ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆದರೂ ನನಗೇನೂ ಸಮಸ್ಯೆಯಿಲ್ಲ..: ಬಿಜೆಪಿ ಸಂಸದ ಉಮೇಶ ಜಾಧವ್
Team Udayavani, Jul 30, 2023, 4:09 PM IST
ಕಲಬುರಗಿ: ಲೋಕಸಭೆಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿರುವ ಕಾರಣಕ್ಕೆ ಕೇಂದ್ರದ ಮಂತ್ರಿ ಮಾಡಿ ಎಂದು ನಾನು ಡಿಮ್ಯಾಂಡ್ ಮಾಡಿಲ್ಲ. ಆದರೆ ಇಡೀ ದೇಶದಲ್ಲಿ ಹಿಂದುಳಿದ ಬಂಜಾರ ಸಮುದಾಯದಿಂದ ಆಯ್ಕೆಗೊಂಡಿರುವ ಏಕೈಕ ಸಂಸದನಾಗಿ ಕಾರ್ಯನಿರ್ವಹಿಸುತ್ತಿದ್ದು ಅರ್ಹತೆ ಇದೆ ಎಂದು ಸಂಸದ ಡಾ.ಉಮೇಶ ಜಾಧವ್ ಸ್ಪಷ್ಟ ನೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಡಿ… ನಾನು ಜಾಧವ್.. ಅವರು ಮಲ್ಲಿಕಾರ್ಜುನ ಖರ್ಗೆ… ಇಬ್ಬರಿಗೂ ಪ್ರತ್ಯೇಕ ವ್ಯಕ್ತಿತ್ವಗಳಿವೆ. ಇಷ್ಟಕ್ಕೂ ಅವರು ಪ್ರಧಾನಿ ಆಗುವುದಾದರೆ ಅದರಲ್ಲಿ ನನಗೇನೂ ಸಮಸ್ಯೆಯಿಲ್ಲ ಎಂದು ನಸು ನಕ್ಕರು.
ಅದು ಆ (ಕಾಂಗ್ರಸ್) ಪಕ್ಷದ ಸಮಸ್ಯೆ. ಅದಕ್ಕೂ ನನಗೂ ಸಂಬಂಧವಿಲ್ಲ. ನಾನು ಅತ್ಯಂತ ಹಿಂದುಳಿದ ಜಾತಿಯಿಂದ ಬಂದವ. ಒಳ್ಳೆಯ ವಿದ್ಯಾರ್ಹತೆಯಿದೆ. ಮೇಲಾಗಿ ಸಂಸತ್ತಿನಲ್ಲೂ ಮತ್ತು ಹೊರಗೂ ಅತಿ ಹೆಚ್ಚು ಕ್ರಿಯಾಶೀಲ ಸಂಸದ ಎಂಬುದು ಎಲ್ಲರಿಗೂ ಗೊತ್ತಿದೆ. ಇಷ್ಟಕ್ಕೂ ಮಂತ್ರಿ ಸ್ಥಾನ ಸಿಕ್ಕರೂ-ಸಿಗದಿದ್ದರೂ ಪಕ್ಷದಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸುವುದಾಗಿ ಹೇಳಿದರು.
25 ಸ್ಥಾನ ಖಚಿತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಈ ಬಾರಿ 22ರಿಂದ 25 ಸಂಸದರು ಆಯ್ಕೆಗೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದಂತು ನಿಜ ಎಂದ ಜಾಧವ್, ರಾಜ್ಯದ 13 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಯಿದೆ ಎಂಬ ಪ್ರಶ್ನೆಗೆ ನೋಡಿ, ಯಾರಿಗೆ ಟಿಕೆಟ್ ಕೊಟ್ಟರೂ; ಅವರ ಪರವಾಗಿ ನಾವೆಲ್ಲರೂ ಕಾರ್ಯನಿರ್ವಹಿಸುತ್ತೇವೆ. ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಕೇಂದ್ರದಲ್ಲಿ ಪುನಃ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:“ಹಣ, ದುರಹಂಕಾರ, ಅಹಂ…” ಭಾರತೀಯ ಕ್ರಿಕೆಟಿಗರ ವಿರುದ್ಧ ಕಪಿಲ್ ದೇವ್ ಕಿಡಿ
ಕಲಬುರಗಿ ನಗರದ ಸುತ್ತಲೂ ಎರಡನೇ ರಿಂಗ್ ರಸ್ತೆ ನಿರ್ಮಾಣ ಕುರಿತಂತೆ ಇತ್ತೀಚೆಗೆ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ತಾವು ಚರ್ಚಿಸಿದ್ದು, ನಿತ್ಯ ಸುಮಾರು 40 ಸಾವಿರ ವಾಹನಗಳು ಹಾಲಿ ರಿಂಗ್ ರಸ್ತೆ ಮೂಲಕ ಹಾದು ಹೋಗುತ್ತವೆ ಎಂದು ಪ್ರಮುಖ ಮಾಹಿತಿಯನ್ನು ಅವರ ಗಮನಕ್ಕೆ ತಂದಿದ್ದೇನೆ. ಎಲ್ಲ ಮಾಹಿತಿ ಆಲಿಸಿದ ಸಚಿವರು ಆದಷ್ಟು ಶೀಘ್ರ ಪೂರಕ ವರದಿ ತರಿಸಿಕೊಂಡು ಕಾಮಗಾರಿ ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದರು.
ಸಂಸದರ ನಿಧಿ ಬಳಕೆ; ನಿಯಮ ಬದಲು: ಈ ಹಿಂದೆ ಸಂಸದರ ನಿಧಿಯನ್ನು ಖರ್ಚು ಮಾಡಿದ ಬಳಿಕ ಬಳಕೆಯ ಪ್ರಮಾಣಪತ್ರ (ಯುಟಿಲೈಸೇಷನ್ ಸರ್ಟಿಫಿಕೆಟ್) ನೀಡಿದರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿತ್ತು. ಆದರೆ, ಇತ್ತೀಚೆಗೆ ಕೇಂದ್ರ ಸರಕಾರವು ಈ ನಿಟ್ಟಿನಲ್ಲಿ ನಿಯಮಾವಳಿ ಬದಲಿಸಿದೆ. ಹೀಗಾಗಿ, ಇನ್ನು ಮುಂದೆ ಯುಟಿಲೈಸೇಷನ್ ಸರ್ಟಿಫಿಕೆಟ್ ಇಲ್ಲದೆಯೂ ನೇರವಾಗಿ ಸಂಸದರ ಖಾತೆಗೆ ಅನುದಾನ ಜಮಾ ಆಗಲಿದೆ. ಮುಂದಿನ ಮರ‍್ನಾಲ್ಕು ದಿನಗಳಲ್ಲಿ ಈ ಕುರಿತಾದ ಆದೇಶ ಹೊರಬೀಳಲಿದೆ. ಈವರೆಗೆ ತಾವು ಸುಮಾರು ಎರಡುವರೆ ಕೋಟಿ ಅನುದಾನ ಪಡೆದಿದ್ದು, ಇನ್ನೂ ಎಂಟರಿಂದ 10 ಕೋಟಿ ರೂ. ಅನುದಾನ ಬರಬಹುದು ಎಂದು ಸಂಸದ ಡಾ.ಉಮೇಶ್ ಜಾಧವ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶೀಲ್ ನಮೋಶಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಹರ್ಷಾನಂದ ಗುತ್ತೇದಾರ್, ರವಿರಾಜ ಕೊರವಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.