ಸ್ಮಾರ್ಟ್ ಕ್ಲಾಸ್‌ನಿಂದ ಹೈಟೆಕ್ ಶಿಕ್ಷಣ ಲಭ್ಯ
Team Udayavani, Feb 3, 2018, 12:35 PM IST
ಅಫಜಲಪುರ: ಖಾಸಗಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ಗಳಿವೆ, ಅಲ್ಲಿ ಹೆಚ್ಚಿನ ಡೊನೆಶನ್ ತುಂಬಿ ಶಾಲೆಗೆ ಹೋಗುವುದಕ್ಕೆ ಬಡ ರೈತರ ಮಕ್ಕಳಿಗೆ ಕಷ್ಟಸಾಧ್ಯ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿಯೂ ಸ್ಮಾರ್ಟ್ ಕ್ಲಾಸ್ ಅಳವಡಿಕೆಯಿಂದ ವಿದ್ಯಾರ್ಥಿಗಳು ಹೈಟೆಕ್ ಶಿಕ್ಷಣ ಪಡೆದುಕೊಳ್ಳಬಹುದು ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ಹೇಳಿದರು.
ತಾಲೂಕಿನ ತೆಲ್ಲೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಲ್ಟೋ ಕಂಪನಿ, ಟೆಲ್ಕೋ ಸೋಲಾರ್ ಲಿಮಿಟೆಡ್ ಗುಲಬರ್ಗಾ, ಗ್ರಾಪಂ ತೆಲ್ಲೂರ, ಇ ಶಾಲಾ ಆಡಳಿತ ಮಂಡಳಿ ಸಹಯೋಗದಲ್ಲಿ 5, 6 ಮತ್ತು 7ನೇ ತರಗತಿಗಳಿಗೆ ಹೈಟೆಕ್ ಶಿಕ್ಷಣ
ಕಲ್ಪಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ಮಾದರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸಾಕಷ್ಟು ಅನುದಾನ ಖರ್ಚು ಮಾಡುತ್ತಿದೆ. ಸರ್ಕಾರದ ಅನುದಾನವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರಿಸುವ ಕಾಲ ಈಗ ಹೋಗಿದೆ. ಸರ್ಕಾರಿ ಶಾಲೆಗಳು ಕೂಡ ಹೈಟೆಕ್ ಆಗುತ್ತಿವೆ. ಬರುವ ದಿನಗಳಲ್ಲಿ
ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗುತ್ತದೆ. ಇದಕ್ಕೂ ಮೊದಲು ತಾಲೂಕಿನ ಬಂದರವಾಡ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್ ಅಳವಡಿಸಲಾಗಿತ್ತು. ಈಗ ಪ್ರಾಥಮಿಕ ಶಾಲೆಯಲ್ಲಿ ಇದೇ ಮೊದಲ ಬಾರಿಗೆ ತೆಲ್ಲೂರ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಅಳವಡಿಸಲಾಗಿದೆ ಎಂದರು. ಬಿಇಒ ವಸಂತ ರಾಠೊಡ ಮಾತನಾಡಿ, ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.
ಶಾಸಕರು ಕೂಡ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು. ತಾಪಂ ಸದಸ್ಯೆ ಪಾರ್ವತಿ ಶಂಕರ ಕಣ್ಣಿ, ಗ್ರಾಪಂ ಅದ್ಯಕ್ಷ ಮಹಾಂತಪ್ಪ ಹುಮ್ಮನ್, ಎಪಿಎಂಸಿ ಅಧ್ಯಕ್ಷ ಶಂಕರಲಿಂಗ ಮೇತ್ರಿ, ಮಾಜಿ ತಾಪಂ ಅಧ್ಯಕ್ಷ ಶಿವಪುತ್ರಪ್ಪ ಕರೂರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಬಿಆರ್‌ಸಿ ಸುಧಾಕರ ನಾಯಕ, ಮುಖ್ಯಶಿಕ್ಷಕಿ ದೇವಮ್ಮ
ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.