ಲಕ್ಷಾಂತರ ಮೌಲ್ಯದ ಅಕ್ರಮ ಕೆಂಪು ಮರಳು ವಶ
Team Udayavani, Jul 9, 2019, 3:01 PM IST
ಚಿಂಚೋಳಿ: ಹಲಕೋಡ ಗ್ರಾಮದ ಬಳಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಕೆಂಪು ಉಸುಕನ್ನು ತಹಶೀಲ್ದಾರ್ ಪಂಡಿತ ಬಿರಾದಾರ ದಾಳಿ ನಡೆಸಿ ವಶಪಡಿಸಿಕೊಂಡರು.
ಚಿಂಚೋಳಿ: ತಾಲೂಕಿನ ಹಲಕೊಡಾ ಗ್ರಾಮದ ಹತ್ತಿರ ಹರಿಯುವ ಮುಲ್ಲಾಮಾರಿ ಕಾಗಿಣಾ ನದಿಯಲ್ಲಿನ ಲಕ್ಷಾಂತರ ರೂ. ಬೆಲೆ ಬಾಳುವ ಕೆಂಪು ಮರಳನ್ನು ಹೊಲವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದನ್ನು ತಹಶೀಲ್ದಾರ ಪಂಡಿತ ಬಿರಾದಾರ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಹಲಕೋಡ ಗ್ರಾಮದ ನದಿಯಲ್ಲಿನ ಕೆಂಪು ಉಸುಕು ಹೆಚ್ಚಿನ ಬೆಲೆ ಬಾಳುವುದಾಗಿದ್ದು, ಅಪಾರ ಬೇಡಿಕೆಯಿದೆ. ಹೀಗಾಗಿ ಮರಳು ದಂಧೆಕೋರರು ಅನೇಕ ವರ್ಷಗಳಿಂದ ನದಿಯಲ್ಲಿನ ಉಸುಕನ್ನು ಯಾವುದೇ ಪರವಾನಗಿ ಪಡೆಯದೇ ಟಿಪ್ಪರ್, ಲಾರಿ, ಟ್ರ್ಯಾಕ್ಟರ್, ಟಂಟಂ ಮೂಲಕ ತಾಂಡೂರ, ಚಿಂಚೋಳಿ, ಸೇಡಂ, ಹುಮನಾಬಾದ, ಕಲಬುರಗಿ, ಚಿತ್ತಾಪುರ, ಬೀದರ, ಬಸವಕಲ್ಯಾಣ ಮುಂತಾದ ನಗರ ಪ್ರದೇಶಗಳಿಗೆ ರಾತ್ರಿ-ಹಗಲು ಎನ್ನದೇ ಸಾಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದರು.
ಹಲಕೋಡಾ, ಜಟ್ಟೂರ, ಪೋತಂಗಲ್ ಗ್ರಾಮಗಳ ಹತ್ತಿರ ಕೆಂಪು ಉಸುಕನ್ನು ತೆಗೆಯಲು ಲೀಜ್ ಮೇಲೆ ಕರ್ನಾಟಕ ಮೂಲಭೂತ ಸೌಕರ್ಯಗಳ ನಿಗಮ ನಿಯಮಿತಕ್ಕೆ ವಹಿಸಿಕೊಡಲಾಗಿದೆ. ಆದರೆ ಸರಕಾರಕ್ಕೆ ಯಾವುದೇ ರಾಯಲ್ಟಿ ತುಂಬದೇ ಮತ್ತು ಲೀಜ್ ಪಡೆದುಕೊಳ್ಳದೇ ಅಕ್ರಮವಾಗಿ ಉಸುಕು ಮಾರಾಟ ಮಾಡಲಾಗುತ್ತಿದೆ ಎಂದು ಅನೇಕ ಸಲ ತಹಶೀಲ್ದಾರ್‌ಗೆ, ಪೊಲೀಸರಿಗೆ ಶಸಿರೋಳಿ ತಾಪಂ ಸದಸ್ಯ ವೆಂಕಟರೆಡ್ಡಿ ಪಾಟೀಲ ಜಟ್ಟೂರ ದೂರು ಸಲ್ಲಿಸಿದ್ದರಿಂದ ಈ ದಾಳಿ ನಡೆಸಲಾಗಿದೆ.
ಹಲಕೋಡಾ, ಪೋತಂಗಲ್, ಜಟ್ಟೂರ ಹತ್ತಿರ ಉಸುಕು ಸಾಗಿಸುವ ಟಿಪ್ಪರ್, ಲಾರಿಗಳ ಮೇಲೆ ನಿಗಾ ವಹಿಸಲು ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುತ್ತಿದೆ. ಅಕ್ರಮ ಉಸುಕು ಸಂಗ್ರಹ ಮಾಡಿದ ಮಾಲೀಕರ ವಿರುದ್ಧ ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಂದಾಯ ನಿರೀಕ್ಷಕ ಸುಭಾಷ ಸುಲೇಪೇಟ, ಜೆಇ ಗಿರಿರಾಜ ಸಜ್ಜನಶೆಟ್ಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.