![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Feb 12, 2022, 4:25 PM IST
ಕಲಬುರಗಿ: ವೃತ್ತಿಪರ ಕೋರ್ಸುಗಳಲ್ಲಿ ಹಾಗೂ ಪದವಿಗಳಲ್ಲಿ ವೃತ್ತಿ ಕೌಶಲ ಹಾಗೂ ಜೀವನ ಸಬಲೀಕರಣ ಸಹ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು.
ನಗರದ ಪಿಡಿಎ ಇಂಜನಿಯರಿಂಗ್ ಕಾಲೇಜ್ ದಲ್ಲಿ ಹಮ್ಮಿಕೊಂಡ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.
ಜಾಗತಿಕವಾಗಿ ನಾವು ಬೆಳೆಯಬೇಕಾದರೆ ಬರೀ ಶಿಕ್ಷಣ ಒಂದೇ ಸಾಲದು. ಅದರ ಜತೆಗೇ ನನಗೆ ಯಾವುದು ಗೊತ್ತಿಲ್ಲ ಎನ್ನುವಂತಾಗಬೇಕು. ಪ್ರಮುಖವಾಗಿ ಜೀವನ ಸಬಲೀಕರಣ ಅಂದರೆ ಹಣ ನಿರ್ವಹಣೆ, ಕಲಿಕೆ ನಿರ್ವಹಣೆ ಸೇರಿದಂತೆ ಇತರ ವೃತ್ತಿ ಕೌಶಲ ಹೊಂದಿರಬೇಕು. ಈ ನಿಟ್ಟಿನಲ್ಲಿ ತರಬೇತಿ ನೀಡಲು ಹಾಗೂ ಉತ್ತಮ ಮಾರ್ಗದರ್ಶನ ನೀಡಲು ಕೆಲವು ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.
ಕಲ್ಯಾಣ ಕರ್ನಾಟಕದಲ್ಲಿ ನಿರುದ್ಯೋಗ ನಿವಾರಣೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಇದಕ್ಕಾಗಿ ಸ್ಟಾರ್ಟ್ ಪ್ ಬಲಪಡಿಸಲಾಗುದು ಎಂದು ಸಚಿವ ಅಶ್ವಥ್ ನಾರಾಯಣ ಇದೇ ಸಂದರ್ಭದಲ್ಲಿ ಹೇಳಿದರು.
ಕೌಶಲ ವಿವಿ ಸ್ಥಾಪನೆಗೆ ಕೈ ಜೋಡಿಸಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ್ ರೇವೂರ ಸಮಾರಂಭದ ಅಧ್ಯಕ್ಷತೆ ವಹಿಸಿ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಯುವಕರು ಹಾಗೂ ವಿದ್ಯಾರ್ಥಿಗಳಲ್ಲಿ ವೃತ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕೌಶಲ ವಿವಿಗೆ ಕೆಕೆ ಆರ್ ಡಿಬಿ ಮಂಡಳಿಯಿಂದ ಮೂಲ ಸೌಕರ್ಯ ಕಲ್ಪಿಸಲು ಬದ್ದತೆ ಹೊಂದಿದೆ ಎಂದು ಹೇಳಿದರು.
ವಿವಿ ಸ್ಥಾಪನೆಗೆ ಕೌಶಲ ಅಭಿವೃದ್ಧಿ ನಿಗಮ ಕೈ ಜೋಡಿಸಬೇಕೆಂದು ವಿನಂತಿಸಿದ ಅಪ್ಪುಗೌಡ, ಪ್ರಧಾನಿ ಮೋದಿ ಅವರ ಉದ್ಯೋಗ ಸೃಷ್ಟಿಸುವ ಮನೋಬಲಕ್ಕೆ ಕೈ ಜೋಡಿಸುತ್ತಿರುವ ಸಚಿವ ಡಾ. ಅಶ್ವಥ್ ನಾರಾಯಣ ಅವರ ಕಾರ್ಯ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ಬೆಂಗಳೂರಿನಲ್ಲಿ ಈ ಭಾಗದಿಂದ ಓದಲು ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು 60 ಕೋ.ರೂ ವೆಚ್ಚದಲ್ಲಿ ವಸತಿ ನಿಲಯ ಸ್ಥಾಪಿಸಲಾಗುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಅವರು ಅಡಿಗಲ್ಲು ನೇರವೇರಿಸಿದ್ದಾರೆ ಎಂದು ವಿವರಿಸಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.