ಜೀವನದಲ್ಲಿ ವಿಜ್ಞಾನ ಅಳವಡಿಸಿಕೊಳ್ಳಿ

Team Udayavani, Aug 10, 2017, 3:11 PM IST

10-GUB-1.jpg

ಕಲಬುರಗಿ: ವಿಜ್ಞಾನವನ್ನು ಕೇವಲ ಪಠ್ಯಕ್ಕೋಸ್ಕರ ಓದಲಾರದೇ ಜೀವನದಲ್ಲಿ ಮೈಗೂಡಿಸಿಕೊಂಡು, ವೈಜ್ಞಾನಿಕ ದೃಷ್ಟಿಕೋನ ಬೆಳೆಯುವ ರೀತಿಯಲ್ಲಿ ಅಧ್ಯಯನ ಮಾಡಬೇಕೆಂದು ಕೇಂದ್ರೀಯ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ| ಜಿ.ಎಸ್‌ .ನಾಯಕ ಹೇಳಿದರು.

ಅವರು ಬ್ರೆಕ್‌ ಥ್ರೂ ಸೈನ್ಸ್‌ ಸೊಸೈಟಿ ದೇಶದಾದ್ಯಂತ ಸಂಘಟಿಸಿದ್ದ “ವಿಜ್ಞಾನಕ್ಕಾಗಿ ಭಾರತ ನಡಿಗೆ’ ಗೆ ಬಾವುಟ ತೋರಿಸಿ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು, ಯುವಜನರು ಸಮಾಜದಲ್ಲಿ ಯಾರೇ ಆಗಲಿ ಏನಾದರೂ ಹೇಳಿದರೆ ಅದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬಾರದು ಎಂದರು. ಪ್ರತಿಯೊಂದನ್ನು ಪರೀಕ್ಷಿಸಿ ಅದರ ಸತ್ಯಾಸತ್ಯತೆ ತಿಳಿದು ಒಪ್ಪಿಕೊಳ್ಳಬೇಕು. ತಂತ್ರಜ್ಞಾನ ಎಷ್ಟೇ ಬೆಳೆದರೂ ಇಂದಿಗೂ ದೇಶದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತೀಯತೆಯಿರುವುದು ವಿಷಾದನೀಯ. ಇವುಗಳನ್ನು ತೊಡೆದುಹಾಕಲು ವೈಜ್ಞಾನಿಕ ಮನೋಭಾವದ ಅವಶ್ಯಕತೆ ತುಂಬಾ ಇದೆ. ವಿಜ್ಞಾನವನ್ನು ನಾವು ಇಂದು ಪೋಷಿಸುವ ಹಂತಕ್ಕೆ ಬಂದಿದ್ದೇವೆ. ಇದರ ಬಗ್ಗೆ ವಿದ್ಯಾರ್ಥಿಗಳು, ಯುವಜನರು ಜಾಗರೂಕರಾಗಿ ಇರಬೇಕು ಎಂದರು.

ಇಂದು ಕ್ವಿಟ್‌ ಇಂಡಿಯಾ ಚಳವಳಿಯ 75 ನೇ ವರ್ಷದ ಕಾರ್ಯಕ್ರಮ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ನಾವು ಭಾರತದ ಎಲ್ಲಾ ಸಮಸ್ಯೆಗಳಿಗೆ ಕ್ವಿಟ್‌ ಹೇಳಬೇಕಿದೆ ಎಂದರು. ಗುಲಬರ್ಗಾ ವಿವಿ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ| ರಮೇಶ ಲಂಡನಕರ್‌ ಮಾತನಾಡಿ, ಈ ವರ್ಷದ ಏ.22 ರಂದು ವಿಶ್ವದ 600 ಪ್ರಮುಖ ನಗರಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ವಿಜ್ಞಾನಿಗಳು ಹಾಗೂ ವಿಜ್ಞಾನಾಸಕ್ತರು ವಿಜ್ಞಾನಕ್ಕೆ ಹೆಚ್ಚಿನ ಧನಸಹಾಯ ನೀಡಬೇಕು ಹಾಗೂ ಸರ್ಕಾರದ ನೀತಿಗಳು ವೈಜ್ಞಾನಿಕ ಪುರಾವೆಗಳನ್ನು ಆಧರಿಸಿರಬೇಕೆಂದು ಒತ್ತಾಯಿಸಿ , ವಿಜ್ಞಾನಕ್ಕಾಗಿ ನಡಿಗೆ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.

ವಿಶ್ವಮಟ್ಟದ ಪ್ರಯತ್ನಕ್ಕೆ ಪೂರಕವಾಗಿ ಭಾರತದಲ್ಲೂ ಈ ನಡಿಗೆ ಸಂಘಟಿಸಲು ವಿಜ್ಞಾನಿಗಳು ಮುಂದಾಗಿದ್ದಾರೆ. ಏಕೆಂದರೆ ಈ ಅಭಿಯಾನದ ಬಹುತೇಕ ಅಂಶಗಳು ನಮ್ಮ ದೇಶಕ್ಕೂ ಅನ್ವಯವಾಗುತ್ತವೆ. ಈ ಕರೆಗೆ ಓಗೊಟ್ಟು ಬ್ರೆಕ್‌ಥ್ರೂ ಸೈನ್ಸ್‌ ಸೊಸೈಟಿ ದೇಶಾದ್ಯಂತ “ವಿಜ್ಞಾನಕ್ಕಾಗಿ ಭಾರತ  ನಡಿಗೆ’ಯನ್ನು ಸಂಘಟಿಸಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಬ್ರೆಕ್‌ ಥ್ರೂ ಸೈನ್ಸ್‌ ಸೊಸೈಟಿ ಜಿಲ್ಲಾಧ್ಯಕ್ಷೆ ಅಭಯಾ ದಿವಾಕರ ಮಾತನಾಡಿ, ದೇಶಾದ್ಯಂತ ವಿಜ್ಞಾನಿಗಳು ಪ್ರಯೋಗಾಲಯಗಳನ್ನು ಬಿಟ್ಟು ಸರ್ಕಾರಗಳು ವಿಜ್ಞಾನಕ್ಕಾಗಿ ಹಾಗೂ ಶಿಕ್ಷಣಕ್ಕಾಗಿ ಹೆಚ್ಚಿನ ಅನುದಾನ ನೀಡಬೇಕು ಎಂದು
ಹೇಳಿದರು. 

ಇತ್ತಿಚೆಗೆ ನಿಧನರಾದ ಖ್ಯಾತ ವಿಜ್ಞಾನಿ ಪ್ರೊ| ಯು. ಆರ್‌.ರಾವ್‌, ಪ್ರೊ| ಯಶಪಾಲ, ಪ್ರೊ| ಪಿ.ಎಂ. ಭಾರ್ಗವ ಅವರ ಭಾವಚಿತ್ರಕ್ಕೆ ಪುಷ್ಪಗುತ್ಛವಿಟ್ಟು ನಮನ ಸಲ್ಲಿಸಲಾಯಿತು. ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ವಿಜ್ಞಾನಾಸಕ್ತರು ಮಿನಿವಿಧಾನಸೌಧದಿಂದ ಟೌನ್‌ಹಾಲ್‌ವರೆಗೆ ನಡೆದ ನಡಿಗೆಯಲ್ಲಿ ಭಾಗವಹಿಸಿದ್ದರು. ರಶ್ಮಿ ರಾಜಗಿರೆ ವಂದಿಸಿದರು.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.