ಹೈ.ಕ. ಇತಿಹಾಸ ರಚನೆಗೆ ಶೀಘ್ರ ಕಾರ್ಯಾಗಾರ
Team Udayavani, Aug 31, 2018, 11:56 AM IST
ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶದ ಸಮಗ್ರ ಇತಿಹಾಸ ರಚಿಸುವ ನಿಟ್ಟಿನಲ್ಲಿ ಶೀಘ್ರವೇ ಕಾರ್ಯಾಗಾರ ಏರ್ಪಡಿಸಿ ಪರಿಣಿತರಿಂದ ಅಭಿಪ್ರಾಯ ಸಂಗ್ರಹಿಸಿ ಇತಿಹಾಸ ರಚನೆಗೆ ಮುಂದಾಗಬೇಕೆಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ತಿಳಿಸಿದರು.
ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಇತಿಹಾಸ ರಚನಾ ಸಮಿತಿ ಸಭೆಯ ಅಧ್ಯಕ್ಷತೆ
ವಹಿಸಿ ಮಾತನಾಡಿದ ಅವರು, ಹೈದ್ರಾಬಾದ ಕರ್ನಾಟಕದ ಇತಿಹಾಸದ ಮಾಹಿತಿ ಸಂಗ್ರಹಣೆ ಸುಲಭವಾದ ಕೆಲಸವಲ್ಲ. ಈ ಭಾಗದ ಎಲ್ಲ ವಿಷಯಗಳನ್ನು ಸಂಗ್ರಹಿಸುವುದು ಅವಶ್ಯಕವಾಗಿದೆ. ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಯ ವಿದ್ವಾಂಸರನ್ನು ಕಾರ್ಯಾಗಾರಕ್ಕೆ ಆಹ್ವಾನಿಸಿ ಅವರಿಂದ ಸಮಗ್ರ ಚಿತ್ರಣ ಪಡೆಯಬೇಕು ಎಂದರು.
ಹೈದ್ರಾಬಾದ ಕರ್ನಾಟಕದ ಇತಿಹಾಸವು ಕನ್ನಡ, ಉರ್ದು, ಪರ್ಶಿಯನ್, ಮರಾಠಿ ಹಾಗೂ ಈ ಭಾಗದ ಇನ್ನಿತರೆ ಭಾಷೆಗಳಲ್ಲಿ ಸಂಗ್ರಹವಾಗಿದೆ. ಅವುಗಳನ್ನು ಸಂಗ್ರಹಿಸುವ ಮೂಲಕ ಹೈ.ಕ. ಭಾಗದ ಸಂಪೂರ್ಣ ಇತಿಹಾಸದ ಮಾಹಿತಿ ಸಂಗ್ರಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾಧಿಕಾರಿಗಳಿಗೆ ತಮ್ಮ ಜಿಲ್ಲೆಗೆ ಸಂಬಂಧಿಸಿದ ಇತಿಹಾಸದ ದಾಖಲೆಗಳನ್ನು ಸಲ್ಲಿಸಲು ತಿಳಿಸಬೇಕು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹೈ.ಕ. ಭಾಗದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಸಮಿತಿಗಳನ್ನು ರಚಿಸಿದ್ದಲ್ಲಿ ಮಾಹಿತಿ ಸಂಗ್ರಹಕ್ಕೆ ಅನುಕೂಲವಾಗುವುದು ಎಂದರು. ಇತಿಹಾಸ ರಚನಾ ಸಮಿತಿಯಲ್ಲಿ ಹೈಕ ಭಾಗದ ಎಲ್ಲ ಜಿಲ್ಲೆಯ ಪರಿಣಿತರು ಈ ಸಮಿತಿ ಸದಸ್ಯರಾಗಿದ್ದಾರೆ. ಆಯಾ ಜಿಲ್ಲೆಯ ಸದಸ್ಯರು ಜಿಲ್ಲಾ ಸಮಿತಿಗಳಲ್ಲಿ ಪಾಲ್ಗೊಂಡು
ಇತಿಹಾಸ ರಚನೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ ನೀಡಿದಲ್ಲಿ, ವಿಭಾಗ ಮಟ್ಟದ ಸಮಿತಿಯಲ್ಲಿ ಚರ್ಚಿಸಿ ಕ್ರೋಢೀಕರಿಸಲು ಅನುಕೂಲವಾಗುವುದು ಎಂದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಡಾ| ಸಿ. ಸೋಮಶೇಖರ, ಹೈದ್ರಾಬಾದಕರ್ನಾಟಕ ಇತಿಹಾಸ ರಚನಾ ಸಮಿತಿ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಸದಸ್ಯರಾದ ಡಾ| ಮಾಜಿದ ಡಾಗಿ, ಎನ್.ಎ. ವಹಾಬ್ ಅಂದಲೀಬ್, ಡಾ| ಮೊಹಮ್ಮದ ನಜರುಲ್ಲಾ ಬಾರಿ, ಡಾ| ಬಿ.ಸಿ. ಮಹಾಬಲೇಶ್ವರಪ್ಪ, ಡಾ| ರಾಜೇಂದ್ರ ಪ್ರಸಾದ, ಕೆ.ಎಸ್.ಎನ್. ಚಿಕ್ಕೆರೂರು ಪಾಲ್ಗೊಂಡಿದ್ದರು. ಸಮಿತಿ ಸದಸ್ಯರ ಸಲಹೆ ಸಮಿತಿ ಸದಸ್ಯರು ಕೆಲವು ನಿರ್ದಿಷ್ಟ ಕ್ಷೇತ್ರದಲ್ಲಿ ಪರಿಣಿತರಾಗಿದ್ದು, ಅವರಿಗೆ ಇಷ್ಟವಿರುವ ಕ್ಷೇತ್ರಗಳಲ್ಲಿ ತೊಡಗಿಸಬೇಕು. ಅಂದರೆ, ಹೈಕ ಸ್ವಾತಂತ್ರ್ಯಾ ಚಳವಳಿ ಇತಿಹಾಸ, ಹೈಕ ಕರ್ನಾಟಕ ರಾಜ್ಯದಲ್ಲಿ ವಿಲೀನವಾದ ಇತಿಹಾಸಗಳಂತಹ ವಿಷಯಗಳು.
ಹೈದ್ರಾಬಾದ ಕರ್ನಾಟಕ ಇತಿಹಾಸಕ್ಕೆ ಸಂಬಂಧಿಸಿದಂತೆ ಹಲವಾರು ಪುಸ್ತಕಗಳಿದ್ದು, ಅವುಗಳನ್ನು ಸಂಗ್ರಹಿಸಿ ಗ್ರಂಥಾಲಯ ಸ್ಥಾಪಿಸಬೇಕು. ಹೈದ್ರಾಬಾದ ಕರ್ನಾಟಕ ಇತಿಹಾಸ ಅತಿ ಪುರಾತನವಾಗಿದ್ದು, ಈ ಭಾಗಕ್ಕೆ ಹಲವು ರಾಜಮಹಾರಾಜರು, ಬ್ರಿಟಿಷ್ ಅಧಿಕಾರಿಗಳು, ಬಹಮನಿ ಸುಲ್ತಾನರು, ನಿಜಾಮರು ಕೊಡುಗೆಗಳನ್ನು
ನೀಡಿದ್ದಾರೆ. ಈ ಇತಿಹಾಸದ ಅಧ್ಯಯನ ಕೈಗೊಂಡು ಸಾಮಾಜಿಕ ವ್ಯವಸ್ಥೆ, ಐತಿಹಾಸಿಕ ವಿಷಯಗಳನ್ನು ಸಂಗ್ರಹಿಸಿ ಈ ಭಾಗದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು. ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯಾ ಪೂರ್ವ ಹಾಗೂ ನಂತರದ ಇತಿಹಾಸ ಸಂಗ್ರಹಿಸಿ ಸಮಿತಿ ಸದಸ್ಯರಿಗೆ ವಹಿಸಿದರೆ ಅನುಕೂಲವಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.