ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ : ಬಿಜೆಪಿ ನಾಯಕಿ ಮನೆ ಮೇಲೆ ಸಿಐಡಿ ದಾಳಿ
Team Udayavani, Apr 18, 2022, 6:25 AM IST
ಕಲಬುರಗಿ : ಕಳೆದ ಅಕ್ಟೋಬರ್‌ನಲ್ಲಿ ನಡೆದ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆ ತೀವ್ರಗೊಳಿಸಿರುವ ಸಿಐಡಿ ತಂಡ ರವಿವಾರ ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿದೆ.
ದಾಳಿ ನಡೆಸಿದಾಗ ಮನೆಗೆ ಬೀಗ ಹಾಕಲಾಗಿತ್ತು. ಆಗ ಅಧಿಕಾರಿಗಳು ದಿವ್ಯಾ ಹಾಗರಗಿ ಪತಿ ರಾಜೇಶ ಹಾಗರಗಿ ಅವರನ್ನು ವಿಚಾರಿಸಿದಾಗ ಏನೂ ಮಾಹಿತಿ ಸಿಗಲಿಲ್ಲ. ನಾನು ಹೊಲದಲ್ಲಿರುತ್ತೇನೆ, ನನಗೆ ಇದ್ಯಾವುದು ಗೊತ್ತಿಲ್ಲ ಎಂದು ಹಾರಿಕೆ ಉತ್ತರ ನೀಡಿದರು. ಅನಂತರ ಅಧಿಕಾರಿಗಳು ಬೀಗ ತೆರೆದು ಮನೆ ಶೋಧ ನಡೆಸಿ ದಾಖಲೆ ವಶಪಡಿ
ಸಿಕೊಂಡರು. ಪೊಲೀಸ್ ಪರೀಕ್ಷಾ ಕೇಂದ್ರವಾಗಿದ್ದ ಗೋಕುಲ ನಗರ ದಲ್ಲಿರುವ ಜ್ಞಾನಜ್ಯೋತಿ ಸ್ಕೂಲ್ ದಿವ್ಯಾ ಹಾಗರಗಿ ಒಡೆತನಕ್ಕೆ ಸೇರಿದೆ.
ಪಿಎಸ್‌ಐ ನೇಮಕಾತಿ ಅವ್ಯವಹಾರಕ್ಕೆ ಪುರಾವೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವರು ನೇಮಕಾತಿ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಆದೇಶಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಹಲವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ವರದಿ ಬಂದ ಅನಂತರ ಮುಂದಿನ ಕ್ರಮ ಜರಗಿಸಲಾಗುವುದು.
– ಪ್ರವೀಣ್ ಸೂದ್, ಡಿಜಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.