ಅಪ್ಪಣ್ಣ ಜೀವನ ಪಠ್ಯದಲ್ಲಿ ಅಳವಡಿಸಿ: ಕಂಬಳೇಶ್ವರ ಶ್ರೀ
Team Udayavani, Jul 28, 2018, 2:37 PM IST
ಚಿತ್ತಾಪುರ: 12ನೇ ಶತಮಾನದಲ್ಲಿ ಸಮಾಜದ ಅಂಕು ಡೊಂಕನ್ನು ತಮ್ಮ ವಚನಗಳ ಮೂಲಕ ತಿದ್ದಿ, ಸಮಾಜ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜೀವನ ಚರಿತ್ರೆಯನ್ನು ಪಠ್ಯಕ್ರಮದಲ್ಲಿ ಜಾರಿ ಮಾಡಬೇಕು ಎಂದು ಕಂಬಳೇಶ್ವರ ಮಠದ ಶ್ರೀ ಸೊಮಶೇಖರ ಶಿವಾಚಾರ್ಯರು ನುಡಿದರು.
ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ಆಪ್ತರಲ್ಲಿ ಒಬ್ಬರಾಗಿದ್ದ ಅಪ್ಪಣ್ಣನವರು ಜಾತಿ, ಮತ, ಪಂಥವನ್ನು ಮೀರಿ ಸಮಾಜದಲ್ಲಿನ ಮೂಢನಂಬಿಕೆ ಹೊಗಲಾಡಿಸಲು ಶ್ರಮಿಸಿದ್ದರು ಎಂದರು.
ವಿಶ್ವನಾಥ ಹಡಪದ ಮಾತನಾಡಿ, ಅಪ್ಪಣ್ಣ ಸಮಾಜದಲ್ಲಿ ತಮ್ಮ ತನು ಹಾಗೂ ತಮ್ಮ ಕಸುಬನ್ನು ಕೀಳರಿಮೆಯಿಂದ ಕಾಣಬಾರದು ಎನ್ನುವ ತತ್ವವನ್ನು ತಿಳಿಸಿ, ಅದರಂತೆ ನಡೆದುಕೊಂಡಿದ್ದರು ಎಂದು ಹೇಳಿದರು.
ತಾಲೂಕು ಅಧ್ಯಕ್ಷ ರಾಮಲಿಂಗಪ್ಪ ಹಡಪದ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರೇಡ್-2 ತಹಶೀಲ್ದಾರ ರವೀಂದ್ರ ಧಾಮಾ
ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿಮಮಡಿ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ರುಕೊದ್ದಿನ್, ರಾಜಣ್ಣ ಕರದಾಳ, ನರಹರಿ ಕುಲ್ಕರ್ಣಿ, ಶಿವಶರಣಪ್ಪ, ಮುರಳಿ ಸಾತನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.