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಜನರ ರಕ್ಷಣೆಗೆ ಆದ್ಯತೆ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಿಂದಾಗಿ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಯೇ ಜಿಲ್ಲಾಡಳಿತದ ಪ್ರಥಮ ಆದ್ಯತೆ ಆಗಿದೆ. ಮುಂದಿನ ಎರಡು ದಿನಗಳಲಿಯೂ ಜಿಲ್ಲೆಯಲ್ಲಿಹೆಚ್ಚಿನ ಮಳೆಯಾಗುವ ಕುರಿತು ಹವಾಮಾನ ಇಲಾಖೆರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಗೆ ಎರಡು ಎನ್‌ಡಿಆರ್ ಎಫ್ ತಂಡಗಳನ್ನು ಜಿಲ್ಲೆಗೆ ಕರೆಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ತಿಳಿಸಿದ್ದಾರೆ.
ಕಳೆದ ಎರಡು ದಿನದಲ್ಲಿ ಜಿಲ್ಲಾದ್ಯಂತ ಪ್ರವಾಹದಲ್ಲಿ ಸಿಲುಕಿದ 150ಕ್ಕಿಂತ ಹೆಚ್ಚಿನ ಜನರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಎನ್‌ಡಿಆರ್‌ಎಫ್ ತಂಡದೊಂದಿಗೆ ಪೊಲೀಸ್, ಕಂದಾಯ, ಅಗ್ನಿಶಾಮಕ ತಂಡಗಳು ಈಗಾಗಲೇ ಬಿಡಾರ ಹೂಡಿವೆ. ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲು ಜಿಲ್ಲಾದ್ಯಂತ 50ಕ್ಕೂ ಹೆಚ್ಚು ಕಾಳಜಿ ಕೇಂದ್ರ ತೆರೆಯಲಾಗಿದೆ. ಎಂಟು ಸಾವಿರಕ್ಕೂ ಹೆಚ್ಚಿನ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.