ಕಸಾಯಿಖಾನೆ ರದ್ದುಪಡಿಸಲು ಒತ್ತಾಯ
Team Udayavani, Sep 10, 2017, 4:49 PM IST
ಚಿಂಚೋಳಿ: ಪುರಸಭೆ ವ್ಯಾಪ್ತಿಯ ಹೊರವಲಯದಲ್ಲಿ ಇರುವ ಹಾಳು ಬೊಮ್ಮನಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಕಸಾಯಿಖಾನೆ ಪರವಾನಗಿ ರದ್ದುಪಡಿಸುವಂತೆ ಒತ್ತಾಯಿಸಿ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಭೀಮಾ ಮಿಷನ್ ಸಂಘದ ಕಾರ್ಯಕರ್ತರು, ವಿಎಚ್‌ಪಿ ಮುಖಂಡರು ಮತ್ತು ಗ್ರಾಮಸ್ಥರು ಶನಿವಾರ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿ ಮೇಲೆ ಬೃಹತ್ ಪ್ರತಿಭಟನಾ ರ್ಯಾಲಿ ಮತ್ತು ರಸ್ತೆ ತಡೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಸುಲೇಪೇಟ ಖಟ್ವಾಂಗೇಶ್ವರ ಮಠದ ಪೂಜ್ಯ ಗುರುಲಿಂಗ ಮಹಾಸ್ವಾಮೀಜಿ ಮಾತನಾಡಿ, ನಮ್ಮ ದೇಶದಲ್ಲಿ ಗೋಮಾತೆಯನ್ನು ಪೂಜಿಸುವುದು ಅನೇಕ ವರ್ಷಗಳಿಂದ ನಡೆಯುತ್ತಿರುವ ಸಂಪ್ರದಾಯವಾಗಿದೆ. ಪ್ರಾಣಿಗಳ ವಧೆ ಮಾಡುವುದು ಸರಿಯಲ್ಲ. ಯಾವುದೇ ಪ್ರಾಣಿಗಳ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ. ಚಿಂಚೋಳಿ ಪಟ್ಟಣದ ಬೊಮ್ಮನಳ್ಳಿ ಗ್ರಾಮದ ಸರ್ವೇ ನಂ.43ರಲ್ಲಿ 2ಎಕರೆ ಜಮೀನಿನ ಪಕ್ಕದಲ್ಲಿಯೇ ಶ್ರೀ ಮೌನೇಶ್ವರ ದೇವಾಲಯ, ಚಿಂಚೋಳಿ ಸಕ್ಕರೆ ಕಾರ್ಖಾನೆ, ಫಲವತ್ತಾದ ಕೃಷಿ ಭೂಮಿಗಳಿವೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭಿಸಬೇಕಾಗಿದೆ. ಇದರಿಂದಾಗಿ ಆರೋಗ್ಯ ಮತ್ತು ಪರಿಸರ ಮೇಲೆ ತುಂಬಾ ಗಂಭೀರ ಪರಿಣಾಮ ಬೀರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರಕಾರ ಕೂಡಲೇ ಪರವಾನಗಿ ರದ್ದು ಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ಭೀಮಾ ಮಿಷನ್ ಅಧ್ಯಕ್ಷ ಭೀಮಶೆಟ್ಟಿ ಮುಕ್ಕಾ ಮಾತನಾಡಿ, ತಾಲೂಕಿನಲ್ಲಿ ಇಂತಹ ಕಸಾಯಿಖಾನೆ ಪ್ರಾರಂಭಿಸದಂತೆ ಜಿಲ್ಲಾಧಿಕಾರಿಗಳಿಗೆ, ಪುರಸಭೆ ಮುಖ್ಯಾಧಿ ಕಾರಿಗಳಿಗೆ ಅನೇಕ ಸಲ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗಿದೆ. ಕಸಾಯಿಖಾನೆ ಪ್ರಾರಂಭಿಸಲು ಶಾಸಕ ಡಾ| ಉಮೇಶ ಜಾಧವ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಆದರೂ
ಮನವಿಗೆ ಸ್ಪಂದಿಸಿರುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶ್ರೀಧರ ಪಾಟೀಲ, ಮಧುಸೂಧನ ಕಾಟಾಪುರ, ಮಾಣಿಕರಾವ್ ಗುಲಗುಂಜಿ, ಸುಧಾಕರ ಪಾಟೀಲ, ವೀರಣ್ಣ ಬೋವಿ, ಅನೀಲ ಕಂಟಿ, ವಿಎಚ್‌ಪಿ ಮುಖಂಡ ರೇವಣಸಿದ್ದಪ್ಪ ಮೋಘಾ ಮಾತನಾಡಿದರು. ಮಿರಿಯಾಣ, ಕಲ್ಲೂರ, ಸೋಮಲಿಂಗದಳ್ಳಿ ಗ್ರಾಮಸ್ಥರು ಬೆಂಬಲ ನೀಡಿದರು. ಮನವಿ ಪತ್ರವನ್ನು ತಹಶೀಲ್ದಾರ ಅರುಣಕುಮಾರ ಕುಲಕರ್ಣಿಗೆ ಸಲ್ಲಿಸಲಾಯಿತು. ಮಿರಿಯಾಣ ಪೊಲೀಸರು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.