ಅದ್ಧೂರಿ ಅರಸು ಜನ್ಮದಿನಾಚರಣೆ
Team Udayavani, Aug 14, 2018, 10:07 AM IST
ಕಲಬುರಗಿ: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗದ ಅಭಿವೃದ್ಧಿ ಹರಿಕಾರ ದಿ. ಡಿ. ದೇವರಾಜ ಅರಸು ಅವರ 103ನೇ ಜನ್ಮದಿನವನ್ನು ಆ. 20 ರಂದು ಜಿಲ್ಲೆಯಾದ್ಯಂತ ಅದ್ದೂರಿಯಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಡಿ. ದೇವರಾಜ ಅರಸು ಜಯಂತ್ಯುತ್ಸವ ಸಮಿತಿಯು ಸರ್ವಾನುಮತದ ತೀರ್ಮಾನ ಕೈಗೊಂಡಿತು.
ಅಂದು ದೇವರಾಜ ಅರಸು ಭಾವಚಿತ್ರದ ಬೃಹತ್ ಮೆರವಣಿಗೆಯನ್ನು ಅಲಂಕೃತ ವಾಹನದಲ್ಲಿ ಬೆಳಗ್ಗೆ 9ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಪ್ರಾರಂಭಿಸಲು ಹಾಗೂ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕೊನೆಗೊಳಿಸಲು ಮತ್ತು ಮೆರವಣಿಗೆಯಲ್ಲಿ ಕಲಾ ತಂಡಗಳ ವ್ಯವಸ್ಥೆ ಮಾಡಲು ಸಭೆ ನಿರ್ಣಯ ಕೈಗೊಂಡಿತು.
ದಿನಾಚರಣೆ ದಿನದಂದು ಮಧ್ಯಾಹ್ನ 11ಕ್ಕೆ ಡಾ| ಎಸ್.ಎಂ. ಪಂಡಿತ ರಂಗ ಮಂದಿರದಲ್ಲಿ ನಡೆಯುವ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಎಲ್ಲ ಚುನಾಯಿತ ಪ್ರತಿನಿಧಿಗಳನ್ನು ಮುಂಚಿತವಾಗಿ ಆಹ್ವಾನಿಸಲು ತಿಳಿಸಲಾಯಿತು. ವಸತಿ ನಿಲಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್. ಎಸ್.ಎಲ್.ಸಿ., ಪಿ.ಯು.ಸಿ. ಮತ್ತು ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ವಸತಿ ನಿಲಯದಲ್ಲಿ ಪ್ರಬಂಧ, ಭಾಷಣ ಮತ್ತು ರಸಪ್ನಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲು ತಿಳಿಸಿದ ಹೆಚ್ಚುವರಿ ಜಿಲ್ಲಾ ಧಿಕಾರಿಗಳು ಸಮಾಜಕ್ಕೆ ದುಡಿದ ಮಡಿವಾಳ, ಘಿಸಾಡಿ, ಉಪ್ಪಾರ ಹಾಗೂ ಹೆಳವ ಸಮಾಜದ ಮುಖಂಡರನ್ನು ಸನ್ಮಾನಿಸಲು ತಿಳಿಸಿದರು.
ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಈ ಬಾರಿ ನಗರ-ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಕಾರ್ಯಕ್ರಮವನ್ನು ಚುನಾವಣಾ ನೀತಿ ಸಂಹಿತೆಗೆ ಧಕ್ಕೆ ಬಾರದಂತೆ ಆಚರಿಸಬೇಕು. ಎಲ್ಲ ಶಾಲಾ ಕಾಲೇಜುಗಳಲ್ಲಿ ಡಿ. ದೇವರಾಜ ಅರಸು ಜಯಂತಿ ಆಚರಿಸುವಂತೆ ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದರು.
ಅಫಜಲಪುರ: ಹಿಂದುಳಿದ ವರ್ಗಗಳ ನೇತಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜಯಂತಿ ನಿಮಿತ್ತ
ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಇಸ್ಮಾಯಿಲ್ ಮುಲ್ಕಿಸಿಪಾಯಿ ಮೇಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಬಾರಿಯೂ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ಕಳುಹಿಸಿ ಸಭೆಗೆ ಬರುವಂತೆ ಕಡಕ್ ಆದೇಶ ಮಾಡಿದರೂಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈ ಬಾರಿಯಿಂದ ಸಾರ್ವಜನಿಕ ಸಭೆಗಳು, ರಾಷ್ಟ್ರೀಯ ಹಬ್ಬದ ಸಭೆಗಳಿಗೆ
ನೋಟಿಸ್ ನೀಡದೇ ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಮೇಲಾಕಾರಿಗಳಿಗೆ ನೋಟಿಸ್ ನೀಡಲಾಗುತ್ತದೆ ಎಂದು ಎಚ್ಚರಿಸಿದರು.
ಪುರಸಭೆ ಚುನಾವಣೆ ಇರುವುದರಿಂದ ಆ.20ರಂದು ಬೆಳಗ್ಗೆ 9:45ಕ್ಕೆ ಡಿ. ದೇವರಾಜ ಅರಸು ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುವುದಿಲ್ಲ. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಭಾವಚಿತ್ರ ಪೂಜೆ ಮಾತ್ರ ಮಾಡಲಾಗುವುದು. ಉಳಿದಂತೆ ಎಲ್ಲ ಗ್ರಾ.ಪಂ ಕಚೇರಿಗಳು, ಶಾಲಾ ಕಾಲೇಜುಗಳಲ್ಲಿಯೂ ಭಾವಚಿತ್ರ ಪೂಜೆ ಸಲ್ಲಿಸಬೇಕು ಎಂದು
ಹೇಳಿದರು. ಕರವೇ ತಾಲೂಕು ಅಧ್ಯಕ್ಷ ರಾಜು ಉಕ್ಕಲಿ, ಜೈಕರವೇ ತಾಲೂಕು ಅಧ್ಯಕ್ಷ ಸುರೇಶ ಅವಟೆ, ಬಸವರಾಜ ಚಾಂದಕವಟೆ, ಚನ್ನಬಸು ಹಡಪದ ಹಾಗೂ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.