ಹೈಕ ಭಾಗ ನಿರ್ಲಕ್ಷ್ಯ: ಶೆಟ್ಟರ್
Team Udayavani, Feb 23, 2018, 10:53 AM IST
ವಿಧಾನಸಭೆ: ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.
2018-19ನೇ ಸಾಲಿನ ಆಯವ್ಯಯಗಳ ಅಂದಾಜು ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಗುರುವಾರ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕೊಟ್ಟಿದ್ದೇವೆ ಎಂದು ಹೇಳಿಕೊಳ್ಳುತ್ತಾ ತನ್ನ ಬೆನ್ನು ತಾನಾ ತಟ್ಟಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಇದುವರೆಗೆ ಈ ಭಾಗಕ್ಕೆ 4512 ಕೋಟಿ ರೂ. ಅನುದಾನ ಘೋಷಿಸಿ ಕೇವಲ 2330 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಅದರಲ್ಲೂ ಖರ್ಚಾಗಿದ್ದು 1851 ಕೋಟಿ ರೂ. ಮಾತ್ರ. ಅಲ್ಲದೆ, ಆ ಭಾಗದಲ್ಲಿ ಖಾಲಿ ಇರುವ 35 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಇದೆಲ್ಲವನ್ನೂ ಗಮನಿಸಿದಾಗ ಸರ್ಕಾರ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದ್ದು ಸ್ಪಷ್ಟವಾಗಿದೆ ಎಂದು ದೂರಿದರು.
ಉ.ಕ. ಬಗ್ಗೆಯೂ ನಿರ್ಲಕ್ಷ್ಯ: ಉತ್ತರ ಕರ್ನಾಟಕದ ಬಗ್ಗೆಯೂ ರಾಜ್ಯ ಸರ್ಕಾರ ತನ್ನ ನಿರ್ಲಕ್ಷ್ಯ ಮುಂದುವರಿಸಿದೆ. ನಂಜುಂಡಪ್ಪ ವರದಿ ಪ್ರಕಾರ ಆ ಭಾಗದ ತಾಲೂಕುಗಳೇ ಹೆಚ್ಚು ಹಿಂದುಳಿದಿವೆ. ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ 13,492 ಕೋಟಿ ರೂ. ಅನುದಾನ ಒದಗಿಸಿದ್ದರೆ, ಇದುವರೆಗೆ 8910 ಕೋಟಿ ರೂ. ಮಾತ್ರ (ಶೇ. 66) ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.