ಹೊರಗುತ್ತಿಗೆ ನೌಕರರಿಂದ ಅನಿರ್ದಿಷ್ಟ ಧರಣಿ
Team Udayavani, Oct 29, 2021, 9:49 AM IST
ಕಲಬುರಗಿ: ಜಿಲ್ಲೆಯ ವಸತಿ ನಿಲಯ ಗಳ ಹೊರಗುತ್ತಿಗೆ ನೌಕರರ ಬಾಕಿ ವೇತನ, ಕೊರೊನಾ ಸಂದರ್ಭದ ರಜೆ ವೇತನ ಮತ್ತು ಇಪಿಎಫ್ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿ ಗುರುವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗಿದೆ.
ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಐದಾರು ತಿಂಗಳ ಬಾಕಿ ವೇತನ ಪಾವತಿಸಿಲ್ಲ. ವೇತನ ಕಡಿತ ಮಾಡಿದ ಇಪಿಎಫ್, ಇಎಸ್‌ಐ ಹಣ ನೌಕರರ ಹೆಸರಿಗೆ ಜಮೆ ಮಾಡಿಲ್ಲ. ಇದರಿಂದ ಹೊರಗುತ್ತಿಗೆ ನೌಕರರು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದಿಂದ ವೇತನ ಹಣ ಬಿಡುಗಡೆಯಾಗಲು ವಿಳಂಬವಾದರೂ ಮ್ಯಾನ್‌ಪವರ್ ಏಜೆನ್ಸಿಗಳು ಕನಿಷ್ಟ ಮೂರು ತಿಂಗಳಾದರೂ ವೇತನ ಪಾವತಿಸಬೇಕೆಂಬ ನಿಯಮವಿದೆ. ಆದರೂ, ಏಜೆನ್ಸಿಗಳು ಐದಾರು ತಿಂಗಳ ಕಾಲ ವೇತನ ಕೊಡದೇ ಮೋಸ ಮಾಡಲಾಗುತ್ತಿದೆ. ಅಲ್ಲದೇ, ಏಜೆನ್ಸಿಗಳಿಗೆ ಪ್ರತಿ ತಿಂಗಳು ನೌಕರರ ಸೇವೆ ಸಲ್ಲಿಸಿದ ಬಗ್ಗೆ ಹಾಜರಾತಿ ಕೊಡದೇ ಇರುವುದರಿಂದ ಪ್ರತಿ ವರ್ಷದಲ್ಲಿ ಒಂದೆರಡು ತಿಂಗಳು ನೌಕರರ ವೇತನ ದುರುಪಯೋಗ ಆಗುತ್ತಿದೆ ಎಂದು ಆರೋಪಿಸಿದರು.
ಹೊರಗುತ್ತಿಗೆ ನೌಕರರ ಸಂಕಷ್ಟ ತಪ್ಪಿಸಲು ಪ್ರತಿ ತಿಂಗಳು 5ನೇ ತಾರೀಖೀನ ಒಳಗಾಗಿ ದುಡಿದ ನೌಕರರ ಹಾಜರಾತಿ ಕೊಡಬೇಕು. 10ನೇ ತಾರೀಖೀನ ಒಳಗಾಗಿ ವೇತನ ಪಾವತಿಸುವ ವ್ಯವಸ್ಥೆ ಮಾಡಬೇಕು. ಅಲ್ಲದೇ, ನೌಕರರಿಗೆ ವೇತನ ಪಾವತಿಸುತ್ತಿರುವ ಏಜೆನ್ಸಿಗಳಿಂದ 2020-21ನೇ ಸಾಲಿನ ತಾತ್ಕಾಲಿಕ ನೇಮಕಾತಿ ಆದೇಶ ಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಉಪಾಧ್ಯಕ್ಷ ಮೇಘರಾಜ ಕಠಾರೆ, ಕಾರ್ಯದರ್ಶಿ ಸುರೇಶ ದೊಡ್ಡಮನಿ, ಮುಖಂಡರಾದ ಭಾಗಣ್ಣ ದೇವನೂರ, ಮಾಳಪ್ಪ ಸಿರಸಗಿ, ರವಿ ಸಿರಸಗಿ, ಪರಶುರಾಮ ಹಡಲಗಿ, ಮಹೆಬೂಬಸಾಬ್, ಶೋಭಾ ಸುಲ್ತಾನ ಪೂರ ಹಾಗೂ ಇನ್ನಿತರ ನೌಕರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.