ಚಂದ್ರಂಪಳ್ಳಿ ಜಲಾಶಯಕ್ಕೆ ಒಳಹರಿವು ಹೆಚ್ಚಳ
Team Udayavani, Aug 10, 2022, 3:36 PM IST
ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಇರುವ ಚಂದ್ರಂಪಳ್ಳಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿರುವುದರಿಂದ ಜಲಾಶಯಕ್ಕೆ ನಿರಂತರವಾಗಿ ಒಳಹರಿವು ಹೆಚ್ಚುತ್ತಿದೆ. ಚಂದ್ರಂಪಳ್ಳಿ ಜಲಾಶಯ ಗರಿಷ್ಠಮಟ್ಟದ ನಂತರ ಬಂದ ಒಳ ಹರಿವಿನ ನೀರನ್ನು ಅಣೆಕಟ್ಟಿನ ಕೋಡಿ ಮುಖಾಂತರ ನದಿಗೆ ನೀರು ಹರಿ ಬಿಡಲಾಗುತ್ತಿದೆ ಎಂದು ಎಇಇ ಚೇತನ ಕಳಸ್ಕರ ತಿಳಿಸಿದ್ದಾರೆ.
ಚಂದ್ರಂಪಳ್ಳಿ ನದಿ ಸುತ್ತಮುತ್ತಲಿನ ಗ್ರಾಮಗಳು ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದು. ನದಿ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜಾಡುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಕ್ಕಾಗಲಿ ಹಾಗೂ ಇನ್ನಿತರ ಯಾವುದೇ ಕಾರಣಕ್ಕೂ ನದಿಯಲ್ಲಿ ಇಳಿಯಬಾರದು. ನದಿ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಮತ್ತು ಇನ್ನಿತರ ಯಾವುದೇ ಇಲಾಖೆಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತವಾಗಿ ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.