ತೊಗರಿಬೇಳೆ ಆಮದಿನಿಂದ ಬೆಲೆ ಪಾತಾಳಕ್ಕೆ


Team Udayavani, Feb 13, 2017, 3:01 PM IST

gul4.jpg

ಕಲಬುರಗಿ: ವಿದೇಶದಿಂದ ದುಬಾರಿ ದರದಲ್ಲಿ ತೊಗರಿ ಆಮದು ಮಾಡಿಕೊಳ್ಳುವುದನ್ನು ಕೂಡಲೇ ಕೇಂದ್ರ ಸರ್ಕಾರ ಸ್ಥಗಿತಗೊಳಿಸಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿ.ಜಿ.ಕೆ. ನಾಯರ್‌ ಒತ್ತಾಯಿಸಿದರು. ಸಿಪಿಐಎಂ ನಗರದ ಸುಪರ ಮಾರ್ಕೆಟ್‌ನಲ್ಲಿ ಹಮ್ಮಿಕೊಂಡಿದ್ದ ಪ್ರಚಾರಾಂದೋಲನದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ತೊಗರಿ ಬೆಳೆಗಾರರು ಬೆಲೆ ಕುಸಿತದಿಂದ ತತ್ತರಿಸುತ್ತಿದ್ದರೂ ಕೇಂದ್ರ ಸರ್ಕಾರ ವಿದೇಶದಿಂದ ತೊಗರಿಯನ್ನು ಪ್ರತಿ ಕ್ವಿಂಟಾಲ್‌ಗೆ 10 ಸಾ.ರೂ. ದರದಲ್ಲಿ ಆಮದು ಮಾಡಿಕೊಳ್ಳುತ್ತಿದೆ ಎಂದರು. ಹೈ.ಕ.ಭಾಗದಲ್ಲಿ ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ತೊಗರಿ ಬೆಳೆಯಲಾಗುತ್ತಿದೆ. ಕೇಂದ್ರ ಸರ್ಕಾರ ಸುಮಾರು 5050 ರೂ. ಬೆಂಬಲ ಬೆಲೆಯನ್ನು ತೊಗರಿಗೆ ಘೋಷಿಸಿದ್ದು, ರಾಜ್ಯ ಸರ್ಕಾರ ಕೇವಲ 450 ರೂ.ಗಳ ಪ್ರೋತ್ಸಾಹಧನ ಘೋಷಿಸಿದೆ. 

ಇದರಿಂದಾಗಿ 5500 ರೂ ಬೆಲೆಯಿದೆ. ಈ ಬೆಲೆ ಸಹ ರೈತರಿಗೆ ಸಿಗುತ್ತಿಲ್ಲ. ಖರೀದಿ ಕೇಂದ್ರಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲವಾದ್ದರಿಂದ 5000 ರೂ.ಗೂ ಕಡಿಮೆ ದರದಲ್ಲಿ ರೈತರು ತಮ್ಮ ತೊಗರಿ ಮಾರಾಟ ಮಾಡುವಂತಹ ದುಸ್ಥಿತಿ ಬಂದಿದೆ ಎಂದರು. ತೊಗರಿ ಪ್ರತಿ ಕ್ವಿಂಟಾಲಿಗೆ ಕನಿಷ್ಠ 7500 ರೂ. ಗಳ ಬೆಲೆ ನೀಡಬೇಕು ಎಂದ ಅವರು, ಈ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತೊಗರಿ ಬೆಳೆಗಾರರ ವಿರೋಧಿ ನೀತಿ ಕೈ ಬಿಡಬೇಕು ಎಂದು ಆಗ್ರಹಿಸಿದರು. 

ಪ್ರಧಾನಿ ನರೇಂದ್ರ ಮೋದಿಯವರು 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ಹಠಾತ್ತನೆ ರದ್ದುಮಾಡಿದ್ದರಿಂದ ಕೃಷಿ, ಕೂಲಿ ಕಾರ್ಮಿಕರ ವಲಯಕ್ಕೆ ಬಹಳಷ್ಟು ತೊಂದರೆಯಾಗಿದೆ. ಅಪಾರ ಪ್ರಮಾಣದ ಕಾರ್ಮಿಕರು ಕೆಲಸವಿಲ್ಲದೇ ತೊಂದರೆಗೀಡಾಗಿದ್ದಾರೆ. ಆದ್ದರಿಂದ ಕೂಡಲೇ ಕೃಷಿ, ಕೂಲಿಕಾರರಿಗೆ ಮಾರಕವಾಗಿರುವ ಬ್ಯಾಂಕ್‌ ಗಳಿಂದ ಹಣ ತೆಗೆಯುವ ಮಿತಿಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಕಿಸಾನ್‌ ಕಾರ್ಡ್‌ಗೆ ಆಧಾರ ಕಾರ್ಡ್‌ ಜೋಡಿಸುವುದನ್ನು ವಿರೋಧಿಸಿದರು. ಸಣ್ಣ ಕೈಗಾರಿಕೆಗಳಿಗೆ ತೆರಿಗೆ ರದ್ದುಪಡಿಸಬೇಕು ಎಂದ ಅವರು, ಆಮದು ಮಾಡಿಕೊಳ್ಳುತ್ತಿರುವ ಬೆಳೆಕಾಳುಗಳ ಮೇಲೆ ಶೇ.30 ರಷ್ಟು ಸುಂಕ ವಿಧಿಸಬೇಕೆಂದು ಒತ್ತಾಯಿಸಿದ ಅವರು, ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಕಳೆದ ಮೂರು ವರ್ಷದಿಂದ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕಿಡಾಗಿದ್ದಾರೆ. ಹೀಗಾಗಿ ಅನೇಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದ್ದರಿಂದ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಬೇಕೆಂದರು. ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕೆಲಸವನ್ನು ಒಂದು ಕುಟುಂಬಕ್ಕೆ 200 ದಿನವೆಂದು ನಿಗದಿ ಮಾಡಲಾಗಿದ್ದು, ಇದನ್ನು 300 ದಿನಕ್ಕೆ ಹೆಚ್ಚಿಸಬೇಕು ಹಾಗೂ ನೆರೆಯ ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಮಾದರಿಯಲ್ಲಿ ಕೂಲಿ ಕಾರ್ಮಿಕರಿಗೆ ಕಲ್ಯಾಣ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು. 

ಕರ್ನಾಟಕ ಪ್ರಾಂತ ರೈತ ಸಂಘದ  ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ, ಬಾಬುರಾವ ಧುತ್ತರಗಾಂವ, ಶರಣಬಸಪ್ಪ ಮಮಶೆಟ್ಟಿ ಹಾಗೂ ಇತರರಿದ್ದರು. ಗಂಗಮ್ಮಾ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.  

ಟಾಪ್ ನ್ಯೂಸ್

Manipal-mara

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Manipal-mara

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.