ದೇಶ ಸೇವೆಗೆ ಸಿದ್ಧರಾದರೆ ಪಾದಪೂಜ

Team Udayavani, Apr 1, 2019, 5:06 PM IST

gul–6
ಕಲಬುರಗಿ: ದೇಶದ ಸೇವೆ ಮಾಡುವ ಸನ್ಯಾಸತ್ವ ಸ್ವೀಕರಿಸಿ, ನಾವು ನಿಮ್ಮ ಪಾದಪೂಜೆ ಮಾಡುತ್ತೇವೆ ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ, ಮಾಜಿ ಸಚಿವ ಲಕ್ಷ್ಮಣ ಸವದಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಟಾಂಗ್‌ ನೀಡಿದರು.
ನಗರದ ಶರಣಬಸವೇಶ್ವರ ವಾಣಿಜ್ಯ ಮಹಾ ವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ರವಿವಾರ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ “ಮೈ ಭೀ ಚೌಕಿದಾರ್‌ ಅಭಿಯಾನ’ದ ಭಾಗವಾಗಿ ದೇಶದ ಜನತೆಯೊಂದಿಗೆ ನಡೆದ ಸಂವಾದ ಕಾರ್ಯಕ್ರಮ ವೀಕ್ಷಿಸಿ, ನಂತರ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ ಯಶಸ್ವಿಯಲ್ಲಿ ಶ್ರಮಿಸಿದ್ದ ಸಫಾಯಿ ಕರ್ಮಚಾರಿಗಳ ಪಾದಪೂಜೆ ಮಾಡಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್‌ ಖರ್ಗೆ, ಪಾದ ತೊಳೆಯುವುದರಿಂದ ಕರ್ಮಚಾರಿಗಳ ಉದ್ಧಾರ ಆಗುವುದಾದರೆ ನಮ್ಮ ಪಾದವನ್ನು ತೊಳೆಯಿರಿ ಎಂದು ಹೇಳಿದ್ದಾರೆ. ಆದರೆ, 60 ವರ್ಷ ದೇಶ ಆಳಿದ ಕಾಂಗ್ರೆಸ್‌ ಸಫಾಯಿ ಕರ್ಮಚಾರಿಗಳ ಉದ್ಧಾರಕ್ಕೆ ಏನು ಮಾಡಿದೆ ಎನ್ನುವುದನ್ನು ತಿಳಿಸಲಿ ಎಂದು ತಿರುಗೇಟು ನೀಡಿದರು.
ಪ್ರಧಾನಿ ನರೇಂದ್ರ ಮೋದಿ ತಾವು ಹೇಳಿದಂತೆ ದೇಶಕ್ಕೆ ಅಚ್ಛೆ ದಿನ್‌ಗಳನ್ನು ತಂದಿದ್ದಾರೆ. ಭ್ರಷ್ಟಾಚಾರಿಗಳನ್ನು ರಸ್ತೆಗೆ ತಂದು ನಿಲ್ಲಿಸುತ್ತೇನೆಂದು ಮೋದಿ ಹೇಳಿದ್ದರು. ಅದರಂತೆ ನೋಟ್‌ ಬ್ಯಾನ್‌ ಮಾಡಿ ಮಾಜಿ ಮುಖ್ಯಮಂತ್ರಿಗಳು, ಸಚಿವರನ್ನು ರಸ್ತೆಗೆ ತಂದು ನಿಲ್ಲಿಸಿದ್ದು ಅಚ್ಛೆ ದಿನ್‌ ಅಲ್ವೇ? ಈ ಹಿಂದೆ ಭಾರತೀಯ ಸೈನಿಕರ ಶಿರಚ್ಛೇಧ ಮಾಡಿದರೂ ಯಾರೂ ಕೇಳುತ್ತಿರಲಿಲ್ಲ. ಮೋದಿ ಆಡಳಿತದಲ್ಲಿ 44 ಭಾರತೀಯ ಯೋಧರ ಸಾವಿಗೆ ಪ್ರತೀಕಾರವಾಗಿ 350 ಉಗ್ರರ ಸಂಹಾರ ಮಾಡಲಾಯಿತು. ಆಕಸ್ಮಿಕವಾಗಿ ಗಡಿದಾಟಿದ ಯೋಧ ಅಭಿನಂದನ್‌ ಕೇವಲ ಎರಡೇ ದಿನಗಳಲ್ಲಿ ಜೀವಂತವಾಗಿ ವಾಪಸ್‌ ಬಂದಿದ್ದು ಅಚ್ಛೆ ದಿನ್‌ ಅಲ್ವೇ ಎಂದು ಸಭಿಕರನ್ನು ಪ್ರಶ್ನಿಸಿದರು.
ಮೋದಿ ಅವರು ವಿಜಯ್‌ ಮಲ್ಯ, ನೀರವ್‌ ಮೋದಿ ಅವರಂತ ಉದ್ಯಮಿಗಳ ಚೌಕಿದಾರಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ನವರು ದೂರುತ್ತಿದ್ದಾರೆ. ಆದರೆ, ಯುಪಿಎ ಸರ್ಕಾರದ ಅವಧಿಯಲ್ಲೇ ವಿಜಯ ಮಲ್ಯ, ನೀರವ್‌ ಮೋದಿ ಅಂತವರಿಗೆ ಸಾಲ ನೀಡಿ ಸುಮ್ಮನೆ ಕುಳಿತುಕೊಳ್ಳಲಾಗಿತ್ತು. ಯಾವಾಗ ಮೋದಿ ಅವರು ಸಾಲ ಪಡೆದ ಉದ್ಯಮಿಗಳ ವಿರುದ್ಧ ಬಿಗಿ ಕ್ರಮ ತೆಗೆದುಕೊಂಡರೋ ಆಗ ಅವರು ದೇಶ ತೊರೆದರು. ಈಗ ಅದೇ ಮೋದಿ ಮತ್ತೆ ದೇಶ ತೊರೆದ ಉದ್ಯಮಿಗಳನ್ನು ವಾಪಸ್‌ ಕರೆತರುವ ಚೌಕಿದಾರಿ ಮಾಡುತ್ತಿದ್ದಾರೆ ಎಂದರು.
ಮೋದಿ ದೇಶಕ್ಕೆ ಶ್ರೇಷ್ಠ ಪ್ರಧಾನಿ. ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡುವ ಸಂಕಲ್ಪವನ್ನು ದೇಶದ ಜನತೆ ಮಾಡಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಡಾ| ಉಮೇಶ ಜಾಧವ್‌ ಗೆಲ್ಲುವುದು ಖಚಿತ. ನಂತರ ಉಮೇಶ ಜಾಧವ್‌ ದೆಹಲಿಯಲ್ಲಿ ಇರುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್‌, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಿಜೆಪಿ ನಗರಾಧ್ಯಕ್ಷ, ಎಂಎಲ್‌ಸಿ ಬಿ.ಜಿ. ಪಾಟೀಲ, ಶಾಸಕರಾದ ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ್‌, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ, ಮಾಜಿ ಜಿಪಂ ಅಧ್ಯಕ್ಷ ಅಂಬಾರಾಯ ಅಷ್ಟಗಿ, ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್‌ಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ನಾನು ಮೂರು ವರ್ಷ ಕಾಲ ಕಲಬುರಗಿಯಲ್ಲಿ ಜಿಲ್ಲಾಉಸ್ತವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಇಲ್ಲಿನ ಜನತೆಯ ನಾಡಿಮಿಡಿತ ಸರಿಯಾಗಿ ಬಲ್ಲೆ. ಎಲ್ಲಿ ಯಾವ ಬಟನ್‌ ಒತ್ತಿದರೆ, ಕೆಲಸವಾಗುತ್ತದೆ ಎನ್ನುವುದು ಗೊತ್ತಿದೆ. ನಾನು ಬಟನ್‌ಗಳನ್ನು ಒತ್ತುತ್ತೇನೆ. ಡಾ| ಉಮೇಶ ಜಾಧವ್‌ ಅವರೇ ನೀವು ಧೈರ್ಯವಾಗಿರಿ. ಕಲಬುರಗಿಯಲ್ಲಿ ನಿಮ್ಮ ಗೆಲುವು ನಿಶ್ಚಿತ.
 ಲಕ್ಷ್ಮಣ ಸವದಿ, ಅಧ್ಯಕ್ಷ, ಬಿಜೆಪಿ ರೈತ ಮೋರ್ಚಾ
ದೇಶದ ಯುವಕರು ಕಂಡಂತ ಕನಸು ನನಸು ಆಗಲು ಮೋದಿ ಮತ್ತೂಮ್ಮೆ ಪ್ರಧಾನಿ ಆಗಬೇಕು. ಏ.23ರಂದು ಎಲ್ಲರೂ ಮುಂದೆ ಬಂದು ನನಗೆ ಮತ ಹಾಕಿ ಆರ್ಶೀವಾದ ಮಾಡಬೇಕು. ಆ ಮೂಲಕ ಮೋದಿ ಅವರು ಇನ್ನೊಮ್ಮೆ ಪ್ರಧಾನಿಯಾಗಲು ನಾವು-ನೀವು ಕೊಡುಗೆ ನೀಡೋಣ.
 ಡಾ| ಉಮೇಶ ಜಾಧವ್‌, ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.