ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು
Team Udayavani, Jun 11, 2018, 9:44 AM IST
ಚಿಂಚೋಳಿ: ತಾಲೂಕಿನ ರಟಕಲ್ ಗ್ರಾಮದ ಸುತ್ತಲೂ ರವಿವಾರ ಮಧ್ಯಾಹ್ನ ಭಾರಿ ಬಿರುಗಾಳಿ ಮತ್ತು ರಭಸದಿಂದ ಕೂಡಿದ ಮಳೆ ಆದ ಪರಿಣಾಮ ಗ್ರಾಮದ ಹರಿಜನವಾಡದ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿತ್ತು.
ಹುಲಸಗೂಡ ಗ್ರಾಮದಲ್ಲಿ ಗುಡ್ಡದ ಮೇಲಿಂದ ಹರಿದು ಬರುವ ಮಳೆ ನೀರು ಮನೆಯ ಹಿಂಬದಿ ಗೋಡೆಯಿಂದ ಮನೆಯೊಳಗೆ ಹೊಕ್ಕು ಬಾಗಿಲು ಮೂಲಕ ಹೊರ ಹರಿದು ಅಪಾರ ನಷ್ಟವಾಗಿದೆ ಎಂದು ರಟಕಲ್ ಗ್ರಾಪಂ ಉಪಾಧ್ಯಕ್ಷ ಗೌರಿಶಂಕರ ಕಿಣ್ಣಿ ತಿಳಿಸಿದ್ದಾರೆ.
ರಟಕಲ್ ಗ್ರಾಮದಲ್ಲಿ ಮಧ್ಯಾಹ್ನ ಸಿಡಿಲು ಮಿಂಚಿನಿಂದ ಕೂಡಿದ ಆರ್ಭಟದ ಮಳೆ ಆಗಿರುವುದರಿಂದ ಮುಕರಂಬ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದಲ್ಲಿ ಹರಿಯುವ ನಾಲೆಯ ಮಳೆ ನೀರು ಹರಿಜನವಾಡದ ಓಣಿಯ 20 ಮನೆಗಳಿಗೆ ನೀರು ನುಗ್ಗಿ ಸಂಗ್ರಹಿಸಿಟ್ಟಿದ್ದ ದವಸ ಧಾನ್ಯ, ಬಟ್ಟೆ, ಅಡುಗೆ ಸಾಮಗ್ರಿಗಳು, ದಿನಬಳಕೆ ಆಹಾರ ವಸ್ತುಗಳು,ಬಿತ್ತನೆ ಬೀಜ ಮತ್ತು ರಸಗೊಬ್ಬರ, ಕೃಷಿ ಉಪಕರಣಗಳು ಹಾನಿಗೊಳಗಾಗಿವೆ.
ರಟಕಲ್ ಸುತ್ತಲೂ ಭಾರಿ ಮಳೆ ಸುರಿದ್ದರಿಂದ ಹುಲಸಗೂಡ ಗ್ರಾಮದಲ್ಲಿ ಗುಡ್ಡದ ಮೇಲಿಂದ ಹರಿದು ಬರುವ ಮಳೆ ನೀರು ಮನೆಯ ಹಿಂಬದಿ ಗೋಡೆ ಒಡೆದುಕೊಂಡು ಬಂದು ಬಾಗಿಲು ಮೂಲಕ ಹೊರ ಬಂದಿದೆ. ಹೀಗಾಗಿ ಮನೆಯಲ್ಲಿದ್ದ ದವಸ ಧಾನ್ಯ, ಬಿತ್ತನೆ ಬೀಜಗಳು ಹಾನಿಗೊಳಗಾಗಿವೆ.
ರಟಕಲ್ ಗ್ರಾಮದಲ್ಲಿ 2016ರಲ್ಲಿ ಬಿದ್ದ ಭಾರಿ ಮಳೆ ಹರಿಜನವಾಡ ಮತ್ತು ಮಾದಿಗರ ಓಣಿಯಲ್ಲಿ ಇರುವ 40 ಮನೆಗಳಿಗೆ ಮಳೆ ನೀರು ಹೊಕ್ಕು ಅಪಾರ ಹಾನಿಗೊಳಿಸಿತ್ತು. ಕಲಬುರಗಿ-ಚಿಂಚೋಳಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ನಿರ್ಮಿಸಿದ ಅತಿ ಕಿರಿದಾದ ಸೇತುವೆಯಿಂದಾಗಿ ಮಳೆ ನೀರು ಸರಾಗವಾಗಿ ಹರಿದು ಹೋಗದೇ ಬಡವರ ಮನೆ ಸೇರುತ್ತಿದೆ.
ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಶಾಸಕ ಡಾ| ಉಮೇಶ ಜಾಧವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಣ್ಣ ಸೇತುವೆಯನ್ನು ದೊಡ್ಡದಾಗಿ ನಿರ್ಮಿಸಬೇಕು. ಮಳೆಯಿಂದ ಹಾನಿಗೊಳಗಾದವರಿಗೆ ಸರಕಾರ ಪರಿಹಾರ ನೀಡಬೇಕೆಂದು ಜಿಲ್ಲಾ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಜಿಲ್ಲಾ ಕಾಧಿರಿಗಳಿಗೆ ಮನವಿ ಮಾಡಿದ್ದಾರೆ.
ಮಳೆಯಿಂದಾಗಿ ರಟಕಲ್, ಮುಕರಂಬಾ, ಹುಲಸಗೂಡ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಳೆ ನೀರಿಗೆ ಕೊಚ್ಚಿಹೋದ ಕಾಯಿಪಲ್ಲೆ
ಶಹಾಬಾದ: ನಗರದಲ್ಲಿ ರವಿವಾರ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮಳೆಯಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು. ರವಿವಾರ ಮಧ್ಯಾಹ್ನ 2 ಗಂಟೆಯಿಂದ ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಜನರು ಮನೆಯಿಂದ ಹೊರಬರದೆ ಮನೆಯಲ್ಲಿಯೇ ಕಾಲ ಕಳೆಯುವಂತಾಯಿತು. ರವಿವಾರ ನಗರದಲ್ಲಿ ಸಂತೆ ಇರುವ ಕಾರಣ ವಿವಿಧ ಊರುಗಳಿಂದ ಕಾಯಿಪಲ್ಯೆ ಮಾರಾಟ ಮಾಡಲು ಬಂದ ರೈತರಿಗೆ ತೀವ್ರ ತೊಂದರೆಯಾಯಿತು. ಸುರಿದ ಮಳೆ ನೀರಿನಲ್ಲಿ ಕಾಯಿಪಲ್ಲೆಗಳು ಕೊಚ್ಚಿ ಹೋದವು. ಇದರಿಂದ ರೈತರು ನಷ್ಟ ಅನುಭವಿಸಬೇಕಾಯಿತು. ಸುಮಾರು 3ಗಂಟೆ ಸುರಿದ ಮಳೆಯಿಂದಾಗಿ ವಾಹನ ಸಂಚಾರ ವಿರಳವಾಗಿತ್ತು.
ನಗರದ ಖಾಲಿ ನಿವೇಶನಗಳಲ್ಲಿ ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ಮಳೆ ನೀರು ರಸ್ತೆ ಮೇಲೆ ಹರಿದಾಡಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಶರಣ ನಗರ, ರಾಮಾ ಮೊಹಲ್ಲಾ, ಲಕ್ಷ್ಮೀಗಂಜ್, ಇಂಜಿನಫೈಲ್ ಹೀಗೆ ಬಹುತೇಕ ಬಡಾವಣೆಗಳಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದಾಡಿತು. ರಸ್ತೆಯಲ್ಲಿ ಚರಂಡಿ
ನೀರು ಸುಗಮವಾಗಿ ಹರಿಯದೇ ರಸ್ತೆ ಮೇಲೆ ನಿಂತಿತ್ತು. ಇದರಿಂದ ಬೇಸತ್ತ ಜನತೆ ನಗರಸಭೆ ಅಧಿಕಾರಿಗಳಿಗೆ
ಹಿಡಿಶಾಪ ಹಾಕಿದರು. ಸಂತೆಗೆ ಬಂದ ಜನರು ಮಳೆಯಿಂದ ರಕ್ಷಣೆ ಪಡೆಯಲು ವ್ಯಾಪಾರ ಮಳಿಗೆಗಳಿಗೆ ಮಗಿಬಿದಿದ್ದರು. ಅಲ್ಲದೇ ನಗರದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.