ಪಾದಯಾತ್ರೆ ಬೆಂಬಲಿಸಿ ಜೀಪ್ ಜಾಥಾ
Team Udayavani, Oct 1, 2019, 12:03 PM IST
ಚಿತ್ತಾಪುರ: ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ಪ್ರಯುಕ್ತ ಅ.2ರಂದು ಹಮ್ಮಿಕೊಂಡಿರುವ ಗ್ರಾಮ ಸ್ವರಾಜ್ ಅಭಿಯಾನ ಹಾಗೂ ಜನಸಂಪರ್ಕ ಸಭೆಯಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಅ.2ರಂದು ನಡೆಯುವ ಗ್ರಾಮ ಸ್ವರಾಜ್ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನರ ಮನೆ ಬಾಗಿಲಿಗೆ ಮುಟ್ಟಿಸುವ ಮಹಾದಾಸೆಯಿಂದ ಹಮ್ಮಿಕೊಂಡಿರುವ ಗ್ರಾಮ ಸ್ವರಾಜ್ ಅಭಿಯಾನ ಹಾಗೂ ಜನಸಂಪರ್ಕ ಕಾರ್ಯಕ್ರಮದಲ್ಲಿ ಯಾವುದೇ ಅಡೆತಡೆ ಆಗದಂತೆ ನೋಡಿಕೊಂಡು ಯಶಸ್ವಿ
ಕಾರ್ಯಕ್ರಮವನ್ನಾಗಿ ಮಾಡಲು ಅ ಧಿಕಾರಿಗಳು ಶ್ರಮಿಸಬೇಕು. ಸಾರ್ವಜನಿಕರ ಕುಂದು ಕೊರತೆ ಹಾಗೂ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಇಚ್ಛಾಶಕ್ತಿಯಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಅಧಿಕಾರಿಗಳು, ಸಿಬ್ಬಂದಿಗಳು ಯಾವುದೇ ಕಾರಣಕ್ಕೂ ಗೈರಾಗಬಾರದು ಎಂದರು.
ಬೆಳಗ್ಗೆ 8:00ಗಂಟೆಗೆ ತಹಶೀಲ್ ಕಚೇರಿ ಆವರಣದಲ್ಲಿ ನಿರ್ಮಿಸಿದ ಕೌಂಟರ್‌ಗಳಲ್ಲಿ ಸಂಬಂಧ ಪಟ್ಟ ಇಲಾಖಾವಾರು ಅಧಿಕಾರಿಗಳು ಹಾಜರಿರಬೇಕು. ಅದು ಬಿಟ್ಟು ನಾನು 9:00ಗಂಟೆಗೆ ಬರ್ತೀನಿ ಅಂದ್ರೆ ನಡೆಯಲ್ಲ. ಸಾಯಂಕಾಲ 5 ಗಂಟೆವರೆಗೆ ಕ್ಷೇತ್ರದ ಜನರು ಅನೇಕ ಸಮಸ್ಯೆಗಳನ್ನು ಇಟ್ಟಿಕೊಂಡು ಅರ್ಜಿಗಳನ್ನು ಸಲ್ಲಿಸುತ್ತಾರೆ. ಅವುಗಳೆಲ್ಲವನ್ನು ನೋಡಿಕೊಂಡು ಯಾವ ಕೆಲಸ ಸ್ಥಳದಲ್ಲಿಯೇ ಆಗುತ್ತದೆ. ಯಾವ ಕೆಲಸ ಆಗಲ್ಲ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಜನರಿಗೆ ನೀಡಬೇಕು. ಬೇಕಾ ಬಿಟ್ಟಿ ಆಗಲಾರದ ಕೆಲಸಗಳಿಗೆ ನಾಳೆ ಬನ್ನಿ ನೋಡೋಣ ಎಂದು ಹೇಳಿ ಸತಾಯಿಸಬಾರದು ಎಂದರು.
ಪುರಸಭೆ ಪೌರಕಾರ್ಮಿಕರು ಸ್ಥಳದಲ್ಲಿಯೇ ಇರಬೇಕು. ಬರುವ ಜನರಿಗಾಗಿ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಹೀಗಾಗಿ ಸ್ವತ್ಛತೆಗೆ ಮೊದಲ ಆದ್ಯತೆ ಕೊಡಬೇಕು. ವಾಲೇಂಟರ್ ಇರ್ತಾರೆ. ಅವರಿಗೊ ಕೂಡ ಯಾವ ಕೌಂಟರ್‌ನಲ್ಲಿ ಯಾವ ಕೆಲಸ ಆಗುತ್ತದೆ ಅನ್ನುವ ಮಾಹಿತಿ ಮೊದಲೇ ತಿಳಿ ಹೇಳಬೇಕು. ಅದರಂತೆ ವಾಲೇಂಟರ್ ತಮ್ಮ ಕೆಲಸ ತಾವು ಮಾಡಿಕೊಂಡು ಹೋಗ್ತಾರೆ. ಸಮಸ್ಯೆ ಎಂದು ಬರುವ ಜನರಿಗೆ ಯಾವುದೇ ರೀತಿಯ ಅನ್ಯಾಯ ಆಗದಂತೆ ನೋಡಿಕೊಂಡು ಕೆಲಸ ಮಾಡಿಕೊಡಬೇಕು. ಅವರ ಜತೆಯಲ್ಲಿ ಅಸಭ್ಯವಾಗಿ ವರ್ತಿಸುವುದಾಗಲಿ ಅಥವಾ ಸಿಟ್ಟು ಮಾಡಿಕೊಳ್ಳುವುದಾಗಲಿ ಯಾವೊಬ್ಬ ಅಧಿಕಾರಿಗಳು ಮಾಡಬಾರದು ಎಂದು ಹೇಳಿದರು.
ಸೇಡಂ ಎಸಿ ರಮೇಶ ಕೋಲಾರ್, ಜಿಪಂ ಸದಸ್ಯ ಶಿವರುದ್ರ ಭೀಣಿ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ್, ತಹಶೀಲ್ದಾರ್ ಉಮಾಕಾಂತ ಹಳ್ಳೆ, ಕಾಳಗಿ ತಹಶೀಲ್ದಾರ್ ನೀಲಪ್ರಭ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅನಿತಾ ಪೂಜಾರಿ, ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್‌ಐ ನಟರಾಜ ಲಾಡೆ, ರವೀಂದ್ರ ದಾಮಾ, ಅಭಿಮನ್ಯು, ಡಾ| ಬಸಲಿಂಗಪ್ಪ ಡಿಗ್ಗಿ, ಶ್ರೀಧರ, ಮನೋಜಕುಮಾರ ಗುರಿಕಾರ್, ಶಂಕ್ರಮ್ಮ ಡವಳಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Kuchuku Movie: ಟೀಸರ್‌ನಲ್ಲಿ ಕುಚುಕು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.