ಇನ್ನೂ ನಿಲ್ಲದ ಅಕ್ರಮ ಮರಳುಗಾರಿಕೆ
Team Udayavani, May 9, 2017, 4:54 PM IST
ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಇನ್ನೂ ನಿಂತಿಲ್ಲ ಎಂಬುದಕ್ಕೆ ಶಹಾಬಾದ ಸಮೀಪದ ಹೊನಗುಂಟಾ ಗ್ರಾಮದ ವಡ್ಡರವಾಡಿ ಹತ್ತಿರ ರವಿವಾರ ರಾತ್ರಿ ಸಂಭವಿಸಿದ ಘಟನೆಯೊಂದು ಸಾಕ್ಷಿಯಾದಂತಿದೆ. ವಡ್ಡರವಾಡಿ ಹತ್ತಿರ ರವಿವಾರ ರಾತ್ರಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಟ್ರ್ಯಾಕ್ಟರ್ನಲ್ಲಿ ಮರಳು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಆದರೆ ಟ್ರ್ಯಾಕ್ಟರ್ನಲ್ಲಿ ಮರಳು ಸಾಗಾಟಕ್ಕೆ ಅವಕಾಶವೇ ಇಲ್ಲ. ಅಲ್ಲದೇ ಹೊನಗುಂಟಾ ಬಳಿ ಮರಳು ಎತ್ತುವಳಿಗೆ ಸ್ಥಳ ನಿಗದಿ ಮಾಡಿಲ್ಲ. ಇದನ್ನೆಲ್ಲ ಗಮನಿಸಿದರೆ ಅಕ್ರಮ ಮರಳುಗಾರಿಕೆ ತಡೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅಗತ್ಯವಾಗಿದೆ ಎನ್ನುವುದು ಅರ್ಥವಾಗುತ್ತದೆ.
ಜಿಲ್ಲೆಯ ಚಿತ್ತಾಪುರ ತಾಲೂಕು ದಂಡೋತಿ ಹತ್ತಿರದ ಕಾಗಿಣಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್ ಹಾಗೂ ಆಗಿನ ಸೇಡಂ ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗೆಳ್ಳಿ ಜಂಟಿಯಾಗಿ ಕಳೆದ ಮಾರ್ಚ್ 25ರಂದು ದಾಳಿ ನಡೆಸಿದ ನಂತರ ಕೆಲ ವಾರಗಳ ಕಾಲ ಅಕ್ರಮ ಮರಳುಗಾರಿಕೆ ಸ್ಥಗಿತಗೊಂಡಿತ್ತು.
ಆದರೆ ಈಗ ಮತ್ತೆ ಆರಂಭವಾಗಿರುವ ಲಕ್ಷಣಗಳು ಕಂಡು ಬರುತ್ತಿವೆ. ರವಿವಾರ ರಾತ್ರಿ ಶಹಾಬಾದ ಬಳಿ ಟ್ರ್ಯಾಕ್ಟರ್-ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಸಂದರ್ಭದಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಒಬ್ಬನ ಕಾಲು ಮುರಿದಿದ್ದು, ಇನ್ನಿಬ್ಬರಿಗೆ ಗಾಯಗಳಾಗಿವೆ.
ಶಹಾಬಾದ ನಗರದಲ್ಲಿ ಬ್ಯಾಂಡ್ ಬಾರಿಸುವ ಐವರು ಯುವಕರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ವೊಂದರಲ್ಲಿ ಹೊನಗುಂಟಾ ಗ್ರಾಮಕ್ಕೆ ಹೋಗುತ್ತಿದ್ದಾಗ ವಡ್ಡರವಾಡಿ ಹತ್ತಿರ ಮರಳು ತುಂಬಿದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿತ್ತು. ಪರಿಣಾಮ ಐವರನ್ನು ಕಲಬುರಗಿ ಕಾಮರೆಡ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮ್ಮಣ್ಣ ಹಾಗೂ ಅಶೋಕ ಎನ್ನುವರಿಗೆ ಗಂಭೀರ ಸ್ವರೂಪದ ಗಾಯವಾಗಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಶಿವು ಹಾಗೂ ರವಿಗೆ ಗಾಯಗಳಾಗಿದ್ದು ಚೇತರಿಸಿಕೊಂಡಿದ್ದಾರೆ. ಬೈಕ್ಗೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದಿದೆ. ಅಲ್ಲದೇ ಎಕ್ಸೆಲ್ ತುಂಡಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಹಾಬಾದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಯುವಲ್ಲಿ ಪೊಲೀಸರು ಹಾಗೂ ಅಧಿಕಾರಿಗಳು ವಿಫಲವಾಗಿದೆಯೇ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕ್ ಕುಮಾರ ದತ್ತಾ ಅವರನ್ನು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಅಕ್ರಮ ಮರಳುಗಾರಿಕೆ ತಡೆಗೆ ಕಂದಾಯ ಇಲಾಖೆ-ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ಅಗತ್ಯ. ಅಕ್ರಮ ಮರಳು ಸಾಗಾಟ ತಡೆಯಲು ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
* ಹಣಮಂತರಾವ ಭೈರಾಮಡಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.