![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 10, 2022, 4:24 PM IST
ಸೇಡಂ: ವರುಣನ ಆರ್ಭಟಕ್ಕೆ ಅನ್ನದಾತ ಕಂಗಾಲಾಗಿದ್ದು, ಈ ಹಿಂದೆ ಸುರಿದ ಜಿಟಿ-ಜಿಟಿ ಮಳೆಗೆ ಮುಂಗಾರು ಬಿತ್ತನೆ ಮಾಡಿದ ಹೆಸರು, ಉದ್ದು ಹಾಳಾದರೆ, ಇದೀಗ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಮಾಡಿದ ತೊಗರಿ ಯನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಈ ಹಿಂದೆ ಮುಂಗಾರು ಬಿತ್ತನೆ ಮಾಡಿದ್ದ ರೈತರಿಗೆ ಜಿಟಿ-ಜಿಟಿ ಮಳೆ, ಬಸವನ ಹುಳು, ಕಾಂಡ ನೊಣ, ಮ್ಯಾಕ್ರೋಫೋಮಿನಾ ಶಿಲೀಂಧ್ರ ರೋಗಗಳಿಂದ ಬೆಳೆ ನಷ್ಟ ಉಂಟಾಗಿತ್ತು. ತಾಲೂಕಿನ ಆಡಕಿ ವಲಯದಲ್ಲಿ 9985 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, 2185 ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. 1580 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಲಾಗಿದ್ದು, 155 ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. 650 ಹೆ. ಪ್ರದೇಶದಲ್ಲಿ ಉದ್ದು ಬಿತ್ತನೆ ಮಾಡಿದ್ದು, 15 ಹೆ. ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಕೋಡ್ಲಾ ವಲಯದಲ್ಲಿ 20250 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, 5630 ಹೆ. ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. 1830 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಲಾಗಿದ್ದು, 255 ಹೆ. ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. 1850 ಹೆ. ಪ್ರದೇಶದಲ್ಲಿ ಉದ್ದು ಬಿತ್ತನೆ ಮಾಡಿದ್ದು, 30 ಹೆ. ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಮುಧೋಳ ವಲಯದಲ್ಲಿ 18325 ಹೆ. ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, 5325 ಹೆ. ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. 1895 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಲಾಗಿದ್ದು, 295 ಹೆ.ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. 1350 ಹೆ. ಪ್ರದೇಶದಲ್ಲಿ ಉದ್ದು ಬಿತ್ತನೆ ಮಾಡಿದ್ದು, 25 ಹೆ. ಪ್ರದೇಶದಲ್ಲಿ ನಷ್ಟ , ಸೇಡಂ ವಲಯದಲ್ಲಿ 20850 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, 4350 ಹೆ. ಪ್ರದೇಶದಲ್ಲಿ ನಷ್ಟ, 2530 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಲಾಗಿದ್ದು, 250 ಹೆಕ್ಟೇರ್ ಪ್ರದೇಶದಲ್ಲಿ ನಷ್ಟ, 1750 ಹೆಕ್ಟೇರ್ ಪ್ರದೇಶದಲ್ಲಿ ಉದ್ದು ಬಿತ್ತನೆ ಮಾಡಿದ್ದು, 35 ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ. ಒಟ್ಟಾರೆ 18550 ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಬೆಳೆಹಾನಿ ಕುರಿತು ಈಗಾಗಲೇ ಸಮೀಕ್ಷೆ ಕಾರ್ಯ ಆರಂಭ ಮಾಡಲಾಗಿದೆ. ಸತತವಾಗಿ ಮಳೆ ಬರುತ್ತಿರುವ ಕಾರಣಕ್ಕೆ ಸಮೀಕ್ಷೆ ಕಾರ್ಯ ವಿಳಂಬವಾಗುತ್ತಿದೆ. ಸರ್ವೇ ಕಾರ್ಯ ತ್ವರಿತವಾಗಿ ಮಾಡಲು ಕಂದಾಯ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಈ ಎಲ್ಲ ಇಲಾಖೆಗಳ ತಂಡ ಪ್ರತಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ನಿಖರ ವರದಿ ಸಿದ್ಧಪಡಿಸಿ ನೀಡಲಿವೆ. -ಬಸವರಾಜ ಬೆಣ್ಣೆಶಿರೂರ, ತಹಶೀಲ್ದಾರ್
ಸತತ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಲವೆಡೆ ಬೆಳೆ ನಷ್ಟ ಉಂಟಾಗಿದ್ದು, 26276 ರೈತರು ಈಗಾಗಲೇ ಬೆಳೆ ವಿಮೆ ಮಾಡಿಸಿದ್ದಾರೆ. ವಿಮೆ ಮಾಡಿಸಿದ ರೈತರು ಬೆಳೆ ನಷ್ಟವಾದ 72 ಗಂಟೆಯಲ್ಲಿ ವಿಮಾ ಕಂಪನಿಯ ಟೋಲ್ ಫ್ರೀ ಸಂಖ್ಯೆಗೆ ದೂರು ನೀಡಬೇಕು. ವಿಮಾ ಕಂಪನಿ ಹಾಗೂ ಕೃಷಿ ಇಲಾಖೆಯಿಂದ ಸಮೀಕ್ಷೆ ನಡೆಸಿ ಹಾನಿಯ ಪ್ರಮಾಣವನ್ನು ಆಧರಿಸಿ ಪರಿಹಾರ ನೀಡಲಾಗುತ್ತದೆ. -ವೈ.ಎಲ್ ಹಂಪಣ್ಣ, ಸಹಾಯಕ ಕೃಷಿ ನಿರ್ದೇಶಕ
ಸುಧೀರ ಎಸ್. ಬಿರಾದಾರ
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.