ಅಕ್ರಮ ಸಾಗಾಟ: 600 ಚೀಲ ಅಕ್ಕಿ ಜಪ್ತಿ
Team Udayavani, Jul 22, 2020, 9:32 AM IST
ಕಲಬುರಗಿ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 600 ಚೀಲ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.
ಪಡಿತರ ಅಕ್ಕಿಯನ್ನು ಕಾಳಸಂತೆಗೆ ಸಾಗಿಸಲಾಗುತ್ತಿದೆ ಎಂದು ಇಲಾಖೆಯ ಸಹಾಯವಾಣಿಗೆ ಖಚಿತ ಮಾಹಿತಿ ಬಂದಿದ್ದರಿಂದ ಆಹಾರ ಇಲಾಖೆ ನಿರೀಕ್ಷಕರಾದ ಭಾರತಿ ಸೂರ್ಯಕಾಂತ ಪಾಟೀಲ ನೇತೃತ್ವದಲ್ಲಿ ಅಮರೇಶ, ಶ್ರೀನಿವಾಸ ಹಾಗೂ ಇತರ ಅಧಿಕಾರಿಗಳು ಇಲ್ಲಿನ ರಾಮ ಮಂದಿರ ಬಳಿಯಲ್ಲಿ ಶೋಧ ನಡೆಸಿದಾಗ, ಹೊಟೇಲ್ಯೊಂದರ ಮುಂಭಾಗದಲ್ಲಿ ಲೋಡ್ ಲಾರಿ ನಿಂತಿರುವುದು ಪತ್ತೆಯಾಗಿದೆ.
ಬಳಿಕ ಅಧಿಕಾರಿಗಳು ವಿಚಾರಣೆ ನಡೆಸಲು ಚಾಲಕನ ಬಳಿ ಹೋದಾಗ ಆತ ಪರಾರಿಯಾಗಿದ್ದಾನೆ. ಕೂಡಲೇ ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪಿಎಸ್ಐ ನಾಗಭೂಷಣ ಮತ್ತು ಸಿಬ್ಬಂದಿ ದೌಡಾಯಿಸಿ ಲಾರಿ ಕ್ಲೀನರ್ ಇಸ್ಮಾಯಿಲ್ ಎಂಬಾತನ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಆಗ ಲಾರಿಯಲ್ಲಿ 50 ಕೆಜಿಯ 600 ಚೀಲಗಳಿದ್ದು ಪತ್ತೆಯಾಗಿದೆ. ಅಕ್ಕಿ ಚೀಲಗಳ ಮೇಲೆ ಹರಿಯಾಣ ಸರ್ಕಾರ ಎಂದು ಬರೆದಿದೆ. ಚೀಲ್ಗಳನ್ನು ಬ್ಯಾಗ್ ಮಾಡಿ ಕಳ್ಳತನದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂದು ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.