ಹಣಕ್ಕಾಗಿ ಕಿರುಕುಳ: ಬೆಂಕಿ ಹಚ್ಚಿಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ
Team Udayavani, Jun 3, 2021, 9:09 PM IST
ಕಲಬುರಗಿ: ಹಣಕ್ಕಾಗಿ ಗಂಡನ ಮನೆಯುವರು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಸರ್ಕಾರಿ ಸ್ಟಾಫ್ ನರ್ಸ್ ಒಬ್ಬರು ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಶಿವಾಜಿ ನಗರದಲ್ಲಿ ನಡೆದಿದೆ.
38 ವರ್ಷದ ಇಂದಿರಾ ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ಸೇಡಂನ ಆಯುಷ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ತಿಂಗಳಿಗೆ 50 ಸಾವಿರ ರೂ. ಸಂಬಳ ಪಡೆಯುತ್ತಿದ್ದರು.ಮೂಲತಃ ರಾಯಚೂರು ನಗರದ ಮಕ್ತಲ್ ಪೇಟ್‍ನವರಾದ ಇಂದಿರಾ ಅವರನ್ನು 2002ರಲ್ಲಿ ಕಲಬುರಗಿಯ ಸಂಜೀವರೆಡ್ಡಿ ಅವರಿಗೆ ಮದುವೆ ಮಾಡಿಕೊಳ್ಳಲಾಗಿತ್ತು. ಈ ದಂಪತಿಗೆ ಒಂದು ಹೆಣ್ಣು ಮತ್ತು ಗಂಡು ಮಗು ಇದೆ.
ಇದನ್ನೂ ಓದಿ:ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ, ಪ್ಯಾಕೇಜ್ ಘೋಷಣೆ
ಸಿವಿಲ್ ಗುತ್ತಿಗೆದಾರನಾದ ಪತಿ ಸಂಜೀವರೆಡ್ಡಿ, ಮನೆಯ ಮಹಡಿ ಮೇಲೆ ಮತ್ತೊಂದು ಮನೆ ಕಟ್ಟಿಸುತ್ತಿದ್ದಾರೆ. ಇದಕ್ಕಾಗಿ ಹಣ ತರುವಂತೆ ಸಂಜೀವರೆಡ್ಡಿ ಮತ್ತು ಮನೆಯವರು ಪೀಡಿಸುತ್ತಿದ್ದರು. ಇದರಿಂದ ಬೇಸತ್ತ ಇಂದಿರಾ ಬುಧವಾರ ರಾತ್ರಿ ಮನೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗಳ ಸಾವಿನ ಸುದ್ದಿ ತಿಳಿದ ಕುಟುಂಬದವರು, ಕಲಬುರಗಿ ನಗರಕ್ಕೆ ಆಗಮಿಸಿದ್ಧಾರೆ. ಪತಿ ಸಂಜೀವರೆಡ್ಡಿ, ಈತನ ತಾಯಿ ಶಾಂತಾ ಬಾಯಿ, ತಮ್ಮ ಪರ್ವತ್ ರೆಡ್ಡಿ, ಪರ್ವತ್ ರೆಡ್ಡಿ ಪತ್ನಿ ರಾಧಾ ವಿರುದ್ಧ ಇಂದಿರಾ ಅವರ ತಾಯಿ ಲೀಲಾವತಿ ಇಲ್ಲಿನ ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.