ಹಾಡಹಗಲೇ ಮನೆ ಕಳ್ಳತನ
Team Udayavani, Mar 2, 2022, 10:13 AM IST
ಕಲಬುರಗಿ: ನಗರದ ಕುಸನೂರ ರಸ್ತೆಯ ಕೃಷ್ಣಾ ನಗರದಲ್ಲಿನ ಮನೆಯೊಂದಕ್ಕೆ ಹಾಡುಹಗಲೇ ಕನ್ನ ಹಾಕಿ ಚಿನ್ನಾಭರಣ ದೋಚಲಾಗಿದೆ.
ಆಳಂದ ತಾಲೂಕಿನ ಅಂಬಲಗಾ ಗ್ರಾಪಂ ಪಿಡಿಒ ಆಗಿರುವ ಅಮೀತ್ ಕುಮಾರ ಕೊಳ್ಳುರ್ ಅವರ ಮನೆಗೆ ಕನ್ನ ಹಾಕಿ 18 ತೊಲಿ ಚಿನ್ನಾಭರಣ- 21 ತೊಲಿ ಬೆಳ್ಳಿ ಆಭರಣ ಕಳ್ಳತನ ಮಾಡಿದ್ದಾರೆ. ಸೋಮವಾರ ಮಧ್ಯಾಹ್ನವೇ ಈ ಕೃತ್ಯ ನಡೆದಿದೆ.
ಅಮೀತ್‌ಕುಮಾರ ಕರ್ತವ್ಯಕ್ಕಾಗಿ ಬೆಳಗ್ಗೆ ಅಂಬಲಗಾಕ್ಕೆ ಹೋಗಿದ್ದರು. ಇವರ ಮೂವರು ಮಕ್ಕಳು ಶಾಲೆಗೆ ತೆರಳಿದ್ದರು. ಪತ್ನಿ ಮಮ್ಮಾದೇವಿ ಕೆಲಸದ ನಿಮಿತ್ತ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಕಳ್ಳರು ಚಿನ್ನಾಭರಣ ದೋಚಿದ್ದಾರೆ. ಮನೆಯ ಮುಖ್ಯ ದ್ವಾರದ ಕೀಲಿ ಒಡೆದು ಒಳನುಗ್ಗಿದ ಕಳ್ಳರು ಅಲಮಾರಿ ಮುರಿದು ಒಳಗಿದ್ದ ಚಿನ್ನಾಭರಣ ದೋಚಿದ್ದಾರೆ.
ಮಧ್ಯಾಹ್ನ 2ರ ಹೊತ್ತಿಗೆ ಮಮ್ಮಾದೇವಿ ಅವರು ಮನೆಗೆ ಬಂದಾಗ ಕಳ್ಳತನ ನಡೆದಿರುವ ವಿಷಯ ತಿಳಿದುಬಂದಿದೆ. ಒಟ್ಟು ಅಂದಾಜು 7.91 ಲಕ್ಷ ರೂ. ಚಿನ್ನಾಭರಣ ದೋಚಿದ ಬಗ್ಗೆ ವಿಶ್ವವಿದ್ಯಾಲಯ ಠಾಣೆಗೆ ಮಮ್ಮಾದೇವಿ ದೂರು ನೀಡಿದ್ದಾರೆ.
ಎಲ್ಲರೂ ಮನೆಯಿಂದ ಹೊರ ಹೋದಾಗ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿ ಗಳು, ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.