“ಸ್ವತಂತ್ರ ಧರ್ಮ ಆಗೋವರೆಗೂ ವಿಶ್ರಮಿಸಲ್ಲ’


Team Udayavani, Sep 25, 2017, 9:46 AM IST

25-STATE-9.jpg

ಕಲಬುರಗಿ (ಡಾ|ಎಂ.ಎಂ. ಕಲಬುರ್ಗಿ ವೇದಿಕೆ): “ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಸಿಗುವವರೆಗೂ ವಿಶ್ರಮಿಸುವುದಿಲ್ಲ’ ಎಂದು ನಗರದಲ್ಲಿ ಭಾನುವಾರ ನಡೆದ ಲಿಂಗಾಯತ ಮಹಾರ್ಯಾಲಿ-ಮಹಾ ಸಮಾವೇಶದಲ್ಲಿ ಲಿಂಗಾಯತ ಸಮನ್ವಯ ಸಮಿತಿ ಸಂಘಟಕರು, ನಾಡಿನ ವಿವಿಧ ಮಠಾಧೀಶರು, ಸಚಿವರು-ಶಾಸಕರು ಒಕ್ಕೊರಲದ ಘೋಷಣೆ ಮಾಡಿದರು.

ನಗರದ ನೂತನ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮಹಾರ್ಯಾಲಿ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನಸಾಗರ ನಡುವೆ ಈ ಘೋಷಣೆ ಮಾಡಿ, ಮುಂದಿನ ದಿನಗಳಲ್ಲಿ ರಾಜ್ಯ ರಾಜಧಾನಿ ಸೇರಿ ಇತರೆಡೆ ಹೋರಾಟದ ರ್ಯಾಲಿಗಳನ್ನು ಹಿಂದೆಂದಿಗಿಂತಲೂ ಯಶಸ್ವಿ ಯಾಗಿ ಸಂಘಟಿಸಲಾಗುವುದು. ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿಯಾದರೂ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯಲಾಗುವುದು ಎಂದು ಪ್ರಕಟಿಸಿದರು. ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಮಹಾರ್ಯಾಲಿ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಮಾತನಾಡಿ, “12ನೇ ಶತಮಾನದ ಬಸವಣ್ಣನವರ ಕಲ್ಯಾಣ ಕ್ರಾಂತಿ ಈಗ ಪುನರಾವರ್ತನೆ ಮೂಲಕ ಸ್ವತಂತ್ರ ಧರ್ಮ ಪಡೆಯಬೇಕಾಗಿದೆ. ಹೀಗಾಗಿಯೇ ಸೆ.28ರಂದು ಚಿತ್ರದುರ್ಗದಲ್ಲಿ, ನವೆಂಬರ್‌ 5ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ, ನ.19ರಂದು ವಿಜಯಪುರದಲ್ಲಿ ಲಿಂಗಾಯತ ಮಹಾರ್ಯಾಲಿ ಆಯೋಜಿಸಲು ನಿರ್ಧರಿಸಲಾಗಿದೆ. ಕೊನೆಯ ದಾಗಿ ಡಿ. 10ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಮಹಾರ್ಯಾಲಿ ಆಯೋಜಿಸಿ 20ರಿಂದ 25 ಲಕ್ಷ ಜನರನ್ನು ಸೇರಿಸುವ ಮೂಲಕ ರಾಜ್ಯದಲ್ಲಿ
ಹಿಂದೆಂದೂ ಆಗದ ಐತಿಹಾಸಿಕ ಮಹಾರ್ಯಾಲಿ ನಡೆಸಿ ಬಸವ ಶಕ್ತಿ ಪ್ರದರ್ಶನ ತೋರಿಸಲಾಗುವುದು’ ಎಂದು ಹೇಳಿದರು.

ರಾಷ್ಟ್ರೀಯ ಬಸವ ಸೇನಾ ಅಸ್ತಿತ್ವಕ್ಕೆ: ಧರ್ಮದ ರಕ್ಷಣೆ ಹಾಗೂ ಸಮಾಜದಲ್ಲಿನ ಅನ್ಯಾಯ ತಡೆಗಟ್ಟಲು ರಾಷ್ಟ್ರೀಯ ಬಸವ ಸೇನಾ ಅಸ್ತಿತ್ವಕ್ಕೆ ತರಲಾಗಿದ್ದು, ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ ಕುಲಕರ್ಣಿ ಅವರೇ ಸೇನಾದ ರಾಷ್ಟ್ರೀಯ ಅಧ್ಯಕ್ಷರು ಎಂದು ಸಚಿವ ಎಂ.ಬಿ. ಪಾಟೀಲ ಘೋಷಿಸಿದರು. “ಕಣ್ಣಿನಿಂದ ಕಂಡಿದ್ದು, ಕಿವಿಯಿಂದ ಕೇಳಿದ್ದನ್ನು ಸತ್ಯದಿಂದಲೇ ಹೇಳಿದ್ದೇನೆ’ ಎಂದು ಪುನರು ಚ್ಚರಿಸಿದ ಸಚಿವ ಪಾಟೀಲ, “ಕೆಲವರು ಷಡ್ಯಂತ್ರ ರೂಪಿಸಿದರು. ಆದರೆ ಒಟ್ಟಾರೆ ಈ ಪ್ರಕರಣಕ್ಕೆ ವಿರಾಮ ಹಾಕಿರುವುದಾಗಿ’ ಹೇಳಿದರು.

ಶರಣಬಸವೇಶ್ವರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ, ಗದಗ ತೋಂಟದಾರ್ಯ ಮಠದ ಡಾ| ಸಿದ್ದಲಿಂಗ ಸ್ವಾಮಿಗಳು, ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಸಚಿವ ಬಸವರಾಜ ರಾಯರಡ್ಡಿ ಸೇರಿ ಇತರರು ಮಾತನಾಡಿದರು. ಶಾಸಕ ಬಿ.ಆರ್‌. ಪಾಟೀಲ ಸ್ವಾಗತಿಸಿದರು. ಸಚಿವ ಡಾ| ಶರಣಪ್ರಕಾಶ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಐಎಎಸ್‌ ಅಧಿಕಾರಿ ಡಾ| ಶಿವಾನಂದ ಜಾಮದಾರ ವಿಷಯ ಮಂಡಿಸಿದರು. ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಗಳು, ಭಾಲ್ಕಿ ಚನ್ನಬಸವ ಪಟ್ಟದ್ದೇವರು, ಬೀದರನ ಅಕ್ಕ ಅನ್ನಪೂರ್ಣ, ನಗನೂರಿನ ಸಿದ್ಧರಾಮ ಶಿವಯೋಗಿಗಳು, ಮಹಾರಾಷ್ಟ್ರದ ಶಿವಲಿಂಗ ಶಿವಾಚಾರ್ಯರು, ಶ್ರೀಶೈಲಂ ಸಾರಂಗಮಠದ ಡಾ| ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು, ಬೆಲ್ದಾಳದ ಸಿದ್ಧರಾಮ ಶರಣರು, ನಿಜಗುಣಾನಂದ ಸ್ವಾಮಿಗಳು, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಶಾಸಕ ಡಾ|ಎ.ಬಿ.ಮಲಕರೆಡ್ಡಿ ಇದ್ದರು. 

ಇನ್ಮುಂದೆ ವಚನದೀಪ್ತಿ ಪ್ರಕಟಿಸಲ್ಲ
ವಚನದೀಪ್ತಿ ಕೃತಿ ಮೂಲಕ ಬಸವಣ್ಣನವರ ವಚನಾಂಕಿತ ಬದಲಾವಣೆ ಮಾಡಿ ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ, ಕೃತಿ ನಿಷೇಧ ಕುರಿತು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ಸ್ವಾಗತಿಸಿದರಲ್ಲದೇ “ಕೃತಿ ಮರು ಪ್ರಕಟಿಸುವುದಿಲ್ಲ’ ಎಂದು ಮಹಾರ್ಯಾಲಿಯಲ್ಲಿ ಘೋಷಿಸಿದರು. ಬಸವಣ್ಣನವರನ್ನು ಅಣ್ಣ ಎನ್ನದೇ ಅಪ್ಪ ಎಂದು ಕರೆಯುವಂತೆ ಹೇಳಿದ ಮಾತೆ ಮಹಾದೇವಿ, ಅಣ್ಣ ಎಂದರೆ ಅಪ್ಪ ಯಾರು ಎಂಬ ಪ್ರಶ್ನೆ ಎದುರಾಗುತ್ತದೆ. ಬಸವಣ್ಣನವರೇ ಲಿಂಗಾಯತ ಧರ್ಮದ ಸ್ಥಾಪಕರಾಗಿದ್ದರಿಂದ ಅಪ್ಪ ಎಂದು ಕರೆಯುವಂತೆ ಹೇಳಿದರು.

ಸಮನ್ವಯ ಸಮಿತಿ ರಚನೆಯಾಗಿಲ್ಲ 
ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್‌ ಸದಸ್ಯ ಬಸವ ರಾಜ ಹೊರಟ್ಟಿ ಮಾತನಾಡಿ, ವೀರಶೈವ ಹಾಗೂ ಲಿಂಗಾಯತ ನಡುವೆ ಸಮನ್ವಯ ತರುವ ನಿಟ್ಟಿನಲ್ಲಿ ಇಲ್ಲಿಯವರೆಗೆ ಯಾವುದೇ ಸಮಿತಿ ರಚನೆಯಾಗಿಲ್ಲ. ಸಮಿತಿ ರಚನೆಯಿಂದ ಏನೂ ಆಗುವುದಿಲ್ಲ. ವೀರಶೈವ ಬಿಟ್ಟು ಬಂದರೆ ಮಾತ್ರ ಒಮ್ಮತವಾಗುತ್ತದೆ. ಎಲ್ಲ ಕ್ಕಿಂತ ಮುಖ್ಯವಾಗಿ ಇಲ್ಲ-ಸಲ್ಲದ್ದನ್ನು ಮುಂದೆ ಮಾಡಿ ಬಸವಣ್ಣನ ವಿಷಯಕ್ಕೆ ಬಂದರೆ ನೆಟ್ಟಗಿರುವುದಿಲ್ಲ ಎಂದು ಹೇಳಿದರು.

ಲಿಂಗಾಯತ ಸಮುದಾಯದ ರ್ಯಾಲಿಗೂ, ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಚಿವರು ಲಿಂಗಾಯತ ರ್ಯಾಲಿಯಲ್ಲಿ ಭಾಗಿಯಾಗುವುದು ಅವರ ವೈಯಕ್ತಿಕ ವಿಚಾರ.
ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.