ಪಕ್ಷಗಳು-ಪಾಲಿಕೆಯಲ್ಲಿ ಸ್ವಾತಂತ್ರ್ಯೋತ್ಸವ
Team Udayavani, Aug 16, 2017, 11:34 AM IST
ಕಲಬುರಗಿ: ದೇಶದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಮುಖವಾಗಿ ವಿವಿಧ ರಾಜಕೀಯ ಪಕ್ಷಗಳ ಕಚೇರಿ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. ಬಿಜೆಪಿ ಕಚೇರಿ: ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಬಿ.ಜಿ. ಪಾಟೀಲ, ಅಮರನಾಥ ಪಾಟೀಲ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಮಾಜಿ ಶಾಸಕ ಸುಭಾಷ ಆರ್. ಗುತ್ತೇದಾರ, ಜಿ.ಪಂ. ಉಪಾಧ್ಯಕ್ಷೆ ಶೋಭಾ ಸಿರಸಗಿ, ಪಕ್ಷದ ಮುಖಂಡರಾದ ಶಾಮರಾವ ಪ್ಯಾಟಿ, ಸಂಜೀವನ್
ಯಾಕಾಪುರ, ರವಿ ಪಾಟೀಲ ಕಮಲಾಪುರ, ಶರಣು ಸಲಗರ ಮುಂತಾದವರಿದ್ದರು. ಕಾಂಗ್ರೆಸ್ ಕಚೇರಿ: ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಭಾಗಣ್ಣಗೌಡ ಪಾಟೀಲ ಸಂಕನೂರ ಧ್ವಜಾರೋಹಣ ನೆರವೇರಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಮಹಾಪೌರ ಶರಣು ಮೋದಿ, ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಅಲ್ಲಾಂಖಾನ್ ಮುಂತಾದವರಿದ್ದರು. ಜೆಡಿಎಸ್ ಕಚೇರಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ತಡಕಲ್ ಧ್ವಜಾರೋಹಣ ನೆರವೇರಿಸಿದರು. ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ದೇವೇಗೌಡ ತೆಲ್ಲೂರ, ಮುಖಂಡರಾದ ಉಸ್ತಾದ ನಾಸೀರ ಹುಸೇನ್, ಮನೋಹರ ಪೊದ್ಧಾರ, ದಿಲೀಪ ಹೊಡಲ್ ಮುಂತಾದವರಿದ್ದರು. ಪಾಲಿಕೆ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮಹಾಪೌರ ಶರಣು ಮೋದಿ ಧ್ವಜಾರೋಹಣ ನೆರವೇರಿಸಿದರು. ಪಾಲಿಕೆ ಆಯುಕ್ತ ಸುನೀಲಕುಮಾರ, ಪಾಲಿಕೆ ಸದಸ್ಯರು, ಅಧಿಕಾರಿಗಳು ಹಾಜರಿದ್ದರು. ಜಿಲ್ಲಾ ಪಂಚಾಯಿತಿ: ಜಿಲ್ಲಾ ಪಂಚಾಯತ್‌ದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸಿಇಒ ಹೆಪ್ಸಿಬಾರಾಣಿ ಕೊರ್ಲಪಾಟಿ ಮುಂತಾವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್ಮಾರ್ಟ್ ಓವನ್ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Lockdown Days: ಲಾಕ್ಡೌನ್ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.